AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಸ್ ಗೆದ್ದ ಶ್ರೇಯಸ್: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ

ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಒಟ್ಟು 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಟೀಮ್ ಇಂಡಿಯಾ 20 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 11 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯ ರೋಮಾಂಚಕ ಟೈನಲ್ಲಿ ಅಂತ್ಯಗೊಂಡಿತ್ತು.

ಟಾಸ್ ಗೆದ್ದ ಶ್ರೇಯಸ್: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ
Ind Vs Nz Image Credit source: BCCI
ಝಾಹಿರ್ ಯೂಸುಫ್
|

Updated on: Oct 24, 2026 | 12:06 PM

Share

ಭಾರತ ಮತ್ತು ನ್ಯೂಝಿಲೆಂಡ್ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಮ್ಯಾಚ್ ಶುರುವಾಗಿದೆ. ಕ್ರೈಸ್ಟ್​ಚರ್ಚ್​ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ನ್ಯೂಝಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಎರಡು ಬದಲಾವಣೆ ಮಾಡಲಾಗಿದೆ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಇಶಾನ್ ಕಿಶನ್ ಗಾಯಗೊಂಡಿದ್ದು, ಹೀಗಾಗಿ ಈ ಮ್ಯಾಚ್​ಗೆ ಅಲಭ್ಯರಾಗಿದ್ದಾರೆ. ಅವರ ಬದಲಿಗೆ ಪ್ಲೇಯಿಂಗ್ ಇಲೆವೆನ್​ ವೈಭವ್ ಸೂರ್ಯವಂಶಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ವೇಗಿ ಮಯಾಂಕ್ ಯಾದವ್ ಬದಲಿಗೆ ಪ್ರಿನ್ಸ್ ಯಾದವ್​ಗೆ ಆಡುವ ಬಳಗದಲ್ಲಿ ಅವಕಾಶ ಲಭಿಸಿದೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಭಾರತ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಪ್ರಿನ್ಸ್​ ಯಾದವ್.

ನ್ಯೂಝಿಲೆಂಡ್ (ಪ್ಲೇಯಿಂಗ್ XI): ಫಿನ್ ಅಲೆನ್, ಟಿಮ್ ಸೈಫರ್ಟ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಬೆವೊನ್ ಜೇಕಬ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಮ್ಯಾಟ್ ಹೆನ್ರಿ, ಜೇಕಬ್ ಡಫಿ, ಲಾಕಿ ಫರ್ಗುಸನ್.

ಭಾರತಕ್ಕೆ ಸರಣಿ ಮುನ್ನಡೆ:

ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು. ಕ್ರೈಸ್ಟ್​ಚರ್ಚ್​ನ ಹ್ಯಾಗ್ಲಿ ಓವಲ್ ಮೈದಾನದಲ್ಲೇ ನಡೆದ ಮೊದಲ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ 225 ರನ್​ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ 19.4 ಓವರ್​ಗಳಲ್ಲಿ ಚೇಸ್ ಮಾಡಿ 4 ವಿಕೆಟ್​ಗಳ ಜಯ ಸಾಧಿಸಿತ್ತು. ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಹೊಂದಿದೆ.

ಇದೀಗ ಎರಡನೇ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆಯುತ್ತಿರುವುದರಿಂದ, ಮೊದಲ ಪಂದ್ಯದಂತೆ ಇಂದೂ ಕೂಡ ರನ್ ಮಳೆಯನ್ನು ನಿರೀಕ್ಷಿಸಬಹುದಾಗಿದೆ. ಹೀಗಾಗಿ ಈ ಪಂದ್ಯದಲ್ಲೂ ಮತ್ತೊಂದು ರಣರೋಚಕ ಹೋರಾಟ ನಡೆಯುವ ಸಾಧ್ಯತೆಯಿದೆ.

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ (ವಿಕೆಟ್ ಕೀಪರ್),  ತಿಲಕ್ ವರ್ಮಾ, ಅಕ್ಷರ್ ಪಟೇಲ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಪ್ರಿನ್ಸ್ ಯಾದವ್, ಮಾಯಾಂಕ್ ಯಾದವ್, ಅರ್ಷದೀಪ್ ಸಿಂಗ್ ಸಿಂಗ್, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಇಶಾನ್ ಕಿಶನ್, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್).

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More