ಏಕದಿನ ವಿಶ್ವಕಪ್ನ 16ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ಧ ನ್ಯೂಝಿಲೆಂಡ್ ಭರ್ಜರಿ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಗಾನಿಸ್ತಾನ್ ತಂಡದ ನಾಯಕ ಹಶ್ಮತ್ ಶಾಹಿದಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್ಗಳಲ್ಲಿ6 ವಿಕೆಟ್ ನಷ್ಟಕ್ಕೆ 288 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 34.4 ಓವರ್ಗಳಲ್ಲಿ ಕೇವಲ 139 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ನ್ಯೂಝಿಲೆಂಡ್ ತಂಡವು 149 ರನ್ಗಳ ಅಮೋಘ ಗೆಲುವು ದಾಖಲಿಸಿದೆ.
ಉಭಯ ತಂಡಗಳು ಏಕದಿನ ಕ್ರಿಕೆಟ್ನಲ್ಲಿ ಇದುವರೆಗೆ 3 ಬಾರಿ ಮಾತ್ರ ಮುಖಾಮುಖಿಯಾಗಿವೆ. ಈ ಮೂರು ಪಂದ್ಯಗಳನ್ನು ನ್ಯೂಝಿಲೆಂಡ್ ತಂಡವೇ ಗೆದ್ದುಕೊಂಡಿದೆ.
ನ್ಯೂಝಿಲೆಂಡ್ (ಪ್ಲೇಯಿಂಗ್ XI): ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ಅಫ್ಘಾನಿಸ್ತಾನ್ (ಪ್ಲೇಯಿಂಗ್ XI): ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಝಲ್ಹಕ್ ಫಾರೂಖಿ.
ಮಿಚೆಲ್ ಸ್ಯಾಂಟ್ನರ್ ಹಾಗೂ ಲಾಕಿ ಫರ್ಗುಸನ್ ದಾಳಿಗೆ ತತ್ತರಿಸಿದ ಅಫ್ಘಾನಿಸ್ತಾನ್ ತಂಡ.
139 ರನ್ಗಳಿಗೆ ಅಫ್ಗಾನಿಸ್ತಾನ್ ತಂಡ ಆಲೌಟ್.
7 ಓವರ್ಗಳಲ್ಲಿ 19 ರನ್ ನೀಡಿ 3 ವಿಕೆಟ್ ಕಬಳಿಸಿದ ಲಾಕಿ ಫರ್ಗುಸನ್.
7.4 ಓವರ್ಗಳಲ್ಲಿ 39 ರನ್ಗಳಿಗೆ 3 ವಿಕೆಟ್ ಪಡೆದ ಮಿಚೆಲ್ ಸ್ಯಾಂಟ್ನರ್.
ಮಿಚೆಲ್ ಸ್ಯಾಂಟ್ನರ್ ಎಸೆದ 31ನೇ ಓವರ್ನ 4ನೇ ಎಸೆತದಲ್ಲಿ ಮೊಹಮ್ಮದ್ ನಬಿ ಕ್ಲೀನ್ ಬೌಲ್ಡ್.
31 ಓವರ್ಗಳ ಮುಕ್ತಾಯದ ವೇಳೆಗೆ 126 ರನ್ ಕಲೆಹಾಕಿದ ಅಫ್ಘಾನಿಸ್ತಾನ್.
ಕ್ರೀಸ್ನಲ್ಲಿ ರಶೀದ್ ಖಾನ್ ಹಾಗೂ ಇಕ್ರಮ್ ಅಲಿಖಿಲ್ ಬ್ಯಾಟಿಂಗ್.
ರಚಿನ್ ರವೀಂದ್ರ ಎಸೆದ 29ನೇ ಓವರ್ನ ಮೊದಲ ಎಸೆತದಲ್ಲೇ ಕ್ಯಾಚ್ ನೀಡಿದ ರಹಮತ್ ಶಾ.
62 ಎಸೆತಗಳಲ್ಲಿ 36 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಅಫ್ಗಾನ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ರಹಮತ್ ಶಾ.
