NZ vs AUS: ನ್ಯೂಝಿಲೆಂಡ್ ವಿರುದ್ಧ ಸರಣಿ ಗೆದ್ದ ಆಸ್ಟ್ರೇಲಿಯಾ
New Zealand vs Australia: ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಆಸ್ಟ್ರೇಲಿಯಾ ತಂಡ ಗೆದ್ದುಕೊಂಡಿದೆ. ಈ ಮೂಲಕ ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡ ಅದ್ಭುತ ಪ್ರದರ್ಶನ ಮುಂದುವರೆಸಿದೆ. ಇದಕ್ಕೂ ಮುನ್ನ ಕಮಿನ್ಸ್ ಕ್ಯಾಪ್ಟನ್ಸಿಯಲ್ಲಿ ಆಸ್ಟ್ರೇಲಿಯಾ, ಏಕದಿನ ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಗೆದ್ದುಕೊಂಡಿತ್ತು.

ಕ್ರೈಸ್ಟ್ಚರ್ಚ್ನಲ್ಲಿ ನಡೆದ ಆತಿಥೇಯ ನ್ಯೂಝಿಲೆಂಡ್ (New Zealand) ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಆಸ್ಟ್ರೇಲಿಯಾ (Australia) ತಂಡ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ 2 ಪಂದ್ಯಗಳ ಸರಣಿಯನ್ನು ಆಸೀಸ್ ಪಡೆ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 172 ರನ್ಗಳ ಭರ್ಜರಿ ಜಯ ಸಾಧಿಸಿತ್ತು.
ಇದೀಗ 2ನೇ ಪಂದ್ಯದಲ್ಲೂ ಪ್ಯಾಟ್ ಕಮಿನ್ಸ್ ಪಡೆ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಮೊದಲ ಇನಿಂಗ್ಸ್ನಲ್ಲಿ 162 ರನ್ ಕಲೆಹಾಕಿತು.
ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ನಲ್ಲಿ 256 ರನ್ ಗಳಿಸಿತು. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ತಂಡವು ರಚಿನ್ ರವೀಂದ್ರ (82) ಅವರ ಅರ್ಧಶತಕದ ನೆರವಿನಿಂದ 372 ರನ್ ಕಲೆಹಾಕಿತು.
ಮೊದಲ ಇನಿಂಗ್ಸ್ನ 94 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ನಲ್ಲಿ 279 ರನ್ಗಳ ಗುರಿ ಪಡೆದ ಆಸ್ಟ್ರೇಲಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿ ಅಜೇಯ 98 ರನ್ ಬಾರಿಸಿದರೆ, ಮಿಚೆಲ್ ಮಾರ್ಷ್ 80 ರನ್ ಕಲೆಹಾಕಿದರು. ಈ ಮೂಲಕ 7 ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾ ತಂಡವು 281 ರನ್ಗಳಿಸುವ ಮೂಲಕ 3 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ.
An incredible win from our Aussie men to wrap up a massive summer of cricket!
A well-deserved break now with all eyes set on a huge series against India at the end of the year!
Sign up to hear from us as soon as all the details for next summer drop: https://t.co/qBup11ljha pic.twitter.com/heirqxNWvc
— Cricket Australia (@CricketAus) March 11, 2024
ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ , ವಿಲ್ ಯಂಗ್ , ಕೇನ್ ವಿಲಿಯಮ್ಸನ್ , ರಚಿನ್ ರವೀಂದ್ರ , ಡೇರಿಲ್ ಮಿಚೆಲ್ , ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್) , ಗ್ಲೆನ್ ಫಿಲಿಪ್ಸ್ , ಸ್ಕಾಟ್ ಕುಗ್ಗೆಲಿನ್ , ಮ್ಯಾಟ್ ಹೆನ್ರಿ , ಟಿಮ್ ಸೌಥಿ (ನಾಯಕ) , ಬೆನ್ ಸಿಯರ್ಸ್.
ಇದನ್ನೂ ಓದಿ: IPL 2024: ಐಪಿಎಲ್ಗೆ ಮೂವರು ಬದಲಿ ಆಟಗಾರರು ಎಂಟ್ರಿ
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಸ್ಟೀವ್ ಸ್ಮಿತ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲ್ಯಾಬುಶೇನ್ , ಕ್ಯಾಮರೋನ್ ಗ್ರೀನ್ , ಟ್ರಾವಿಸ್ ಹೆಡ್ , ಮಿಚೆಲ್ ಮಾರ್ಷ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಜೋಶ್ ಹ್ಯಾಝಲ್ವುಡ್.
