
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್ ಮೈದಾನದಲ್ಲಿ ನಡೆಯಬೇಕಿದ್ದ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ಇದಾಗ್ಯೂ, ವಿಳಂಬವಾಗಿ ನಡೆದ ಟಾಸ್ ಪ್ರಕ್ರಿಯೆಯಲ್ಲಿ ಟೀಮ್ ಇಂಡಿಯಾ ಟಾಸ್ ಜಯಿಸಿ ಬೌಲಿಂಗ್ ಆಯ್ದುಕೊಂಡಿತು. ಆದರೆ, ಟಾಸ್ ಬೆನ್ನಲ್ಲೇ ಶುರುವಾದ ಧಾರಾಕಾರ ಮಳೆಯಿಂದಾಗಿ ಪಂದ್ಯ ಆರಂಭಿಸಲು ಸಾಧ್ಯವಾಗಲೇ ಇಲ್ಲ. ಮೈದಾನದಲ್ಲಿ ಅತಿಯಾಗಿ ನೀರು ನಿಂತಿದ್ದರಿಂದ , ಅಂಪೈರ್‌ಗಳು ಪಂದ್ಯವನ್ನು ರದ್ದುಪಡಿಸುವ ಅಂತಿಮ ತೀರ್ಮಾನ ತೆಗೆದುಕೊಂಡರು.
ಇದರೊಂದಿಗೆ ಐದು ಪಂದ್ಯಗಳ ಸರಣಿಯು 2-0 ಅಂತರದಲ್ಲಿ ಮುಂದುವರಿದಿದೆ. ಅಂದರೆ ಟೀಮ್ ಇಂಡಿಯಾಗೆ ಸರಣಿ ಜಯಿಸಲು ಅತ್ಯುತ್ತಮ ಅವಕಾಶವಿದೆ. ಏಕೆಂದರೆ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಭಾರತ ಗೆಲುವು ದಾಖಲಿಸಿದೆ. ಹೀಗಾಗಿ ಮುಂದಿನ ಎರಡು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಗೆದ್ದರೂ ಭಾರತ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಮತ್ತೊಂದೆಡೆ, ಸರಣಿಯನ್ನು ಡ್ರಾ ಮಾಡಿಕೊಳ್ಳಬೇಕಿದ್ದರೆ ಮುಂದಿನ ಎರಡೂ ಪಂದ್ಯಗಳಲ್ಲೂ ನ್ಯೂಝಿಲೆಂಡ್ ತಂಡ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ನಾಲ್ಕನೇ ಪಂದ್ಯವು ನವೆಂಬರ್ 14 ರಂದು ನಡೆಯಲಿದ್ದು, ಈ ಪಂದ್ಯಕ್ಕೆ ಮೌಂಟ್ ಮೌಂಗನುಯಿ ಬೇ ಓವಲ್ ಮೈದಾನ ಆತಿಥ್ಯವಹಿಸಲಿದೆ.
ಭಾರತದ ಏಕದಿನ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ ಧೀರ್, ಅನ್ಶುಲ್ ಕಂಬೋಜ್, ಗುರ್ನೂರ್ ಬ್ರಾರ್, ರುತುರಾಜ್ ಗಾಯಕ್ವಾಡ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಆಖಿಬ್ ನಬಿ, ಕುಲ್ದೀಪ್ ಯಾದವ್.
ಇದನ್ನೂ ಓದಿ: 149 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ವಿಶ್ವ ದಾಖಲೆ ಬರೆದ ಝಿಂಬಾಬ್ವೆ
ನ್ಯೂಝಿಲೆಂಡ್ ಏಕದಿನ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕಲ್ ಬ್ರೇಸ್‌ವೆಲ್, ಕ್ರಿಸ್ಟಿಯನ್ ಕ್ಲಾರ್ಕ್, ಜೇಕಬ್ ಡಫಿ, ಮ್ಯಾಟ್ ಫಿಶರ್, ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಟಿಮ್ ಸೈಫರ್ಟ್, ನಾಥನ್ ಸ್ಮಿತ್, ವಿಲ್ ಯಂಗ್.