ಕ್ರೀಸ್ನಲ್ಲಿ ಮೊಹಮ್ಮದ್ ನಬಿ ಹಾಗೂ ಇಕ್ರಮ್ ಅಲಿಖಿಲ್ ಬ್ಯಾಟಿಂಗ್.
ಟ್ರೆಂಟ್ ಬೌಲ್ಟ್ ಎಸೆದ 26ನೇ ಓವರ್ನ ನಾಲ್ಕನೇ ಎಸೆತದಲ್ಲಿ ಕೀಪರ್ಗೆ ಕ್ಯಾಚ್ ನೀಡಿದ ಅಝ್ಮತ್.
32 ಎಸೆತಗಳಲ್ಲಿ 27 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಅಝ್ಮತ್ ಒವರ್ಝಾಹಿ.
ಕ್ರೀಸ್ನಲ್ಲಿ ರಹಮತ್ ಶಾ ಹಾಗೂ ಇಕ್ರಮ್ ಅಲಿಖಿಲ್ ಬ್ಯಾಟಿಂಗ್.
ರಚಿನ್ ರವೀಂದ್ರ 25ನೇ ಓವರ್ನ 4ನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಅಝ್ಮತ್ ಒಮರ್ಝಾಹಿ.
25 ಓವರ್ಗಳ ಮುಕ್ತಾಯದ ವೇಳೆಗೆ 94 ರನ್ ಕಲೆಹಾಕಿದ ಅಫ್ಘಾನಿಸ್ತಾನ್ ತಂಡ.
ಕ್ರೀಸ್ನಲ್ಲಿ ರಹಮತ್ ಶಾ ಹಾಗೂ ಅಝ್ಮತ್ ಒಮರ್ಝಾಹಿ ಬ್ಯಾಟಿಂಗ್.
20 ಓವರ್ಗಳ ಮುಕ್ತಾಯದ ವೇಳೆಗೆ 68 ರನ್ ಕಲೆಹಾಕಿದ ಅಫ್ಘಾನಿಸ್ತಾನ್.
ಅತ್ಯುತ್ತಮ ಬೌಲಿಂಗ್ ಮೂಲಕ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ನ್ಯೂಝಿಲೆಂಡ್.
ಕ್ರೀಸ್ನಲ್ಲಿ ರಹಮತ್ ಶಾ ಹಾಗೂ ಅಝ್ಮತ್ ಒಮರ್ಝಾಹಿ ಬ್ಯಾಟಿಂಗ್.
15 ಓವರ್ಗಳ ಮುಕ್ತಾಯದ ವೇಳೆಗೆ ಕೇವಲ 48 ರನ್ ಕಲೆಹಾಕಿದ ಅಫ್ಘಾನಿಸ್ತಾನ್.
3 ವಿಕೆಟ್ ಕಬಳಿಸಿ ಅಫ್ಗಾನ್ ತಂಡಕ್ಕೆ ಆರಂಭಿಕ ಆಘಾತ ನೀಡಿದ ನ್ಯೂಝಿಲೆಂಡ್.
ಕ್ರೀಸ್ನಲ್ಲಿ ರಹಮತ್ ಶಾ ಹಾಗೂ ಅಝ್ಮತ್ ಒಮರ್ಝಾಹಿ ಬ್ಯಾಟಿಂಗ್.
ಲಾಕಿ ಫರ್ಗುಸನ್ ಎಸೆದ 14ನೇ ಓವರ್ನ ಕೊನೆಯ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿದ ಹಶ್ಮತ್ ಶಾಹಿದಿ. ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್.
ನ್ಯೂಝಿಲೆಂಡ್ ತಂಡಕ್ಕೆ ಮೂರನೇ ಯಶಸ್ಸು.
ಕ್ರೀಸ್ನಲ್ಲಿ ರಹಮತ್ ಶಾ ಹಾಗೂ ಅಝ್ಮತ್ ಒಮರ್ಝಾಹಿ ಬ್ಯಾಟಿಂಗ್.
