NZ vs AUS: ನ್ಯೂಝಿಲೆಂಡ್ ವಿರುದ್ಧ ಸರಣಿ ಗೆದ್ದ ಆಸ್ಟ್ರೇಲಿಯಾ

New Zealand vs Australia: ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಆಸ್ಟ್ರೇಲಿಯಾ ತಂಡ ಗೆದ್ದುಕೊಂಡಿದೆ. ಈ ಮೂಲಕ ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡ ಅದ್ಭುತ ಪ್ರದರ್ಶನ ಮುಂದುವರೆಸಿದೆ. ಇದಕ್ಕೂ ಮುನ್ನ ಕಮಿನ್ಸ್ ಕ್ಯಾಪ್ಟನ್ಸಿಯಲ್ಲಿ ಆಸ್ಟ್ರೇಲಿಯಾ, ಏಕದಿನ ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಗೆದ್ದುಕೊಂಡಿತ್ತು.

NZ vs AUS: ನ್ಯೂಝಿಲೆಂಡ್ ವಿರುದ್ಧ ಸರಣಿ ಗೆದ್ದ ಆಸ್ಟ್ರೇಲಿಯಾ
Australia
Edited By:

Updated on: Mar 11, 2024 | 12:28 PM

ಕ್ರೈಸ್ಟ್​​ಚರ್ಚ್​ನಲ್ಲಿ ನಡೆದ ಆತಿಥೇಯ ನ್ಯೂಝಿಲೆಂಡ್ (New Zealand) ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಆಸ್ಟ್ರೇಲಿಯಾ (Australia) ತಂಡ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ 2 ಪಂದ್ಯಗಳ ಸರಣಿಯನ್ನು ಆಸೀಸ್ ಪಡೆ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 172 ರನ್​ಗಳ ಭರ್ಜರಿ ಜಯ ಸಾಧಿಸಿತ್ತು.

ಇದೀಗ 2ನೇ ಪಂದ್ಯದಲ್ಲೂ ಪ್ಯಾಟ್ ಕಮಿನ್ಸ್ ಪಡೆ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಮೊದಲ ಇನಿಂಗ್ಸ್​ನಲ್ಲಿ 162 ರನ್ ಕಲೆಹಾಕಿತು.

ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ನಲ್ಲಿ 256 ರನ್​ ಗಳಿಸಿತು. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ತಂಡವು ರಚಿನ್ ರವೀಂದ್ರ (82) ಅವರ ಅರ್ಧಶತಕದ ನೆರವಿನಿಂದ 372 ರನ್ ಕಲೆಹಾಕಿತು.

ಮೊದಲ ಇನಿಂಗ್ಸ್​ನ 94 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 279 ರನ್​ಗಳ ಗುರಿ ಪಡೆದ ಆಸ್ಟ್ರೇಲಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿ ಅಜೇಯ 98 ರನ್ ಬಾರಿಸಿದರೆ, ಮಿಚೆಲ್ ಮಾರ್ಷ್ 80 ರನ್ ಕಲೆಹಾಕಿದರು. ಈ ಮೂಲಕ 7 ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾ ತಂಡವು 281 ರನ್​ಗಳಿಸುವ ಮೂಲಕ 3 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ.

ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ , ವಿಲ್ ಯಂಗ್ , ಕೇನ್ ವಿಲಿಯಮ್ಸನ್ , ರಚಿನ್ ರವೀಂದ್ರ , ಡೇರಿಲ್ ಮಿಚೆಲ್ , ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್) , ಗ್ಲೆನ್ ಫಿಲಿಪ್ಸ್ , ಸ್ಕಾಟ್ ಕುಗ್ಗೆಲಿನ್ , ಮ್ಯಾಟ್ ಹೆನ್ರಿ , ಟಿಮ್ ಸೌಥಿ (ನಾಯಕ) , ಬೆನ್ ಸಿಯರ್ಸ್.

ಇದನ್ನೂ ಓದಿ: IPL 2024: ಐಪಿಎಲ್​ಗೆ ಮೂವರು ಬದಲಿ ಆಟಗಾರರು ಎಂಟ್ರಿ

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಸ್ಟೀವ್ ಸ್ಮಿತ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲ್ಯಾಬುಶೇನ್ , ಕ್ಯಾಮರೋನ್ ಗ್ರೀನ್ , ಟ್ರಾವಿಸ್ ಹೆಡ್ , ಮಿಚೆಲ್ ಮಾರ್ಷ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಜೋಶ್ ಹ್ಯಾಝಲ್​ವುಡ್.