AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಸ್ ಗೆದ್ದ ಟೀಮ್ ಇಂಡಿಯಾ: ನ್ಯೂಝಿಲೆಂಡ್​ಗೆ ಆರಂಭಿಕ ಆಘಾತ

ಕ್ರಿಕೆಟ್ ಲೋಕದ ಎರಡು ಬಲಿಷ್ಠ ತಂಡಗಳಾದ ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಬಹುನಿರೀಕ್ಷಿತ ಟೆಸ್ಟ್ ಸಮರಕ್ಕೆ ಕೊನೆಗೂ ಅಧಿಕೃತ ಚಾಲನೆ ಸಿಕ್ಕಿದೆ. ವೆಲ್ಲಿಂಗ್ಟನ್‌ನ ಹಸಿರು ಮೇಲ್ಮೈ ಪಿಚ್‌ನಲ್ಲಿ ಆರಂಭವಾಗಿರುವ ಈ ರೋಚಕ ಕದನವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಅಂಕಪಟ್ಟಿಯ ದೃಷ್ಟಿಯಿಂದ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ಈ ಸರಣಿಯಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಟಾಸ್ ಗೆದ್ದ ಟೀಮ್ ಇಂಡಿಯಾ: ನ್ಯೂಝಿಲೆಂಡ್​ಗೆ ಆರಂಭಿಕ ಆಘಾತ
Team India Image Credit source: BCCI
ಝಾಹಿರ್ ಯೂಸುಫ್
|

Updated on: Nov 19, 2026 | 7:13 AM

Share

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿ ಶುರುವಾಗಿದೆ. ವೆಲ್ಲಿಂಗ್ಟನ್​ನ ಬೇಸಿನ್ ರಿಸರ್ಸ್​ ಮೈದಾನದಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ. ಅದರಂತೆ ಮೊದಲು ಬೌಲಿಂಗ್ ಮಾಡುತ್ತಿರುವ ನ್ಯೂಝಿಲೆಂಡ್ ತಂಡವು ಆರಂಭಿಕ ಆಘಾತಕ್ಕೆ ಒಳಗಾಗಿದೆ.

ಜಸ್‌ಪ್ರೀತ್ ಬುಮ್ರಾ ಅವರ ಮಾರಕ ದಾಳಿಗೆ ತತ್ತರಿಸಿದ ಕಿವೀಸ್ ಪಡೆ, 70 ರನ್ ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಹೆನ್ರಿ ನಿಕೋಲ್ಸ್ 46 ರನ್ ಬಾರಿಸಿ ತಂಡಕ್ಕೆ ಆಸರೆಯಾಗಿ ನಿಂತಿದ್ದಾರೆ. ಅದರಂತೆ 34 ಓವರ್‌ಗಳ ಮುಕ್ತಾಯದ ವೇಳೆಗೆ ನ್ಯೂಝಿಲೆಂಡ್ ತಂಡ 5 ವಿಕೆಟ್ ಕಳೆದುಕೊಂಡು 95 ರನ್ ಕಲೆಹಾಕಿದೆ. ಟೀಮ್ ಇಂಡಿಯಾ ಪರ ಬುಮ್ರಾ 3 ವಿಕೆಟ್ ಪಡೆದರೆ, ಆಕಾಶ್ ದೀಪ್ ಹಾಗೂ ಅನ್ಶುಲ್ ಕಂಬೋಜ್ ತಲಾ 1 ವಿಕೆಟ್ ಕಬಳಿಸಿದ್ದಾರೆ.

ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ (ನಾಯಕ) , ಡೆವೊನ್ ಕಾನ್ವೇ , ಹೆನ್ರಿ ನಿಕೋಲ್ಸ್ , ರಚಿನ್ ರವೀಂದ್ರ , ಡ್ಯಾರಿಲ್ ಮಿಚೆಲ್ , ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್) , ಗ್ಲೆನ್ ಫಿಲಿಪ್ಸ್ , ನಾಥನ್ ಸ್ಮಿತ್ , ಕೈಲ್ ಜೇಮಿಸನ್ , ಮ್ಯಾಟ್ ಹೆನ್ರಿ.