10 ಓವರ್ಗಳ ಮುಕ್ತಾಯದ ವೇಳೆಗೆ 28 ರನ್ ಕಲೆಹಾಕಿದ ಅಫ್ಘಾನಿಸ್ತಾನ್ ತಂಡ.
ನ್ಯೂಝಿಲೆಂಡ್ ಬೌಲರ್ಗಳಿಂದ ಅತ್ಯುತ್ತಮ ಬೌಲಿಂಗ್.
ಕ್ರೀಸ್ನಲ್ಲಿ ರಹಮತ್ ಶಾ ಹಾಗೂ ಹಶ್ಮತ್ ಶಾಹಿದಿ ಬ್ಯಾಟಿಂಗ್.
ಇಬ್ರಾಹಿಂ ಝದ್ರಾನ್ ಹಾಗೂ ರಹಮಾನುಲ್ಲಾ ಗುರ್ಬಾಝ್ ಔಟ್.
ಟ್ರೆಂಟ್ ಬೌಲ್ಟ್ ಎಸೆದ 7ನೇ ಓವರ್ನ ಮೊದಲ ಎಸೆತದಲ್ಲೇ ಸುಲಭ ಕ್ಯಾಚ್ ನೀಡಿದ ಇಬ್ರಾಹಿಂ ಝದ್ರಾನ್.
15 ಎಸೆತಗಳಲ್ಲಿ 14 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಆರಂಭಿಕ ಬ್ಯಾಟರ್ ಇಬ್ರಾಹಿಂ.
ಕ್ರೀಸ್ನಲ್ಲಿ ರಹಮತ್ ಶಾ ಹಾಗೂ ಹಶ್ಮತ್ ಶಾಹಿದಿ ಬ್ಯಾಟಿಂಗ್.
ಮ್ಯಾಟ್ ಹೆನ್ರಿ ಎಸೆದ 6ನೇ ಓವರ್ನ 2ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ರಹಮಾನುಲ್ಲಾ ಗುರ್ಬಾಝ್.
5ನೇ ಎಸೆತದಲ್ಲಿ ಗುರ್ಬಾಝ್ ರನ್ನು ಕ್ಲೀನ್ ಬೌಲ್ಡ್ ಮಾಡಿದ ಮ್ಯಾಟ್ ಹೆನ್ರಿ.
ನ್ಯೂಝಿಲೆಂಡ್ ತಂಡಕ್ಕೆ ಮೊದಲ ಯಶಸ್ಸು.
5 ಓವರ್ಗಳ ಮುಕ್ತಾಯದ ವೇಳೆಗೆ 19 ರನ್ ಕಲೆಹಾಕಿದ ಅಫ್ಘಾನಿಸ್ತಾನ್ ತಂಡ.
ಕ್ರೀಸ್ನಲ್ಲಿ ರಹಮಾನುಲ್ಲಾ ಗುರ್ಬಾಝ್ ಹಾಗೂ ಇಬ್ರಾಹಿಂ ಝದ್ರಾನ್ ಬ್ಯಾಟಿಂಗ್.
ಅಫ್ಘಾನ್ ತಂಡದ ಉತ್ತಮ ಆರಂಭ.
ಮ್ಯಾಟ್ ಹೆನ್ರಿ ಎಸೆದ 4ನೇ ಓವರ್ನ 2ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಇಬ್ರಾಹಿಂ ಝದ್ರಾನ್.
ಇದು ಅಫ್ಘಾನಿಸ್ತಾನ್ ಇನಿಂಗ್ಸ್ನ ಮೊದಲ ಬೌಂಡರಿ.
ಕ್ರೀಸ್ನಲ್ಲಿ ರಹಮಾನುಲ್ಲಾ ಗುರ್ಬಾಝ್ ಹಾಗೂ ಇಬ್ರಾಹಿಂ ಝದ್ರಾನ್ ಬ್ಯಾಟಿಂಗ್.
ಮೊದಲ ಓವರ್ನಲ್ಲಿ ಕೇವಲ 3 ರನ್ ನೀಡಿದ ಎಡಗೈ ವೇಗಿ ಟ್ರೆಂಟ್ ಬೌಲ್ಟ್.
