ಇಂಗ್ಲೆಂಡ್ ವಿರುದ್ಧದ ವಿಶ್ವಕಪ್ ಆರಂಭಿಕ ಪಂದ್ಯಕ್ಕೆ ಕೇನ್ ವಿಲಿಯಮ್ಸನ್ ಅಲಭ್ಯ..!

|

Updated on: Sep 29, 2023 | 3:05 PM

ODI World Cup 2023: ಏಕದಿನ ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಅಕ್ಟೋಬರ್ 5 ರಂದು ಈ ವಿಶ್ವಕಪ್ ಉದ್ಘಾಟನಾ ಪಂದ್ಯ ನಡೆಯಲ್ಲಿದೆ. ಆ ಪಂದ್ಯಕ್ಕೆ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ.

ಇಂಗ್ಲೆಂಡ್ ವಿರುದ್ಧದ ವಿಶ್ವಕಪ್ ಆರಂಭಿಕ ಪಂದ್ಯಕ್ಕೆ ಕೇನ್ ವಿಲಿಯಮ್ಸನ್ ಅಲಭ್ಯ..!
ಕೇನ್ ವಿಲಿಯಮ್ಸನ್
Follow us on

ಏಕದಿನ ವಿಶ್ವಕಪ್‌ನಲ್ಲಿ (ODI World Cup 2023) ಕಣಕ್ಕಿಳಿಯುವ ಮುನ್ನವೇ ಕಳೆದ ವಿಶ್ವಕಪ್‌ನ ರನ್ನರ್ ಅಪ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಏಕದಿನ ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ (England vs New Zealand) ಮುಖಾಮುಖಿಯಾಗಲಿವೆ. ಅಕ್ಟೋಬರ್ 5 ರಂದು ಈ ವಿಶ್ವಕಪ್ ಉದ್ಘಾಟನಾ ಪಂದ್ಯ ನಡೆಯಲ್ಲಿದೆ. ಆ ಪಂದ್ಯಕ್ಕೆ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ (Kane Williamson) ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ. ವಾಸ್ತವವಾಗಿ ವಿಲಿಯಮ್ಸನ್ ಈ ವರ್ಷದ ಐಪಿಎಲ್‌ನ ಆರಂಭದಲ್ಲಿ ಮೊಣಕಾಲು ನೋವಿಗೆ ತುತ್ತಾಗಿದ್ದರು. ಅಂದಿನಿಂದ ಕೇನ್ ಮೈದಾನದಿಂದ ಹೊರಗುಳಿದಿದ್ದರು. ಇದೀಗ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿರುವ ವಿಲಿಯಮ್ಸನ್​ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ ಎಂದು ತಿಳಿದುಬಂದಿದೆ.

ಕೇನ್ ಲಭ್ಯತೆ ಅವಶ್ಯಕ

ಹೀಗಾಗಿ ನ್ಯೂಜಿಲೆಂಡ್ ತಂಡ ತನ್ನ ಖಾಯಂ ನಾಯಕ ಕೇನ್ ವಿಲಿಯಮ್ಸನ್ ಇಲ್ಲದೆ, ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲ್ಲಿದೆ. ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಅತ್ಯಂತ ಸ್ಥಿರ ತಂಡಗಳಲ್ಲಿ ಒಂದಾಗಿದೆ. ಕಿವೀಸ್ ಕ್ರಿಕೆಟಿಗರು ಭಾರತದ ನೆಲದಲ್ಲಿ ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿದ್ದಾರೆ. ಹೀಗಾಗಿ ತಂಡದಲ್ಲಿ ಕೇನ್ ಲಭ್ಯತೆ ಅವಶ್ಯಕವಾಗಿದೆ.

