AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಝಿಲೆಂಡ್ ಟಿ20 ತಂಡದಿಂದ 8 ಆಟಗಾರರು ಔಟ್!

New zealand vs South Africa: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಕಿವೀಸ್ ಪಡೆ ಫೈನಲ್​ಗೇರಿತ್ತು. ಆದರೆ ಫೈನಲ್​ ಪಂದ್ಯದಲ್ಲಿ ಭಾರತದ ವಿರುದ್ಧ 96 ರನ್​ಗಳಿಂದ ಪರಾಜಯಗೊಂಡಿತು. ಇದೀಗ ನ್ಯೂಝಿಲೆಂಡ್ ತಂಡವು ಸೌತ್ ಆಫ್ರಿಕಾ ವಿರುದ್ಧ ಟಿ20 ಸರಣಿ ಆಡಲು ಸಜ್ಜಾಗಿದೆ.

ನ್ಯೂಝಿಲೆಂಡ್ ಟಿ20 ತಂಡದಿಂದ 8 ಆಟಗಾರರು ಔಟ್!
New Zealand
ಝಾಹಿರ್ ಯೂಸುಫ್
|

Updated on: Mar 11, 2026 | 10:19 AM

Share

ಟಿ20 ವಿಶ್ವಕಪ್ ಫೈನಲ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡ ಟಿ20 ಸರಣಿಗಾಗಿ ಸಜ್ಜಾಗಿದೆ. ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಪ್ರಮುಖ ಆಟಗಾರರು ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದ 8 ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ.

ಇನ್ನು ನಾಯಕ ಮಿಚೆಲ್ ಸ್ಯಾಂಟ್ನರ್ ಮೂರು ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಇನ್ನುಳಿದ ಎರಡು ಮ್ಯಾಚ್​ಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಲ್ಯಾಥಮ್ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಮೂವರು ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ನ್ಯೂಝಿಲೆಂಡ್ ತಂಡ ಈ ಕೆಳಗಿನಂತಿದೆ…

ನ್ಯೂಝಿಲೆಂಡ್ ಟಿ20 ತಂಡ:

ಅಲಭ್ಯರಾಗಿರುವ ಆಟಗಾರರು:

  • ಫಿನ್ ಅಲೆನ್
  • ರಚಿನ್ ರವೀಂದ್ರ
  • ಗ್ಲೆನ್ ಫಿಲಿಪ್ಸ್
  • ಡೇರಿಲ್ ಮಿಚೆಲ್
  • ಮಾರ್ಕ್ ಚಾಪ್ಮನ್
  • ಟಿಮ್ ಸೈಫರ್ಟ್
  • ಜೇಕಬ್ ಡಫಿ
  • ಮ್ಯಾಟ್ ಹೆನ್ರಿ.

ಇದನ್ನೂ ಓದಿ: ಹೊಸ ಗರ್ಲ್​​ ಫ್ರೆಂಡ್ ಎಂಟ್ರಿ… ಜೀವಕ್ಕೆ ಜೀವದಂತಿದ್ದ ಅಣ್ಣನೇ ದೂರ..!

5 ಪಂದ್ಯಗಳ ಸರಣಿ:

ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ನ್ಯೂಝಿಲೆಂಡ್​ನಲ್ಲಿ ನಡೆಯಲಿರುವ ಈ ಸರಣಿಯು ಮಾರ್ಚ್ 15 ರಿಂದ ಶುರುವಾಗಲಿದೆ. ಇನ್ನು ಈ ಸರಣಿಯ ಕೊನೆಯ ಮ್ಯಾಚ್ ಮಾರ್ಚ್ 25 ರಂದು ನಡೆಯಲಿದೆ.

ಪಂದ್ಯ ದಿನಾಂಕ ಸ್ಥಳ ಸಮಯ (ಸ್ಥಳೀಯ)
1ನೇ ಟಿ20 ಭಾನುವಾರ, ಮಾರ್ಚ್ 15 ಬೇ ಓವಲ್, ಮೌಂಟ್ ಮೌಂಗನುಯಿ ಸಂಜೆ 7:15
2ನೇ ಟಿ20 ಮಂಗಳವಾರ, 17 ಮಾರ್ಚ್ ಸೆಡ್ಡನ್ ಪಾರ್ಕ್, ಹ್ಯಾಮಿಲ್ಟನ್ ಸಂಜೆ 7:15
3ನೇ ಟಿ20ಐ ಶುಕ್ರವಾರ, ಮಾರ್ಚ್ 20 ಈಡನ್ ಪಾರ್ಕ್, ಆಕ್ಲೆಂಡ್ ಸಂಜೆ 7:15
4ನೇ ಟಿ20ಐ ಭಾನುವಾರ, ಮಾರ್ಚ್ 22 ಸ್ಕೈ ಕ್ರೀಡಾಂಗಣ, ವೆಲ್ಲಿಂಗ್ಟನ್ ಸಂಜೆ 7:15
5ನೇ ಟಿ20ಐ ಬುಧವಾರ, ಮಾರ್ಚ್ 25 ಹ್ಯಾಗ್ಲಿ ಓವಲ್, ಕ್ರೈಸ್ಟ್‌ಚರ್ಚ್ ಸಂಜೆ 7:15
Follow Us
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