ಕ್ರೀಸ್ನಲ್ಲಿ ರಹಮಾನುಲ್ಲಾ ಗುರ್ಬಾಝ್ ಹಾಗೂ ಇಬ್ರಾಹಿಂ ಝದ್ರಾನ್ ಬ್ಯಾಟಿಂಗ್.
50 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 288 ರನ್ ಕಲೆಹಾಕಿದ ನ್ಯೂಝಿಲೆಂಡ್.
ಅಫ್ಘಾನಿಸ್ತಾನ್ ತಂಡಕ್ಕೆ 289 ರನ್ಗಳ ಸ್ಪರ್ಧಾತ್ಮಕ ಗುರಿ ನೀಡಿದ ಕಿವೀಸ್ ಪಡೆ.
ಅಝ್ಮತ್ ಒಮರ್ಝಾಹಿ ಎಸೆದ 49ನೇ ಓವರ್ನಲ್ಲಿ 2 ಫೋರ್ ಹಾಗೂ 1 ಸಿಕ್ಸ್ ಸಿಡಿಸಿದ ನ್ಯೂಝಿಲೆಂಡ್ ಬ್ಯಾಟರ್ಗಳು.
ಕ್ರೀಸ್ನಲ್ಲಿ ಮಾರ್ಕ್ ಚಾಪ್ಮನ್ ಹಾಗು ಮಿಚೆಲ್ ಸ್ಯಾಂಟ್ನರ್ ಬ್ಯಾಟಿಂಗ್.
ಕೊನೆಯ ಓವರ್ ಬಾಕಿ.
ನವೀನ್ ಉಲ್ ಹಕ್ ಎಸೆದ 48ನೇ ಓವರ್ನ ಮೊದಲ ಎಸೆತದಲ್ಲಿ ಕ್ಯಾಚ್ ನೀಡಿದ ಗ್ಲೆನ್ ಫಿಲಿಪ್ಸ್ (71).
ಮೂರನೇ ಎಸೆತದಲ್ಲಿ ಟಾಮ್ ಲಾಥಮ್ (68) ಕ್ಲೀನ್ ಬೌಲ್ಡ್.
ಕ್ರೀಸ್ನಲ್ಲಿ ಮಾರ್ಕ್ ಚಾಪ್ಮನ್ ಹಾಗು ಮಿಚೆಲ್ ಸ್ಯಾಂಟ್ನರ್ ಬ್ಯಾಟಿಂಗ್.
45ನೇ ಓವರ್ನ 3ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಸಿಕ್ಸ್ ಸಿಡಿಸಿದ ಗ್ಲೆನ್ ಫಿಲಿಪ್ಸ್.
4ನೇ ಎಸೆತದಲ್ಲಿ ಫಿಲಿಪ್ಸ್ ಬ್ಯಾಟ್ನಿಂದ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್.
ಕ್ರೀಸ್ನಲ್ಲಿ ಗ್ಲೆನ್ ಫಿಲಿಪ್ಸ್ ಹಾಗೂ ಟಾಮ್ ಲಾಥಮ್ ಬ್ಯಾಟಿಂಗ್.
ಮುಜೀಬ್ ಉರ್ ರೆಹಮಾನ್ ಎಸೆದ 42ನೇ ಓವರ್ನ 5ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಗ್ಲೆನ್ ಫಿಲಿಪ್ಸ್.
5ನೇ ವಿಕೆಟ್ಗೆ 89 ರನ್ಗಳ ಜೊತೆಯಾಟವಾಡಿದ ಲಾಥಮ್ – ಫಿಲಿಪ್ಸ್
ಕ್ರೀಸ್ನಲ್ಲಿ ಗ್ಲೆನ್ ಫಿಲಿಪ್ಸ್ ಹಾಗೂ ಟಾಮ್ ಲಾಥಮ್ ಬ್ಯಾಟಿಂಗ್.
40 ಓವರ್ಗಳ ಮುಕ್ತಾಯದ ವೇಳೆಗೆ 185 ರನ್ ಕಲೆಹಾಕಿದ ನ್ಯೂಝಿಲೆಂಡ್.