ಭಾರತ ಪ್ಲೇಯಿಂಗ್ 11: ಕೆಎಲ್ ರಾಹುಲ್ , ಯಶಸ್ವಿ ಜೈಸ್ವಾಲ್ , ದೇವದತ್ ಪಡಿಕ್ಕಲ್ , ಶುಭ್​ಮನ್ ಗಿಲ್ (ನಾಯಕ) , ರಿಷಭ್ ಪಂತ್ (ವಿಕೆಟ್ ಕೀಪರ್) , ವಾಷಿಂಗ್ಟನ್ ಸುಂದರ್ , ಧ್ರುವ್ ಜುರೆಲ್ , ಆಕಾಶ್ ದೀಪ್ , ಅನ್ಶುಲ್ ಕಂಬೋಜ್ , ಜಸ್​ಪ್ರೀತ್ ಬುಮ್ರಾ , ಪ್ರಸಿದ್ಧ್ ಕೃಷ್ಣ.

WTC ಫೈನಲ್ ರೇಸ್:

2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ಹಂತಕ್ಕೆ ತಲುಪುವ ನಿಟ್ಟಿನಲ್ಲಿ ಈ ಸರಣಿಯು ಉಭಯ ತಂಡಗಳಿಗೂ ಅತ್ಯಂತ ನಿರ್ಣಾಯಕ ಘಟ್ಟವಾಗಿದೆ. ಪ್ರಸ್ತುತ ಅಂಕಪಟ್ಟಿಯಲ್ಲಿ 51.52% ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾಕ್ಕೆ ಈ ಸರಣಿಯಲ್ಲಿ ಕೇವಲ 7 ಪಂದ್ಯಗಳು ಮಾತ್ರ ಬಾಕಿ ಉಳಿದಿದ್ದು, ಫೈನಲ್ ರೇಸ್‌ನಲ್ಲಿ ಜೀವಂತವಾಗಿರಲು ಈ ಸರಣಿಯ ಎರಡೂ ಪಂದ್ಯಗಳಲ್ಲಿ ಜಯಗಳಿಸುವುದು ಅನಿವಾರ್ಯವಾಗಿದೆ.

ನ್ಯೂಝಿಲೆಂಡ್ ವಿರುದ್ಧದ ಈ ಸರಣಿಯಲ್ಲಿ ಎದುರಾಗುವ ಒಂದು ಸಣ್ಣ ಹಿನ್ನಡೆಯೂ ಭಾರತದ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಲಿದೆ. ಇನ್ನೊಂದೆಡೆ, 72.22% ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿರುವ ನ್ಯೂಝಿಲೆಂಡ್‌ಗೆ, ಮುಂದಿನ ದಿನಗಳಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಅವರದೇ ನೆಲದಲ್ಲಿ ಕಠಿಣ ಸವಾಲು ಎದುರಾಗಲಿರುವುದರಿಂದ, ತವರಿನ ಪಿಚ್‌ಗಳ ಸಂಪೂರ್ಣ ಲಾಭ ಪಡೆದು ಭಾರತವನ್ನು ಮಣಿಸುವ ಮೂಲಕ ಫೈನಲ್ ಟಿಕೆಟ್ ಅನ್ನು ಈಗಲೇ ಖಚಿತಪಡಿಸಿಕೊಳ್ಳುವ ಸುವರ್ಣಾವಕಾಶವಿದೆ.

ಉಭಯ ತಂಡಗಳ ಮುಖಾಮುಖಿ:

1955 ರಿಂದ ಇಲ್ಲಿಯವರೆಗೆ ಭಾರತ ಮತ್ತು ನ್ಯೂಝಿಲೆಂಡ್ ನಡುವೆ ಒಟ್ಟು 65 ಟೆಸ್ಟ್ ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತವು 22 ಪಂದ್ಯಗಳನ್ನು ಗೆದ್ದು ಮುನ್ನಡೆ ಸಾಧಿಸಿದರೆ, ನ್ಯೂಝಿಲೆಂಡ್ 16 ಪಂದ್ಯಗಳಲ್ಲಿ ಜಯಗಳಿಸಿದೆ. ಇನ್ನು 27 ಪಂದ್ಯಗಳು ಡ್ರಾ ಆಗಿವೆ.

