
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿ ಶುರುವಾಗಿದೆ. ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ನ್ಯೂಝಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಿದೆ. ಇದಾಗ್ಯೂ ಈ ಆಡುವ ಬಳಗದಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನ ಲಭಿಸಿಲ್ಲ. ಅಂದರೆ ಈ ಪಂದ್ಯದಲ್ಲೂ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.
ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಕಣಕ್ಕಿಳಿದರೆ, ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಬ್ಯಾಟ್ ಬೀಸಲಿದ್ದಾರೆ. ಇನ್ನು ಐದನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಕಾಣಿಸಿಕೊಳ್ಳಲಿದ್ದಾರೆ.
ಈ ಪಂದ್ಯದ ಮೂಲಕ ಹಿರಿಯ ವೇಗಿ ಭುವನೇಶ್ವರ್ ಕುಮಾರ್ ಮತ್ತೊಮ್ಮೆ ಭಾರತ ತಂಡದ ವೇಗದ ವಿಭಾಗವನ್ನು ಮುನ್ನಡೆಸಲಿದ್ದಾರೆ. ಸುಮಾರು ನಾಲ್ಕು ವರ್ಷಗಳಿಂದ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ಹೊರಗುಳಿದಿದ್ದ ಭುವಿ, ಇತ್ತೀಚೆಗಷ್ಟೇ ಭಾರತ ತಂಡಕ್ಕೆ ಅನಿರೀಕ್ಷಿತವಾಗಿ ಮರಳಿದ್ದರು. ಇದೀಗ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದ ಮೂಲಕ ಭುವನೇಶ್ವರ್ ಕುಮಾರ್ ದೀರ್ಘ ಬಿಡುವಿನ ಬಳಿಕ ಟೀಮ್ ಇಂಡಿಯಾ ಪರ ಬ್ಲೂ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದಾರೆ. ಅದರಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಭಾರತ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಮಯಾಂಕ್ ಯಾದವ್
ನ್ಯೂಝಿಲೆಂಡ್ (ಪ್ಲೇಯಿಂಗ್ XI): ಫಿನ್ ಅಲೆನ್, ಟಿಮ್ ಸೈಫರ್ಟ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಬೆವೊನ್ ಜೇಕಬ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಆ್ಯಡಮ್ ಮಿಲ್ನ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್.
ಇದನ್ನೂ ಓದಿ: ‘ಭುವಿ’ ಕಂಬ್ಯಾಕ್: 4 ವರ್ಷಗಳ ಬಳಿಕ ಅವಕಾಶ ನೀಡಿದ ರಹಸ್ಯ ಬಿಚ್ಚಿಟ್ಟ ಅಯ್ಯರ್!
ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಪ್ರಿನ್ಸ್ ಯಾದವ್, ಮಾಯಾಂಕ್ ಯಾದವ್, ಅರ್ಷದೀಪ್ ಸಿಂಗ್ ಸಿಂಗ್, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್.
Published On - 12:09 pm, Thu, 22 October 26