ಕ್ರೀಸ್ನಲ್ಲಿ ಗ್ಲೆನ್ ಫಿಲಿಪ್ಸ್ ಹಾಗೂ ಟಾಮ್ ಲಾಥಮ್ ಬ್ಯಾಟಿಂಗ್.
ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ ಹಾಗೂ ಡೇರಿಲ್ ಮಿಚೆಲ್…ಔಟ್.
ಐದನೇ ವಿಕೆಟ್ಗೆ 67 ರನ್ಗಳ ಜೊತೆಯಾಟವಾಡಿದ ಲಾಥಮ್ – ಫಿಲಿಪ್ಸ್
38 ಓವರ್ಗಳ ಮುಕ್ತಾಯದ ವೇಳೆಗೆ 177 ರನ್ ಕಲೆಹಾಕಿದ ನ್ಯೂಝಿಲೆಂಡ್.
ಕ್ರೀಸ್ನಲ್ಲಿ ಗ್ಲೆನ್ ಫಿಲಿಪ್ಸ್ ಹಾಗೂ ಟಾಮ್ ಲಾಥಮ್ ಬ್ಯಾಟಿಂಗ್.
35 ಓವರ್ಗಳಲ್ಲಿ 163 ರನ್ ಕಲೆಹಾಕಿದ ನ್ಯೂಝಿಲೆಂಡ್ ಬ್ಯಾಟರ್ಗಳು.
ಕ್ರೀಸ್ನಲ್ಲಿ ಗ್ಲೆನ್ ಫಿಲಿಪ್ಸ್ ಹಾಗೂ ಟಾಮ್ ಲಾಥಮ್ ಬ್ಯಾಟಿಂಗ್.
5ನೇ ವಿಕೆಟ್ಗೆ ಅರ್ಧಶತಕದ ಜೊತೆಯಾಟವಾಡಿರುವ ಫಿಲಿಪ್ಸ್ ಹಾಗೂ ಲಾಥಮ್.
ಮೊಹಮ್ಮದ್ ನಬಿ ಎಸೆದ 30ನೇ ಓವರ್ನ 3ನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಗ್ಲೆನ್ ಫಿಲಿಪ್ಸ್.
30 ಓವರ್ಗಳ ಮುಕ್ತಾಯದ ವೇಳೆಗೆ 138 ರನ್ ಕಲೆಹಾಕಿದ ನ್ಯೂಝಿಲೆಂಡ್.
ಕ್ರೀಸ್ನಲ್ಲಿ ಗ್ಲೆನ್ ಫಿಲಿಪ್ಸ್ ಹಾಗೂ ಟಾಮ್ ಲಾಥಮ್ ಬ್ಯಾಟಿಂಗ್.
28ನೇ ಓವರ್ ಅನ್ನು ಮೇಡನ್ ಮಾಡಿದ ಮೊಹಮ್ಮದ್ ನಬಿ.
ಅಫ್ಘಾನಿಸ್ತಾನ್ ತಂಡದಿಂದ ಉತ್ತಮ ಬೌಲಿಂಗ್.
ಕ್ರೀಸ್ನಲ್ಲಿ ಗ್ಲೆನ್ ಫಿಲಿಪ್ಸ್ ಹಾಗೂ ಟಾಮ್ ಲಾಥಮ್ ಬ್ಯಾಟಿಂಗ್.
25 ಓವರ್ಗಳ ಮುಕ್ತಾಯದ ವೇಳೆಗೆ 120 ರನ್ ಕಲೆಹಾಕಿದ ನ್ಯೂಝಿಲೆಂಡ್.
4 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಅಫ್ಘಾನ್ ಬೌಲರ್ಗಳು.
ಕ್ರೀಸ್ನಲ್ಲಿ ಗ್ಲೆನ್ ಫಿಲಿಪ್ಸ್ ಹಾಗೂ ಟಾಮ್ ಲಾಥಮ್ ಬ್ಯಾಟಿಂಗ್.
ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ ಹಾಗೂ ಡೇರಿಲ್ ಮಿಚೆಲ್…ಔಟ್.
ಅಝ್ಮತ್ ಒಮರ್ಝಾಹಿ ಎಸೆದ 21ನೇ ಓವರ್ನ ಕೊನೆಯ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ವಿಲ್ ಯಂಗ್ (54).
ರಶೀದ್ ಖಾನ್ ಎಸೆದ 22ನೇ ಓವರ್ನ 4ನೇ ಎಸೆತದಲ್ಲಿ ಕ್ಯಾಚ್ ನೀಡಿದ ಡೇರಿಲ್ ಮಿಚೆಲ್ (1).
ಬ್ಯಾಕ್ ಟು ಬ್ಯಾಕ್ 2 ವಿಕೆಟ್ ಕಬಳಿಸಿದ ಅಫ್ಘಾನ್ ಬೌಲರ್ಗಳು.
ಅಝ್ಮತ್ ಒಮರ್ಝಾಹಿ ಎಸೆದ 21ನೇ ಓವರ್ನ 2ನೇ ಎಸೆತದಲ್ಲಿ ಎಡಗೈ ದಾಂಡಿಗ ರಚಿನ್ ರವೀಂದ್ರ ಕ್ಲೀನ್ ಬೌಲ್ಡ್.
42 ಎಸೆತಗಳಲ್ಲಿ 32 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ರಚಿನ್ ರವೀಂದ್ರ.
ಅಫ್ಘಾನಿಸ್ತಾನ್ ತಂಡಕ್ಕೆ 2ನೇ ಯಶಸ್ಸು.
ಕ್ರೀಸ್ನಲ್ಲಿ ಡೇರಿಲ್ ಮಿಚೆಲ್ ಹಾಗೂ ವಿಲ್ ಯಂಗ್ ಬ್ಯಾಟಿಂಗ್.
20 ಓವರ್ಗಳ ಮುಕ್ತಾಯದ ವೇಳೆಗೆ 109 ರನ್ ಕಲೆಹಾಕಿದ ನ್ಯೂಝಿಲೆಂಡ್.
ಕೇವಲ ಡೆವೊನ್ ಕಾನ್ವೆ (20) ವಿಕೆಟ್ ಪಡೆಯಲು ಮಾತ್ರ ಯಶಸ್ವಿಯಾಗಿರುವ ಅಫ್ಘಾನಿಸ್ತಾನ್.
ಕ್ರೀಸ್ನಲ್ಲಿ ಎಡಗೈ ದಾಂಡಿಗ ರಚಿನ್ ರವೀಂದ್ರ (32) ಹಾಗೂ ಬಲಗೈ ಬ್ಯಾಟರ್ ವಿಲ್ ಯಂಗ್ (54) ಬ್ಯಾಟಿಂಗ್.
ರಶೀದ್ ಖಾನ್ ಎಸೆದ 18ನೇ ಓವರ್ನ ಮೊದಲ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ವಿಲ್ ಯಂಗ್.
ಈ ಫೋರ್ನೊಂದಿಗೆ 57 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ನ್ಯೂಝಿಲೆಂಡ್ ತಂಡದ ಆರಂಭಿಕ ಆಟಗಾರ ವಿಲ್ ಯಂಗ್.
ಕ್ರೀಸ್ನಲ್ಲಿ ರಚಿನ್ ರವೀಂದ್ರ ಹಾಗೂ ವಿಲ್ ಯಂಗ್ ಬ್ಯಾಟಿಂಗ್.
ಮೊಹಮ್ಮದ್ ನಬಿ ಎಸೆದ 15ನೇ ಓವರ್ನ ನಾಲ್ಕನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ವಿಲ್ ಯಂಗ್.
15 ಓವರ್ಗಳ ಮುಕ್ತಾಯದ ವೇಳೆಗೆ 80 ರನ್ ಕಲೆಹಾಕಿದ ನ್ಯೂಝಿಲೆಂಡ್.