ಭಾರತದ ನೆಲದಲ್ಲಿ ನಡೆದ 39 ಪಂದ್ಯಗಳಲ್ಲಿ ಟೀಮ್ ಇಂಡಿಯಾ 17 ಪಂದ್ಯಗಳನ್ನು ಗೆದ್ದು ಪ್ರಾಬಲ್ಯ ಮೆರೆದಿದ್ದರೆ (ನ್ಯೂಝಿಲೆಂಡ್ ಗೆಲುವು 5, ಡ್ರಾ 17), ನ್ಯೂಝಿಲೆಂಡ್ ನೆಲದಲ್ಲಿ ನಡೆದ 25 ಪಂದ್ಯಗಳಲ್ಲಿ ಕಿವೀಸ್ ಪಡೆ 10 ಪಂದ್ಯಗಳನ್ನು ಗೆದ್ದು ಮೇಲುಗೈ ಸಾಧಿಸಿದೆ (ಭಾರತದ ಗೆಲುವು 5, ಡ್ರಾ 10).

ಇನ್ನು ಇಂಗ್ಲೆಂಡ್‌ನಲ್ಲಿ ನಡೆದ 2021ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ಜಯಗಳಿಸಿತ್ತು. ಸರಣಿಗಳ ಲೆಕ್ಕಾಚಾರದಲ್ಲಿ ಇಲ್ಲಿಯವರೆಗೆ ನಡೆದಿರುವ ಒಟ್ಟು 24 ಸರಣಿಗಳಲ್ಲಿ ಭಾರತ 12 ಸರಣಿಗಳನ್ನು ಗೆದ್ದಿದ್ದರೆ, ನ್ಯೂಝಿಲೆಂಡ್ 8 ಸರಣಿಗಳನ್ನು ತನ್ನದಾಗಿಸಿಕೊಂಡಿದೆ.

ನ್ಯೂಝಿಲೆಂಡ್ ಟೆಸ್ಟ್ ತಂಡ: ಟಾಮ್‌ ಲ್ಯಾಥಮ್‌ (ನಾಯಕ), ಟಾಮ್‌ ಬ್ಲಂಡೆಲ್‌, ಡೆವೊನ್‌ ಕಾನ್ವೇ, ಜೇಕಬ್‌ ಡಫಿ, ಮ್ಯಾಟ್‌ ಹೆನ್ರಿ, ಕೈಲ್‌ ಜೇಮಿಸನ್‌, ಡ್ಯಾರಿಲ್‌ ಮಿಚೆಲ್‌, ಹೆನ್ರಿ ನಿಕೋಲ್ಸ್‌, ಗ್ಲೆನ್‌ ಫಿಲಿಪ್ಸ್‌, ರಚಿನ್‌ ರವೀಂದ್ರ, ನಾಥನ್‌ ಸ್ಮಿತ್‌, ಬ್ಲೇರ್‌ ಟಿಕ್ನರ್‌, ವಿಲ್‌ ಯಂಗ್‌, ಡೀನ್ ಫಾಕ್ಸ್‌ಕ್ರಾಫ್ಟ್.

