
ಭಾರತ ಮತ್ತು ನ್ಯೂಝಿಲೆಂಡ್ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಮ್ಯಾಚ್ ಶುರುವಾಗಿದೆ. ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ನ್ಯೂಝಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಎರಡು ಬದಲಾವಣೆ ಮಾಡಲಾಗಿದೆ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಇಶಾನ್ ಕಿಶನ್ ಗಾಯಗೊಂಡಿದ್ದು, ಹೀಗಾಗಿ ಈ ಮ್ಯಾಚ್ಗೆ ಅಲಭ್ಯರಾಗಿದ್ದಾರೆ. ಅವರ ಬದಲಿಗೆ ಪ್ಲೇಯಿಂಗ್ ಇಲೆವೆನ್ ವೈಭವ್ ಸೂರ್ಯವಂಶಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ವೇಗಿ ಮಯಾಂಕ್ ಯಾದವ್ ಬದಲಿಗೆ ಪ್ರಿನ್ಸ್ ಯಾದವ್ಗೆ ಆಡುವ ಬಳಗದಲ್ಲಿ ಅವಕಾಶ ಲಭಿಸಿದೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಭಾರತ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್.
ನ್ಯೂಝಿಲೆಂಡ್ (ಪ್ಲೇಯಿಂಗ್ XI): ಫಿನ್ ಅಲೆನ್, ಟಿಮ್ ಸೈಫರ್ಟ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಬೆವೊನ್ ಜೇಕಬ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಮ್ಯಾಟ್ ಹೆನ್ರಿ, ಜೇಕಬ್ ಡಫಿ, ಲಾಕಿ ಫರ್ಗುಸನ್.
ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು. ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ ಮೈದಾನದಲ್ಲೇ ನಡೆದ ಮೊದಲ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್ಗಳಲ್ಲಿ 225 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ 19.4 ಓವರ್ಗಳಲ್ಲಿ ಚೇಸ್ ಮಾಡಿ 4 ವಿಕೆಟ್ಗಳ ಜಯ ಸಾಧಿಸಿತ್ತು. ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಹೊಂದಿದೆ.
ಇದೀಗ ಎರಡನೇ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆಯುತ್ತಿರುವುದರಿಂದ, ಮೊದಲ ಪಂದ್ಯದಂತೆ ಇಂದೂ ಕೂಡ ರನ್ ಮಳೆಯನ್ನು ನಿರೀಕ್ಷಿಸಬಹುದಾಗಿದೆ. ಹೀಗಾಗಿ ಈ ಪಂದ್ಯದಲ್ಲೂ ಮತ್ತೊಂದು ರಣರೋಚಕ ಹೋರಾಟ ನಡೆಯುವ ಸಾಧ್ಯತೆಯಿದೆ.
ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ (ವಿಕೆಟ್ ಕೀಪರ್), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಪ್ರಿನ್ಸ್ ಯಾದವ್, ಮಾಯಾಂಕ್ ಯಾದವ್, ಅರ್ಷದೀಪ್ ಸಿಂಗ್ ಸಿಂಗ್, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಇಶಾನ್ ಕಿಶನ್, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್).