ಕ್ರೀಸ್ನಲ್ಲಿ ರಚಿನ್ ರವೀಂದ್ರ ಹಾಗೂ ವಿಲ್ ಯಂಗ್ ಬ್ಯಾಟಿಂಗ್.
12 ಓವರ್ಗಳಲ್ಲಿ ಅರ್ಧಶತಕ ಪೂರೈಸಿದ ನ್ಯೂಝಿಲೆಂಡ್ ತಂಡ.
ಕ್ರೀಸ್ನಲ್ಲಿ ಎಡಗೈ ದಾಂಡಿಗ ರಚಿನ್ ರವೀಂದ್ರ ಹಾಗೂ ಬಲಗೈ ಬ್ಯಾಟರ್ ವಿಲ್ ಯಂಗ್ ಬ್ಯಾಟಿಂಗ್.
ಅಫ್ಘಾನ್ ತಂಡದಿಂದ ಉತ್ತಮ ಬೌಲಿಂಗ್.
ಡೆವೊನ್ ಕಾನ್ವೆ (20) ಔಟ್.
10 ಓವರ್ಗಳ ಮುಕ್ತಾಯದ ವೇಳೆಗೆ 43 ರನ್ ಕಲೆಹಾಕಿದ ನ್ಯೂಝಿಲೆಂಡ್.
ಕ್ರೀಸ್ನಲ್ಲಿ ರಚಿನ್ ರವೀಂದ್ರ ಹಾಗೂ ವಿಲ್ ಯಂಗ್ ಬ್ಯಾಟಿಂಗ್.
ಡೆವೊನ್ ಕಾನ್ವೆ (20) ವಿಕೆಟ್ ಪಡೆದ ಮುಜೀಬ್ ಉರ್ ರೆಹಮಾನ್.
ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡುತ್ತಿರುವ ಅಫ್ಘಾನಿಸ್ತಾನ್.
ಫಝಲ್ಹಕ್ ಫಾರೂಖಿ ಎಸೆದ 8ನೇ ಓವರ್ನ 2ನೇ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ವಿಲ್ ಯಂಗ್.
ಕ್ರೀಸ್ನಲ್ಲಿ ರಚಿನ್ ರವೀಂದ್ರ ಹಾಗೂ ವಿಲ್ ಯಂಗ್ ಬ್ಯಾಟಿಂಗ್.
ಡೆವೊನ್ ಕಾನ್ವೆ (20) ಔಟ್.
ಮುಜೀಬ್ ಉರ್ ರೆಹಮಾನ್ ಎಸೆದ 7ನೇ ಓವರ್ನ ಮೂರನೇ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆದ ಡೆವೊನ್ ಕಾನ್ವೆ.
18 ಎಸೆತಗಳಲ್ಲಿ 20 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಎಡಗೈ ದಾಂಡಿಗ ಡೆವೊನ್ ಕಾನ್ವೆ.
ಕ್ರೀಸ್ನಲ್ಲಿ ರಚಿನ್ ರವೀಂದ್ರ ಹಾಗೂ ವಿಲ್ ಯಂಗ್ ಬ್ಯಾಟಿಂಗ್.
ಮುಜೀಬ್ ಉರ್ ರೆಹಮಾನ್ ಎಸೆದ 3ನೇ ಓವರ್ನ ಮೊದಲ ಎಸೆತದಲ್ಲೇ ಲೆಗ್ ಸೈಡ್ನತ್ತ ಫೋರ್ ಬಾರಿಸಿದ ಡೆವೊನ್ ಕಾನ್ವೆ.
ಇದು ನ್ಯೂಝಿಲೆಂಡ್ ಇನಿಂಗ್ಸ್ನ ಮೊದಲ ಬೌಂಡರಿ.
ಮೂರು ಓವರ್ಗಳ ಮುಕ್ತಾಯದ ವೇಳೆಗೆ ನ್ಯೂಝಿಲೆಂಡ್ ಸ್ಕೋರ್ 12 ರನ್ಗಳು.