ಭಾರತದ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪನಾಯಕ), ದೇವದತ್ ಪಡಿಕ್ಕಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅನ್ಶುಲ್ ಕಂಬೋಜ್, ಜಸ್​ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಸಾಯಿ ಸುದರ್ಶನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಗುರ್ನೂರ್ ಬ್ರಾರ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ತಮ್ಮ ಬ್ಯಾಂಕ್ ಮೇಲಿನ ಆರೋಪಗಳಿಗೆ ಯತ್ನಾಳ್ ಸ್ಪಷ್ಟನೆ
ತಮ್ಮ ಬ್ಯಾಂಕ್ ಮೇಲಿನ ಆರೋಪಗಳಿಗೆ ಯತ್ನಾಳ್ ಸ್ಪಷ್ಟನೆ
ಕೃಷಿಮೇಳದಲ್ಲಿ ಗಮನಸೆಳೆದ 25 ಲೀಟರ್ ಹಾಲು ಕೊಡುವ ಆನೆಯಂಥಾ ಎಮ್ಮೆ
ಕೃಷಿಮೇಳದಲ್ಲಿ ಗಮನಸೆಳೆದ 25 ಲೀಟರ್ ಹಾಲು ಕೊಡುವ ಆನೆಯಂಥಾ ಎಮ್ಮೆ
ಎಲ್ಲರ ಎದುರು ಪ್ರಿಯಾಂಕಾ ಉಪೇಂದ್ರಗೆ ಕ್ಷಮೆ ಕೇಳಿದ ನಿರ್ದೇಶಕ ಪುರುಷೋತ್ತಮ್
ಎಲ್ಲರ ಎದುರು ಪ್ರಿಯಾಂಕಾ ಉಪೇಂದ್ರಗೆ ಕ್ಷಮೆ ಕೇಳಿದ ನಿರ್ದೇಶಕ ಪುರುಷೋತ್ತಮ್
ಮೊದಲ ಬಾರಿ ಒಟ್ಟಿಗೆ ಕಾಣಿಸಿಕೊಂಡ ಟ್ರಂಪ್, ಪುಟಿನ್, ಕ್ಸಿ ಜಿನ್‌ಪಿಂಗ್
ಮೊದಲ ಬಾರಿ ಒಟ್ಟಿಗೆ ಕಾಣಿಸಿಕೊಂಡ ಟ್ರಂಪ್, ಪುಟಿನ್, ಕ್ಸಿ ಜಿನ್‌ಪಿಂಗ್
ಬರದ ಮಧ್ಯೆ ಕಲಬುರಗಿ ರೈತನ ಈರುಳ್ಳಿ ಕ್ರಾಂತಿ: ವಿದೇಶಕ್ಕೆ ರಫ್ತು
ಬರದ ಮಧ್ಯೆ ಕಲಬುರಗಿ ರೈತನ ಈರುಳ್ಳಿ ಕ್ರಾಂತಿ: ವಿದೇಶಕ್ಕೆ ರಫ್ತು
ಬೆಂಗಳೂರಿಗೆ ನಾನೇ ಲಾಸ್ಟ್ ಅನ್ ಡಿವೈಡೆಡ್ ಪೊಲೀಸ್ ಕಮಿಷನರ್: ಸೀಮಂತ್ ಕುಮಾರ್
ಬೆಂಗಳೂರಿಗೆ ನಾನೇ ಲಾಸ್ಟ್ ಅನ್ ಡಿವೈಡೆಡ್ ಪೊಲೀಸ್ ಕಮಿಷನರ್: ಸೀಮಂತ್ ಕುಮಾರ್
‘ಆಯುಷ್’ ಸಿನಿಮಾ ವಿವಾದ ಬಗೆಹರಿದಿದ್ದು ಹೇಗೆ? ವಿವರಿಸಿದ ಜಯಮಾಲಾ
‘ಆಯುಷ್’ ಸಿನಿಮಾ ವಿವಾದ ಬಗೆಹರಿದಿದ್ದು ಹೇಗೆ? ವಿವರಿಸಿದ ಜಯಮಾಲಾ
ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಹಿತೇಂದ್ರ ಅಧಿಕಾರ ಸ್ವೀಕಾರ
ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಹಿತೇಂದ್ರ ಅಧಿಕಾರ ಸ್ವೀಕಾರ
ಆಸಿಯಾ ಮೇಲೆ ಹಲ್ಲೆಗೆ ರೆಡಿಯಾದ ಸೌಂದರ್ಯಾ: ವಿಡಿಯೋ
ಆಸಿಯಾ ಮೇಲೆ ಹಲ್ಲೆಗೆ ರೆಡಿಯಾದ ಸೌಂದರ್ಯಾ: ವಿಡಿಯೋ
‘ಆಯುಷ್’ ಸಿನಿಮಾ ವಿವಾದ, ಸಂಧಾನ ಸಭೆ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು
‘ಆಯುಷ್’ ಸಿನಿಮಾ ವಿವಾದ, ಸಂಧಾನ ಸಭೆ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು