ಟೀಮ್ ಇಂಡಿಯಾಗೆ ಕಠಿಣ ಗುರಿ ನೀಡಿದ ನ್ಯೂಝಿಲೆಂಡ್

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿ ಶುರುವಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪ್ರದರ್ಶನದೊಂದಿಗೆ ಭಾರತ ತಂಡಕ್ಕೆ ಕಠಿಣ ಗುರಿ ನೀಡಿದ್ದು, ಈ ಗುರಿಯನ್ನು ಟೀಮ್ ಇಂಡಿಯಾ ಚೇಸ್ ಮಾಡಲಿದೆಯಾ ಎಂಬುದೇ ಕುತೂಹಲ.

ಟೀಮ್ ಇಂಡಿಯಾಗೆ ಕಠಿಣ ಗುರಿ ನೀಡಿದ ನ್ಯೂಝಿಲೆಂಡ್
Ind Vs Nz
Image Credit source: GettyImages

Updated on: Oct 22, 2026 | 2:30 PM

ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್‌ಗಳಲ್ಲಿ 225 ರನ್ ಕಲೆಹಾಕಿದೆ. ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡಕ್ಕೆ ಆರಂಭಿಕ ದಾಂಡಿಗರಾದ ಫಿನ್ ಅಲೆನ್ ಹಾಗೂ ಟಿಮ್ ಸೈಫರ್ಟ್ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 49 ರನ್ ಪೇರಿಸಿದ ಈ ಜೋಡಿಯನ್ನು ಕೊನೆಗೂ ಮಯಾಂಕ್ ಯಾದವ್ ಯಶಸ್ವಿಯಾದರು.

ಮಯಾಂಕ್ ಯಾದವ್ ಎಸೆದ 5ನೇ ಓವರ್​ನ ಕೊನೆಯ ಎಸೆತದಲ್ಲಿ ಟಿಮ್ ಸೈಫರ್ಟ್ (24) ವಿಕೆಟ್ ಕೀಪರ್​​ಗೆ ಕ್ಯಾಚ್ ನೀಡಿ ಔಟಾದರು. ಇದಾಗ್ಯೂ ಮತ್ತೊಂದೆಡೆ ಆರ್ಭಟ ಮುಂದುವರೆಸಿದ ಫಿನ್ ಅಲೆನ್ 24 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್ ಹಾಗೂ 5 ಫೋರ್​ಗಳೊಂದಿಗೆ 45 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಡ್ಯಾರಿಲ್ ಮಿಚೆಲ್ 28 ರನ್​ಗಳ ಕೊಡುಗೆ ನೀಡಿದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಗ್ಲೆನ್ ಫಿಲಿಪ್ಸ್ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿ ಬಳಿಕ ಸಿಡಿಲಬ್ಬರ ಮುಂದುವರೆಸಿದ ಫಿಲಿಪ್ಸ್ 40 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 82 ರನ್ ಬಾರಿಸಿದರು.

ಮತ್ತೊಂದೆಡೆ ಯುವ ದಾಂಡಿಗ ಬೆವೊನ್ ಜೇಕಬ್ಸ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಟೀಮ್ ಇಂಡಿಯಾ ಬೌಲರ್​ಗಳನ್ನು ಲೀಲಾಜಾಲವಾಗಿ ಎದುರಿಸಿದ ಬೆವೊನ್ ಕೇವಲ 16 ಎಸೆತಗಳಲ್ಲಿ 31 ರನ್​ ಚಚ್ಚಿದರು. ಈ ಮೂಲಕ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 225 ರನ್ ಕಲೆಹಾಕಿದೆ.

  • ಟೀಮ್ ಇಂಡಿಯಾಗೆ 20 ಓವರ್​ಗಳಲ್ಲಿ 226 ರನ್​ಗಳ ಗುರಿ

ಭಾರತ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಮಯಾಂಕ್ ಯಾದವ್.

ಇದನ್ನೂ ಓದಿ: ಆಸ್ಟ್ರೇಲಿಯಾ ವೇಗಿಗೆ 2 ಪಂದ್ಯಗಳ ನಿಷೇಧ!

ನ್ಯೂಝಿಲೆಂಡ್ (ಪ್ಲೇಯಿಂಗ್ XI): ಫಿನ್ ಅಲೆನ್, ಟಿಮ್ ಸೈಫರ್ಟ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಬೆವೊನ್ ಜೇಕಬ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಆ್ಯಡಮ್ ಮಿಲ್ನ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್.

 

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us