ಏಕದಿನ ವಿಶ್ವಕಪ್​ ಜೆರ್ಸಿ ಅನಾವರಣಗೊಳಿಸಿದ ನ್ಯೂಝಿಲೆಂಡ್

ICC World Cup 2023: ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಏಕದಿನ ವಿಶ್ವಕಪ್​ ಜೆರ್ಸಿ ಅನಾವರಣಗೊಳಿಸಿದ ನ್ಯೂಝಿಲೆಂಡ್
New Zealand Team
Follow us
| Edited By: Zahir Yusuf

Updated on: Sep 18, 2023 | 3:17 PM

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ಗಾಗಿ ನ್ಯೂಝಿಲೆಂಡ್ ತಂಡವು ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಎಂದಿನಂತೆ ಈ ಬಾರಿ ಕೂಡ ಕಿವೀಸ್ ಪಡೆ ಕಪ್ಪು ಬಣ್ಣದ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ಆದರೆ ಈ ಬಾರಿ ಮುಂಭಾಗದಲ್ಲಿ ಬಿಳ್ಳಿ ಪಟ್ಟಿಗಳನ್ನು ನೀಡಲಾಗಿರುವುದು ವಿಶೇಷ.

ಅಂದರೆ 2019 ರ ಏಕದಿನ ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್ ಕಪ್ಪು ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದರೂ ಯಾವುದೇ ವಿನ್ಯಾಸಗಳನ್ನು ಹೊಂದಿರಲಿಲ್ಲ. ಆದರೆ ಈ ಬಾರಿ ಮುಂಭಾಗದಲ್ಲಿ ಬಿಳಿ ನೀಳ ಪಟ್ಟಿಗಳನ್ನು ನೀಡಲಾಗಿದೆ. ಇದರ ಹೊರತಾಗಿ ತಂಡದ ಜೆರ್ಸಿಯ ವಿನ್ಯಾಸದಲ್ಲಿ ದೊಡ್ಡ ಬದಲಾವಣೆ ಕಂಡು ಬಂದಿಲ್ಲ.

ಏಕದಿನ ವಿಶ್ವಕಪ್​ ನ್ಯೂಝಿಲೆಂಡ್ ತಂಡ:

ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

ಪಾಕಿಸ್ತಾನ್ ತಂಡದ ಜೆರ್ಸಿ ಅನಾವರಣ:

ಈ ಬಾರಿಯ ಏಷ್ಯಾಕಪ್​ಗೂ ಮುನ್ನವೇ ಪಾಕಿಸ್ತಾನ್ ತಂಡದ ವಿಶ್ವಕಪ್ ಜೆರ್ಸಿಯನ್ನು ಬಿಡುಗಡೆ ಮಾಡಲಾಗಿತ್ತು. ಈ ಬಾರಿ ಕೂಡ ಬಾಬರ್ ಪಡೆ ಕಡು ಹಸಿರು ಬಣ್ಣದ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ಆದರೆ 1999 ರ ಏಕದಿನ ವಿಶ್ವಕಪ್​ ಜೆರ್ಸಿಯಲ್ಲಿ ಕಾಣಿಸಿಕೊಂಡಂತೆ ನೂತನ ಕಿಟ್​ ಮುಂಭಾಗದಲ್ಲಿ ನಕ್ಷತ್ರದ ವಿನ್ಯಾಸವನ್ನು ಬಳಸಲಾಗಿದೆ. ಅಲ್ಲದೆ ನೂತನ ಜೆರ್ಸಿಗೆ ‘ಸ್ಟಾರ್ ನೇಷನ್ ಜೆರ್ಸಿ’ ಎಂದು ಹೆಸರಿಡಲಾಗಿದೆ.

ಸದ್ಯ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮಾತ್ರ ವಿಶ್ವಕಪ್ ಜೆರ್ಸಿಯನ್ನು ಅನಾವರಣಗೊಳಿಸಿದ್ದು, ಸೆಪ್ಟೆಂಬರ್ ಅಂತ್ಯದೊಳಗೆ ಇತರೆ ತಂಡಗಳ ವರ್ಲ್ಡ್​ಕಪ್ ಕಿಟ್​ನ ವಿನ್ಯಾಸಗಳು ಹೊರಬೀಳಲಿದೆ.

ಏಕದಿನ ವಿಶ್ವಕಪ್ ಯಾವಾಗ ಆರಂಭ?

ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಇದನ್ನೂ ಓದಿ: Mohammed Siraj: 6 ವಿಕೆಟ್ 10 ದಾಖಲೆಗಳು: ಇದು ಮಿಯಾನ್ ಮ್ಯಾಜಿಕ್

ಹಾಗೆಯೇ ಅಕ್ಟೋಬರ್ 14 ರಂದು ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಏಕದಿನ ವಿಶ್ವಕಪ್​ನ ಸಂಪೂರ್ಣ ವೇಳಾಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​