ಫಝಲ್ಹಕ್ ಫಾರೂಖಿ ಎಸೆದ 2ನೇ ಓವರ್ನ 5ನೇ ಎಸೆತದಲ್ಲಿ ವಿಲ್ ಯಂಗ್ ಸ್ಲಿಪ್ನಲ್ಲಿ ನೀಡಿದ ಸುಲಭ ಕ್ಯಾಚ್ ಡ್ರಾಪ್ ಮಾಡಿದ ರಹಮತ್ ಶಾ.
2ನೇ ಓವರ್ ಮೇಡನ್ ಮಾಡಿದ ಫಝಲ್ಹಕ್ ಫಾರೂಖಿ.
ಕ್ರೀಸ್ನಲ್ಲಿ ಡೆವೊನ್ ಕಾನ್ವೆ ಹಾಗೂ ವಿಲ್ ಯಂಗ್ ಬ್ಯಾಟಿಂಗ್.
ಮೊದಲ ಓವರ್ನಲ್ಲಿ ಕೇವಲ 2 ರನ್ ನೀಡಿದ ಮುಜೀಬ್ ಉರ್ ರೆಹಮಾನ್.
ಕ್ರೀಸ್ನಲ್ಲಿ ಡೆವೊನ್ ಕಾನ್ವೆ ಹಾಗೂ ವಿಲ್ ಯಂಗ್ ಬ್ಯಾಟಿಂಗ್.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿರುವ ಅಫ್ಘಾನಿಸ್ತಾನ್.
ನ್ಯೂಝಿಲೆಂಡ್ ಆರಂಭಿಕರು: ಡೆವೊನ್ ಕಾನ್ವೆ ಹಾಗೂ ವಿಲ್ ಯಂಗ್.
ಅಫ್ಘಾನಿಸ್ತಾನ್ ಪರ ಮೊದಲ ಓವರ್: ಮುಜೀಬ್ ಉರ್ ರೆಹಮಾನ್.
ನ್ಯೂಝಿಲೆಂಡ್ ಬ್ಯಾಟಿಂಗ್ ಲೈನಪ್: ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ಬೆಂಗಳೂರು: ಮುಂದಿನ ಒಂದೂವರೆ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮನೆಯೊಂದು ನೂರಾರು ಬಾಗಿಲಾಗಿದೆ. ಒಂದು ಟೀಂ 20 ಜನರನ್ನು ಕರೆದುಕೊಂಡು ಒಂದು ಕಡೆ ಹೋದರೆ, ಇನ್ನೊಂದು ಟೀಂ 10 ಜನರನ್ನು ಕರೆದುಕೊಂಡು ಬೇರೆಡೆ ಹೋಗುತ್ತೆ. ಒಂದು ಟೀಂ ಮೂವರನ್ನು ಡಿಸಿಎಂ ಮಾಡಬೇಕು ಎಂದು ಹೇಳುತ್ತೆ. ಮತ್ತೊಂದು ಟೀಂ ಬೇರೆಯವರನ್ನು ಸಿಎಂ ಮಾಡಬೇಕು ಎನ್ನುತ್ತಿದೆ. ರಾಜ್ಯದ ಜನ ಕಾಂಗ್ರೆಸ್ನವರನ್ನು ಥೂ.. ಛೀ.. ಎಂದು ಉಗೀತಿದ್ದಾರೆ ಎಂದು ಕೋಲಾರ ನಗರದಲ್ಲಿ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಹೇಳಿದರು.
ಅಫ್ಘಾನಿಸ್ತಾನ್ (ಪ್ಲೇಯಿಂಗ್ XI): ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಝಲ್ಹಕ್ ಫಾರೂಖಿ.
ನ್ಯೂಝಿಲೆಂಡ್ (ಪ್ಲೇಯಿಂಗ್ XI): ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ಟಾಸ್ ಗೆದ್ದಿರುವ ಅಫ್ಗಾನಿಸ್ತಾನ್ ತಂಡದ ನಾಯಕ ಹಶ್ಮತ್ ಶಾಹಿದಿ ಬೌಲಿಂಗ್ ಆಯ್ದುಕೊಂಡಿದ್ದಾರೆ.
Published On - 1:34 pm, Wed, 18 October 23