Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಝಿಲೆಂಡ್ ತಂಡಕ್ಕೆ ಹೊಸ ನಾಯಕ: 8 ಆಟಗಾರರು ಹೊರಕ್ಕೆ..!

New Zealand vs Pakistan: ಚಾಂಪಿಯನ್ಸ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ನ್ಯೂಝಿಲೆಂಡ್ ಹಾಗೂ ಪಾಕಿಸ್ತಾನ್ ತಂಡಗಳು ಟಿ20 ಸರಣಿ ಆಡಲು ಸಜ್ಜಾಗಿದೆ. ಮಾರ್ಚ್ರ 16 ರಿಂದ ಆರಂಭವಾಗಲಿರುವ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳು ನಡೆಯಲಿದೆ. ಆದರೆ ಈ ಸರಣಿಗೆ ನ್ಯೂಝಿಲೆಂಡ್ ತಂಡದ 8 ಪ್ರಮುಖ ಆಟಗಾರರು ಅಲಭ್ಯರಾಗಿದ್ದಾರೆ.

ನ್ಯೂಝಿಲೆಂಡ್ ತಂಡಕ್ಕೆ ಹೊಸ ನಾಯಕ: 8 ಆಟಗಾರರು ಹೊರಕ್ಕೆ..!
New Zealand
Follow us
ಝಾಹಿರ್ ಯೂಸುಫ್
|

Updated on: Mar 11, 2025 | 7:22 AM

ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ನ್ಯೂಝಿಲೆಂಡ್ ತಂಡ ಮುಂಬರುವ ಸರಣಿಗೆ ಸಜ್ಜಾಗುತ್ತಿದೆ. ಈ ಸರಣಿಯಲ್ಲಿ ಕಿವೀಸ್ ಪಡೆಯನ್ನು ಮುನ್ನಡೆಸುತ್ತಿರುವುದು ಮೈಕೆಲ್ ಬ್ರೇಸ್​ವೆಲ್ ಎಂಬುದು ವಿಶೇಷ. ಅಂದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ನ್ಯೂಝಿಲೆಂಡ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಮಿಚೆಲ್ ಸ್ಯಾಂಟ್ನರ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಪಾಕಿಸ್ತಾನ್ ವಿರುದ್ಧದ ಸರಣಿ:

ಮಾರ್ಚ್ 16 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ನ್ಯೂಝಿಲೆಂಡ್ ಹಾಗೂ ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಟಿ20 ಪಂದ್ಯಗಳು ನಡೆಯಲಿದ್ದು, ಇದಕ್ಕಾಗಿ ಆಯ್ಕೆ ಮಾಡಲಾದ ತಂಡದಲ್ಲಿ 8 ಬದಲಾವಣೆ ಮಾಡಲಾಗಿದೆ.

ಅಂದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಂಡಿದ್ದ 8 ಆಟಗಾರರು ಟಿ20 ಸರಣಿಯಿಂದ ಹೊರಗುಳಿದಿದ್ದಾರೆ. ಇಲ್ಲಿ ನಾಯಕ ಮಿಚೆಲ್ ಸ್ಯಾಂಟ್ನರ್ ಅಲ್ಲದೆ, ಟಾಮ್ ಲ್ಯಾಥಮ್, ಕೇನ್ ವಿಲಿಯಮ್ಸನ್, ರಚಿನ್ ರವೀಂದ್ರ, ಡೆವೊನ್ ಕಾನ್ವೆ, ವಿಲ್ ಯಂಗ್, ನಾಥನ್ ಸ್ಮಿತ್ ಮತ್ತು ಜಾಕೋಬ್ ಡಫಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಇದನ್ನೂ ಓದಿ
Image
ವಿರಾಟ್ ಕೊಹ್ಲಿಗೆ 100 ಕೋಟಿ ರೂ: ಶುಭ್​ಮನ್ ಗಿಲ್​ಗೆ ಎಷ್ಟು?
Image
VIDEO: ಅಳುತ್ತಿದ್ದ ಅಭಿಮಾನಿಯನ್ನು ಸಮಾಧಾನ ಮಾಡಿದ ಕೆಎಲ್ ರಾಹುಲ್
Image
ನಾನು ಹೊಡೀತಿದ್ದೆ ಅಲ್ವಾ... ವಿರಾಟ್ ಕೊಹ್ಲಿ ಮುಂದೆ ಕೆಎಲ್ ರಾಹುಲ್ ಹತಾಶೆ
Image
Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಟಿ20 ತಂಡದಲ್ಲಿ ಸ್ಥಾನ ಪಡೆದವರು:

ನ್ಯೂಝಿಲೆಂಡ್ ತಂಡದಿಂದ 8 ಆಟಗಾರರು ಹೊರಗುಳಿದ ಕಾರಣ, ಇಶ್ ಸೋಧಿ, ಬೆನ್ ಸಿಯರ್ಸ್‌ರಂತಹ ಆಟಗಾರರು ತಂಡಕ್ಕೆ ಮರಳಿದ್ದಾರೆ. ಬೆನ್ ಸಿಯರ್ಸ್ ಅವರನ್ನು ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡಲಾಗಿದ್ದರೂ, ಪಂದ್ಯಾವಳಿ ಆರಂಭಕ್ಕೂ ಮುನ್ನ ಮಂಡಿರಜ್ಜು ಗಾಯದಿಂದಾಗಿ ಅವರನ್ನು ಹೊರಗಿಡಬೇಕಾಯಿತು. ಈಗ ಅವರು ಆ ಗಾಯದಿಂದ ಚೇತರಿಸಿಕೊಂಡಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಆಡಿದ್ದ ಕೈಲ್ ಜೇಮಿಸನ್ ಮತ್ತು ವಿಲ್ ಒರೋಕ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ, ಆದರೆ ಇಬ್ಬರೂ ಟಿ20 ಸರಣಿಯ ಮೊದಲ 3 ಪಂದ್ಯಗಳಿಗೆ ಮಾತ್ರ ಲಭ್ಯವಿರುತ್ತಾರೆ. ಹಾಗೆಯೇ ಭುಜದ ಗಾಯದಿಂದಾಗಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಿಂದ ಹೊರಗುಳಿದಿದ್ದ ಮ್ಯಾಟ್ ಹೆನ್ರಿ, ನಾಲ್ಕನೇ ಮತ್ತು ಐದನೇ ಟಿ20 ಪಂದ್ಯಗಳಲ್ಲಿ ಪಾಕಿಸ್ತಾನ ವಿರುದ್ಧ ಆಡಲಿದ್ದಾರೆ.

ಇನ್ನು ಈ ತಂಡದಲ್ಲಿ ಫಿನ್ ಅಲೆನ್, ಜಿಮ್ಮಿ ನೀಶಮ್ ಮತ್ತು ಟಿಮ್ ಸೀಫರ್ಟ್ ಕೂಡ ಕಾಣಿಸಿಕೊಂಡಿದ್ದಾರೆ. ಇವರಲ್ಲದೆ, ಟಿಮ್ ರಾಬಿನ್ಸನ್ ಮತ್ತು ಜ್ಯಾಕ್ ಫಾಕ್ಸ್‌ಗೂ ಅವಕಾಶ ಸಿಕ್ಕಿದೆ.

ಇದನ್ನೂ ಓದಿ: Champions Trophy 2025: ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರು ಇವರೇ

ನ್ಯೂಝಿಲೆಂಡ್ ಟಿ20 ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಫಿನ್ ಅಲೆನ್, ಮಾರ್ಕ್ ಚಾಪ್‌ಮನ್, ಜಾಕೋಬ್ ಡಫಿ, ಜ್ಯಾಕ್ ಫೌಲ್ಕ್ಸ್, ಮಿಚ್ ಹೇ, ಮ್ಯಾಟ್ ಹೆನ್ರಿ , ಕೈಲ್ ಜೇಮಿಸನ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ವಿಲ್ ಒರೋಕ್, ಟಿಮ್ ರಾಬಿನ್ಸನ್, ಬೆನ್ ಸಿಯರ್ಸ್, ಟಿಮ್ ಸೀಫರ್ಟ್, ಇಶ್ ಸೋಧಿ.