ENG vs NZ: ಅಲೆನ್ ಸಿಡಿಲಬ್ಬರದ ಬ್ಯಾಟಿಂಗ್‌; ಆಂಗ್ಲರನ್ನು 74 ರನ್​ಗಳಿಂದ ಮಣಿಸಿದ ನ್ಯೂಜಿಲೆಂಡ್

15 ಜನರ ವಿಶ್ವಕಪ್ ತಂಡದಲ್ಲಿ ಸ್ಥಾನ

ವಿಲಿಯಮ್ಸನ್ ಕಳೆದ ಆರು ತಿಂಗಳಿನಿಂದ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಇದೆಲ್ಲದರ ನಡುವೆಯೂ 15 ಜನರ ವಿಶ್ವಕಪ್ ತಂಡದಲ್ಲಿ ಅವರಿಗೆ ಸ್ಥಾನ ನೀಡಲಾಗಿದೆ. ವಿಲಿಯಮ್ಸನ್ ಮೈದಾನಕ್ಕೆ ಇಳಿಯದಿದ್ದರೂ ವಿಶ್ವಕಪ್‌ನಂತಹ ದೊಡ್ಡ ಕೂಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂಬುದು ತಂಡದ ಆಡಳಿತಕ್ಕೆ ಚೆನ್ನಾಗಿ ತಿಳಿದಿದೆ. ಹಾಗಾಗಿ ಅವರನ್ನು ವಿಶ್ವಕಪ್ ತಂಡದಲ್ಲಿ ಇರಿಸಿದ್ದಲ್ಲದೆ ನಾಯಕತ್ವವನ್ನೂ ವಹಿಸಲಾಗಿತ್ತು. ಆದರೆ ಕೇನ್ ಇನ್ನೂ ಫಿಟ್ ಆಗದೆ ಇರುವುದು ತಂಡವನ್ನು ಆರಂಭದಲ್ಲೇ ಒತ್ತಡಕ್ಕೆ ಸಿಲುಕಿಸಿದೆ.

ಯಾವುದೇ ಒತ್ತಡ ಹೇರಲು ನಾವು ಬಯಸುವುದಿಲ್ಲ

ನ್ಯೂಜಿಲೆಂಡ್ ಇಂದು ಹೈದರಾಬಾದ್‌ನಲ್ಲಿ ಪಾಕಿಸ್ತಾನ ವಿರುದ್ಧ ವಿಶ್ವಕಪ್ ಅಭ್ಯಾಸ ಪಂದ್ಯವನ್ನು ಆಡುತ್ತಿದೆ. ಆದರೆ, ವಿಲಿಯಮ್ಸನ್ ಈ ಪಂದ್ಯದಲ್ಲಿ ಆಡಲಿದ್ದಾರೆ. ಪಾಕಿಸ್ತಾನದ ಪಂದ್ಯದಲ್ಲಿ ವಿಲಿಯಮ್ಸನ್ ಬ್ಯಾಟ್ಸ್‌ಮನ್ ಆಗಿ ಮಾತ್ರ ಆಡಲಿದ್ದಾರೆ ಎಂದು ತಂಡ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ. ಸೋಮವಾರ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಮತ್ತು ಅಂತಿಮ ಅಭ್ಯಾಸ ಪಂದ್ಯದಲ್ಲಿ ಅವರು ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಮಾಡಲಿದ್ದಾರೆ. ಕೋಚ್ ಗ್ಯಾರಿ ಸ್ಟೀಡ್, ‘ನಾವು ಬಹಳ ಸಮಯದಿಂದ ವಿಲಿಯನ್ಸನ್ ಮೇಲೆ ಗಮನವಿಟ್ಟಿದ್ದೇವೆ. ಹೀಗಾಗಿ ಅವರು ಬೇಗನೆ ಫಿಟ್ ಆಗಿ ಮೈದಾನಕ್ಕೆ ಮರಳಬಹುದು. ಈಗ ನಾವು ಅಂತರರಾಷ್ಟ್ರೀಯ ಕ್ರಿಕೆಟ್‌ನ ಒತ್ತಡವನ್ನು ತೆಗೆದುಕೊಳ್ಳಲು ಸಿದ್ಧರಾಗಲು ಪ್ರಯತ್ನಿಸುತ್ತಿದ್ದೇವೆ. ವಿಲಿಯಮ್ಸನ್ ಮೇಲೆ ಯಾವುದೇ ಒತ್ತಡ ಹೇರಲು ನಾವು ಬಯಸುವುದಿಲ್ಲ’ ಎಂದು ಹೇಳಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Fri, 29 September 23