AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ವಿರುದ್ಧದ ಟೆಸ್ಟ್​ ಸರಣಿಗೆ ಬಲಿಷ್ಠ ನ್ಯೂಝಿಲೆಂಡ್ ತಂಡ ಪ್ರಕಟ

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಉಭಯ ತಂಡಗಳ ನಡುವೆ ಟೆಸ್ಟ್ ಸರಣಿ ಆರಂಭವಾಗಲಿದೆ. ಎರಡು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯ ನವೆಂಬರ್ 19 ರಿಂದ ಹಾಗೂ ದ್ವಿತೀಯ ಪಂದ್ಯ ನವೆಂಬರ್ 27 ರಿಂದ ಶುರುವಾಗಲಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ದೃಷ್ಟಿಯಿಂದ ಉಭಯ ತಂಡಗಳಿಗೂ ಈ ಸರಣಿ ಅತ್ಯಂತ ನಿರ್ಣಾಯಕವಾಗಿದೆ.

ಭಾರತದ ವಿರುದ್ಧದ ಟೆಸ್ಟ್​ ಸರಣಿಗೆ ಬಲಿಷ್ಠ ನ್ಯೂಝಿಲೆಂಡ್ ತಂಡ ಪ್ರಕಟ
New ZealandImage Credit source: GettyImages
ಝಾಹಿರ್ ಯೂಸುಫ್
|

Updated on: Nov 11, 2026 | 7:23 AM

Share

ಭಾರತ ವಿರುದ್ಧ ನವೆಂಬರ್ 19 ರಿಂದ ಆರಂಭವಾಗಲಿರುವ ಎರಡು ಪಂದ್ಯಗಳ ಪ್ರತಿಷ್ಠಿತ ಟೆಸ್ಟ್ ಸರಣಿಗಾಗಿ 14 ಸದಸ್ಯರ ಬಲಿಷ್ಠ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಟಾಮ್ ಲ್ಯಾಥಮ್ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಸ್ಟಾರ್ ಆಟಗಾರರಾದ ರಚಿನ್ ರವೀಂದ್ರ ಮತ್ತು ಡೆವೊನ್ ಕಾನ್ವೇ ತಂಡದಲ್ಲಿ ಸ್ಥಾನ ಪಡೆದಿದ್ದಾರಾದರೂ, ಗಾಯದ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಮೊದಲ ಟೆಸ್ಟ್ ಪಂದ್ಯದ ಒಳಗಾಗಿ ತಮ್ಮ ಸಂಪೂರ್ಣ ಫಿಟ್ನೆಸ್ ಸಾಬೀತುಪಡಿಸಬೇಕಾದ ಅನಿವಾರ್ಯತೆಯಲ್ಲಿದ್ದಾರೆ.

ಮೂವರು ಗಾಯಾಳು:

ಸೆಪ್ಟೆಂಬರ್‌ನಲ್ಲಿ ನಡೆದ ಜಾಹೀರಾತು ಚಿತ್ರೀಕರಣದ ವೇಳೆ ಬಲ ಹೆಗಲ ಮೂಳೆ ಜಾರಿ ಗಾಯಗೊಂಡಿದ್ದರಿಂದ ರಚಿನ್ ರವೀಂದ್ರ ಅವರು ಭಾರತ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಿಂದ ಹೊರಗುಳಿದಿದ್ದರು.

ಇನ್ನು ತರಬೇತಿಯ ವೇಳೆ ಸಹ ಆಟಗಾರ ಮ್ಯಾಟ್ ಹೆನ್ರಿ ಅವರೊಂದಿಗೆ ಡಿಕ್ಕಿ ಹೊಡೆದು ತಲೆಗೆ ಬಲವಾದ ಪೆಟ್ಟು ಮಾಡಿಕೊಂಡಿದ್ದ ಡೆವೊನ್ ಕಾನ್ವೇ ಹಾಗೂ ಮಂಡಿರಜ್ಜು ಗಾಯಕ್ಕೆ ತುತ್ತಾಗಿರುವ ವಿಕೆಟ್ ಕೀಪರ್ ಟಾಮ್ ಬ್ಲಂಡೆಲ್ ಸದ್ಯ ಗುಣಮುಖರಾಗುತ್ತಿದ್ದಾರೆ. ಈ ಮೂವರೂ ವೆಲ್ಲಿಂಗ್ಟನ್‌ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಲಭ್ಯರಿರುವ ವಿಶ್ವಾಸವನ್ನು ಮಂಡಳಿ ವ್ಯಕ್ತಪಡಿಸಿದೆ.

ಮೊದಲ ಟೆಸ್ಟ್ ಸರಣಿ:

ಇತ್ತೀಚೆಗಷ್ಟೇ ಇಂಗ್ಲೆಂಡ್ ಪ್ರವಾಸದ ಮಧ್ಯದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ದಿಗ್ಗಜ ಬ್ಯಾಟರ್ ಕೇನ್ ವಿಲಿಯಮ್ಸನ್ ಅವರ ಅನುಪಸ್ಥಿತಿಯಲ್ಲಿ ನ್ಯೂಝಿಲೆಂಡ್ ತಂಡ ಕಣಕ್ಕಿಳಿಯುತ್ತಿರುವ ಮೊದಲ ಟೆಸ್ಟ್ ಸರಣಿ ಇದಾಗಿದೆ.

