ಕಿವೀಸ್ ಪಡೆಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತ್ತು. ಆದರೆ ನಾಲ್ಕನೇ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಕಿವೀಸ್ ಪಡೆ ಭಾರತ ತಂಡಕ್ಕೆ ಸೋಲುಣಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಈ ಸರಣಿಯ ಕೊನೆಯ ಹಾಗೂ ಐದನೇ ಪಂದ್ಯ ಜರುಗುತ್ತಿದೆ.

ಹ್ಯಾಮಿಲ್ಟನ್ನ ಸೇಡನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 191 ರನ್ ಕಲೆಹಾಕಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ 1 ರನ್ಗಳಿಸಿ ಔಟಾದರೆ, ಸಂಜು ಸ್ಯಾಮ್ಸನ್ 4 ರನ್ಗಳಿಸಿ ವಿಕೆಟ್ ಒಪ್ಪಿಸಿದರು.
ಈ ಹಂತದಲ್ಲಿ ಜೊತೆಗೂಡಿದ ಇಶಾನ್ ಕಿಶನ್ ಹಾಗೂ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಈ ಜೋಡಿಯು ನಾಲ್ಕನೇ ವಿಕೆಟ್ಗೆ ಬರೋಬ್ಬರಿ 97 ರನ್ ಜೊತೆಯಾಟವಾಡಿದರು.
ಇದರ ನಡುವೆ ಇಶಾನ್ ಕಿಶನ್ 32 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 5 ಫೋರ್ಗಳೊಂದಿಗೆ 61 ರನ್ ಬಾರಿಸಿದರು. ಮತ್ತೊಂದೆಡೆ ಶ್ರೇಯಸ್ ಅಯ್ಯರ್ ಕೇವಲ 23 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 50 ರನ್ ಚಚ್ಚಿದರು. ಪರಿಣಾಮ 11 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 120ರ ಗಡಿದಾಟಿತು.
ಆದರೆ ಇಶಾನ್ ಕಿಶನ್ ಹಾಗೂ ಶ್ರೇಯಸ್ ಅಯ್ಯರ್ ವಿಕೆಟ್ ಸಿಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಕಿವೀಸ್ ಬೌಲರ್ಗಳು ಟೀಮ್ ಇಂಡಿಯಾದ ರನ್ ಗತಿಯನ್ನು ನಿಯಂತ್ರಿಸಿದರು. ಪರಿಣಾಮ 15 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಕಲೆಹಾಕಿದ್ದು 144 ರನ್ಗಳು ಮಾತ್ರ.
ಇನ್ನು ಡೆತ್ ಓವರ್ಗಳ ವೇಳೆ ಅಬ್ಬರಿಸಿದ ನಮನ್ ಧೀರ್ 33 ರನ್ ಬಾರಿಸಿದರೆ, ನಿತೀಶ್ ಕುಮಾರ್ ರೆಡ್ಡಿ 22 ರನ್ ಗಳಿಸಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 191 ರನ್ ಕಲೆಹಾಕಿದೆ.
- ನ್ಯೂಝಿಲೆಂಡ್ಗೆ 20 ಓವರ್ಗಳಲ್ಲಿ 192 ರನ್ಗಳ ಗುರಿ
ಭಾರತ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ವರುಣ್ ಚಕ್ರವರ್ತಿ.
ಇದನ್ನೂ ಓದಿ: ಇತಿಹಾಸವನ್ನೇ ಬದಲಿಸಿದ ಇಶಾನ್: ಟಿ20 ಕ್ರಿಕೆಟ್ನಲ್ಲಿ ಭರ್ಜರಿ ದಾಖಲೆ!
ನ್ಯೂಝಿಲೆಂಡ್ (ಪ್ಲೇಯಿಂಗ್ XI): ಟಿಮ್ ಸೈಫರ್ಟ್, ಫಿನ್ ಅಲೆನ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಬೆವೊನ್ ಜೇಕಬ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಆ್ಯಡಂ ಮಿಲ್ನ್, ಜೇಕಬ್ ಡಫಿ, ಬ್ಲೇರ್ ಟಿಕ್ನರ್.




