40 ಓವರ್​ಗಳ ಪಂದ್ಯ, ಟಾಸ್ ಗೆದ್ದ ಭಾರತ, ಉಭಯ ತಂಡಗಳು ಹೀಗಿವೆ

ಭಾರತ ಮತ್ತು ನ್ಯೂಝಿಲೆಂಡ್ ಏಕದಿನ ಕ್ರಿಕೆಟ್‌ ನಲ್ಲಿ ಈವರೆಗೆ 125 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 65 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 52 ಮ್ಯಾಚ್ ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 7 ಪಂದ್ಯಗಳು ಕಾರಣಾಂತರದಿಂದ ರದ್ದಾದರೆ, ಒಂದು ಮ್ಯಾಚ್ ಟೈನಲ್ಲಿ ಅಂತ್ಯಗೊಂಡಿತ್ತು.

40 ಓವರ್​ಗಳ ಪಂದ್ಯ, ಟಾಸ್ ಗೆದ್ದ ಭಾರತ, ಉಭಯ ತಂಡಗಳು ಹೀಗಿವೆ
Team India
Image Credit source: BCCI

Updated on: Nov 10, 2026 | 9:21 AM

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯ ಶುರುವಾಗಿದೆ. ಹ್ಯಾಮಿಲ್ಟನ್​ನ ಸೇಡನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ನ್ಯೂಝಿಲೆಂಡ್ ಮೊದಲು ಬ್ಯಾಟ್ ಮಾಡಲಿದೆ.

ಮಳೆಯ ಕಾರಣ ವಿಳಂಬವಾಗಿರುವ ಈ ಪಂದ್ಯದಲ್ಲಿ ತಲಾ 10 ಓವರ್‌ಗಳನ್ನು ಕಡಿತಗೊಳಿಸಲಾಗಿದ್ದು, ಅದರಂತೆ ಉಭಯ ತಂಡಗಳು 40 ಓವರ್‌ಗಳ ಇನಿಂಗ್ಸ್ ಆಡಲಿವೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

Loading...

ನ್ಯೂಝಿಲೆಂಡ್ (ಪ್ಲೇಯಿಂಗ್ XI): ವಿಲ್ ಯಂಗ್, ಟಿಮ್ ಸೈಫರ್ಟ್​, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಕೈಲ್ ಜೇಮಿಸನ್, ಜೇಕಬ್ ಡಫಿ, ಮ್ಯಾಥ್ಯೂ ಫಿಶರ್.

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಶುಭ್​ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಮನ್ ಧೀರ್, ಅನ್ಶುಲ್ ಕಂಬೋಜ್, ಆಖಿಬ್ ನಬಿ, ಗುರ್ನೂರ್ ಬ್ರಾರ್, ಅರ್ಷದೀಪ್ ಸಿಂಗ್.

ಸರಣಿ ನಿರ್ಣಾಯಕ ಪಂದ್ಯ:

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಐದು ಪಂದ್ಯಗಳ ಏಕದಿನ ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಇದೀಗ ಉಭಯ ತಂಡಗಳು ಮೂರನೇ ಪಂದ್ಯಕ್ಕಾಗಿ ಸಜ್ಜಾಗಿದ್ದು, ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಅತ್ತ ಸರಣಿ ಆಸೆಯನ್ನು ಜೀವಂವವಿರಿಸಿಕೊಳ್ಳಲು ಮೂರನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಗೆಲ್ಲಲೇಬೇಕು. ಅಂದರೆ ಕಿವೀಸ್ ಪಡೆ ಪಾಲಿಗೆ ಈ ಮ್ಯಾಚ್ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ.

ಭಾರತದ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ ಧೀರ್, ಅನ್ಶುಲ್ ಕಂಬೋಜ್, ಗುರ್ನೂರ್ ಬ್ರಾರ್, ರುತುರಾಜ್ ಗಾಯಕ್ವಾಡ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಆಖಿಬ್ ನಬಿ, ಕುಲ್ದೀಪ್ ಯಾದವ್.

ಇದನ್ನೂ ಓದಿ: 149 ವರ್ಷಗಳ ಟೆಸ್ಟ್​ ಇತಿಹಾಸದಲ್ಲೇ ಹಿಂದೆಂದೂ ಕಾಣದ ವಿಶ್ವ ದಾಖಲೆ ಬರೆದ ಝಿಂಬಾಬ್ವೆ

ನ್ಯೂಝಿಲೆಂಡ್ ಏಕದಿನ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕಲ್ ಬ್ರೇಸ್‌ವೆಲ್, ಕ್ರಿಸ್ಟಿಯನ್ ಕ್ಲಾರ್ಕ್, ಜೇಕಬ್ ಡಫಿ, ಮ್ಯಾಟ್ ಫಿಶರ್, ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಟಿಮ್ ಸೈಫರ್ಟ್​, ನಾಥನ್ ಸ್ಮಿತ್, ವಿಲ್ ಯಂಗ್.

Published On - 9:20 am, Tue, 10 November 26

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us