ಇದರೊಂದಿಗೆ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಹೊಸ ಬಲ ತುಂಬಲು ಮಾಜಿ ಕೀಪರ್ ಬಿಜೆ ವಾಟ್ಲಿಂಗ್ ಅವರು ಹೊಸ ಬ್ಯಾಟಿಂಗ್ ಕೋಚ್ ಆಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಜೇಕಬ್ ಡಫಿ ಪಿತೃತ್ವ ರಜೆಯ ಬಳಿಕ ಮರಳಿ ತಂಡ ಸೇರಿದ್ದರೆ, ಬೆನ್ ಸಿಯರ್ಸ್, ಝಾಕ್ ಫೌಲ್ಕ್ಸ್ ಮತ್ತು ವಿಲಿಯಂ ಒರೋಕ್ ಗಾಯ ಹಾಗೂ ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್ ಕಾರಣದಿಂದ ಹೊರಗುಳಿದಿದ್ದಾರೆ. ಅದರಂತೆ ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ನ್ಯೂಝಿಲೆಂಡ್ ತಂಡ ಈ ಕೆಳಗಿನಂತಿದೆ…

  •  ಟಾಮ್ ಲ್ಯಾಥಮ್ (ನಾಯಕ)
  • ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್)
  • ಡೆವೊನ್ ಕಾನ್ವೇ
  •  ರಚಿನ್ ರವೀಂದ್ರ
  •  ಡ್ಯಾರಿಲ್ ಮಿಚೆಲ್
  •  ಹೆನ್ರಿ ನಿಕೋಲ್ಸ್
  •  ವಿಲ್ ಯಂಗ್
  • ಗ್ಲೆನ್ ಫಿಲಿಪ್ಸ್
  •  ಮಿಚೆಲ್ ಸ್ಯಾಂಟ್ನರ್
  • ಮ್ಯಾಟ್ ಹೆನ್ರಿ
  •  ಕೈಲ್ ಜೇಮಿಸನ್
  •  ಜೇಕಬ್ ಡಫಿ
  • ನಾಥನ್ ಸ್ಮಿತ್
  •  ಬ್ಲೇರ್ ಟಿಕ್ನರ್

WTC ದೃಷ್ಟಿಯಿಂದ ಮಹತ್ವದ ಸರಣಿ:

ಭಾರತದಲ್ಲೇ ಭಾರತ ತಂಡವನ್ನು 3-0 ಅಂತರದಿಂದ ವೈಟ್‌ವಾಶ್ ಮಾಡಿ ಐತಿಹಾಸಿಕ ಸಾಧನೆ ಮಾಡಿದ್ದ ಕೀವಿಸ್ ಪಡೆಗೆ, ಈ ಬಾರಿ ತವರಿನ ಸರಣಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಲು ಅತ್ಯಂತ ನಿರ್ಣಾಯಕವಾಗಿದೆ. ಸದ್ಯ ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ ನ್ಯೂಝಿಲೆಂಡ್ ದ್ವಿತೀಯ ಸ್ಥಾನದಲ್ಲಿದ್ದರೆ, ಭಾರತ ತಂಡ ನಾಲ್ಕನೇ ಸ್ಥಾನದಲ್ಲಿದೆ. ಫೈನಲ್ ರೇಸ್‌ನಲ್ಲಿ ಉಳಿಯಲು ಉಭಯ ತಂಡಗಳಿಗೂ ಈ ಸರಣಿ ಅತ್ಯಂತ ಕಠಿಣ ಸವಾಲಾಗಿದೆ.

ಇದನ್ನೂ ಓದಿ: 12 ತಂಡಗಳ ಟೂರ್ನಿ… ಐಪಿಎಲ್ 2028ಕ್ಕೆ ಮತ್ತೆ 2 ತಂಡಗಳ ಸೇರ್ಪಡೆ!

ಪಂದ್ಯಗಳ ವೇಳಾಪಟ್ಟಿ:

  1. ಮೊದಲ ಟೆಸ್ಟ್: ನವೆಂಬರ್ 19–23, ಸೆಲ್ಲೋ ಬೇಸಿನ್ ರಿಸರ್ವ್, ವೆಲ್ಲಿಂಗ್ಟನ್.
  2.  ಎರಡನೇ ಟೆಸ್ಟ್: ನವೆಂಬರ್ 27–ಡಿಸೆಂಬರ್ 2, ಹ್ಯಾಗ್ಲಿ ಓವಲ್, ಕ್ರೈಸ್ಟ್‌ಚರ್ಚ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಮಲ್ಲೇಶ್ವರಂ ಮಂತ್ರಿ ಮಾಲ್ ಮೆಟ್ರೋ ನಿಲ್ದಾಣದಲ್ಲಿ ಜೀವ ಭಯ
ಮಲ್ಲೇಶ್ವರಂ ಮಂತ್ರಿ ಮಾಲ್ ಮೆಟ್ರೋ ನಿಲ್ದಾಣದಲ್ಲಿ ಜೀವ ಭಯ
ಸಂಸತ್ ಭವನದಲ್ಲಿ ಮಹನೀಯರ ಫೋಟೋ ಜತೆ ಟಿಪ್ಪು ಫೋಟೋ ಇಡಬೇಕು: ವಾಟಾಳ್ ನಾಗರಾಜ್
ಸಂಸತ್ ಭವನದಲ್ಲಿ ಮಹನೀಯರ ಫೋಟೋ ಜತೆ ಟಿಪ್ಪು ಫೋಟೋ ಇಡಬೇಕು: ವಾಟಾಳ್ ನಾಗರಾಜ್
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