NZ vs IRE: ಟಾಸ್ ಗೆದ್ದ ಐರ್ಲೆಂಡ್: ನ್ಯೂಜಿಲೆಂಡ್ ಜಯ ಸಾಧಿಸಿದರೆ ಸೆಮೀಸ್​ಗೆ ನೇರ ಪ್ರವೇಶ

New Zealand vs Ireland, T20 World Cup: ಈಗಾಗಲೇ ಮೊದಲ ಪಂದ್ಯದ ಟಾಸ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಟಾಸ್ ಗೆದ್ದ ಐರ್ಲೆಂಡ್ ತಂಡದ ನಾಯಕ ಆಂಡ್ರ್ಯೂ ಬಾಲ್ಬಿರ್ನಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

NZ vs IRE: ಟಾಸ್ ಗೆದ್ದ ಐರ್ಲೆಂಡ್: ನ್ಯೂಜಿಲೆಂಡ್ ಜಯ ಸಾಧಿಸಿದರೆ ಸೆಮೀಸ್​ಗೆ ನೇರ ಪ್ರವೇಶ
T20 World Cup 2022
Edited By:

Updated on: Nov 04, 2022 | 9:43 AM

ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿಂದು (T20 World Cup) ಎರಡು ಮಹತ್ವದ ಪಂದ್ಯಗಳು ನಡೆಯಲಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ಮೊದಲಿಗೆ ನ್ಯೂಜಿಲೆಂಡ್ ಮತ್ತು ಐರ್ಲೆಂಡ್ (New Zealand vs Ireland) ತಂಡ ಮುಖಾಮುಖಿಯಾದರೆ ದ್ವಿತೀಯ ಕದನದಲ್ಲಿ ಆಸ್ಟ್ರೇಲಿಯಾ ತಂಡ ಅಫ್ಘಾನಿಸ್ತಾನ ಎದುರು ಆಡಬೇಕಿದೆ. ಈ ಪಂದ್ಯ ಕೂಡ ಇದೇ ಮೈದಾನದಲ್ಲಿ ಆಯೋಜಿಸಲಾಗಿದೆ. ಈಗಾಗಲೇ ಮೊದಲ ಪಂದ್ಯದ ಟಾಸ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಟಾಸ್ ಗೆದ್ದ ಐರ್ಲೆಂಡ್ ತಂಡದ ನಾಯಕ ಆಂಡ್ರ್ಯೂ ಬಾಲ್ಬಿರ್ನಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದಿನ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ಜಯ ಸಾಧಿಸಿದರೆ ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿ ಸೆಮಿ ಫೈನಲ್​ಗೆ (Semi Final) ಪ್ರವೇಶ ಪಡೆದ ಮೊದಲ ತಂಡವಾಗಲಿದೆ.

ನ್ಯೂಜಿಲೆಂಡ್ ತಂಡ ಈ ಬಾರಿಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಆಡಿರುವ ನಾಲ್ಕು ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯದಲ್ಲಿ ಸೋಲು ಅನುಭವಿಸಿ, ಒಂದು ಪಂದ್ಯ ಮಳೆಗೆ ಆಹುತಿಯಾಗಿದೆ. ಹೀಗಾಗಿ ನಾಲ್ಕು ಪಂದ್ಯಗಳಲ್ಲಿ 5 ಅಂಕಗಳನ್ನು ಪಡೆದುಕೊಂಡಿದ್ದು ಉತ್ತಮ ರನ್​ರೇಟ್ ಹೊಂದಿದೆ. ಹೀಗಾಗಿ ಇಂದು ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸೆಮಿಫೈನಲ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಲಿದೆ. ಇತ್ತ ಐರ್ಲೆಂಡ್ ತಂಡ ಆಡಿದ ನಾಲ್ಕು ಪಂದ್ಯಗಳ ಪೈಕಿ ಒಂದು ಗೆಲುವು ಮಾತ್ರವೇ ಸಾಧಿಸಿದ್ದು ಎರಡು ಸೋಲು ಹಾಗೂ ಒಂದು ಪಂದ್ಯ ಮಳೆಗೆ ಆಹುತಿಯಾಗಿದೆ. ಹೀಗಾಗಿ 3 ಅಂಕಗಳನ್ನು ಹೊಂದಿದ್ದು ಸೆಮಿಫೈನಲ್ ಹಂತಕ್ಕೇರುವ ರೇಸ್‌ನಿಂದ ಬಹುತೇಕ ಔಟ್ ಆಗಿದೆ.

ಅಡಿಲೇಡ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅಚ್ಚುಮೆಚ್ಚು. ಬ್ಯಾಟ್​ಗೆ ಚೆಂಡು ನೇರವಾಗಿ ಸುಲಭವಾಗಿ ಬರುವ ಕಾರಣ ದೊಡ್ಡ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ. ಬೌಲರ್‌ಗಳು ಇಲ್ಲಿ ಕಠಿಣ ಸವಾಲನ್ನು ಎದುರಿಸಲಿದ್ದಾರೆ. ಪಂದ್ಯದ ದಿನ ಅಡಿಲೇಡ್‌ನಲ್ಲಿ ಸಂಪೂರ್ಣ ಆಟ ನಡೆಯಲು ಪೂರಕವಾದ ವಾತಾವರಣವಿರಲಿದೆ. ತಾಪಮಾನ 12ರಿಂದ 19 ಡಿಗ್ರಿ ಸೆಲ್ಸಿಯಸ್‌ನ ನಡುವೆ ಇರುವ ಸಾಧ್ಯತೆಯಿದ್ದು ತೇವಾಂಶಯುಕ್ತ ವಾತಾವರಣವಿರಲಿದೆ. ಮಳೆಯ ಸಂಭವ ಕಡಿಮೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ
IND vs ZIM: ಮೆಲ್ಬೋರ್ನ್ ತಲುಪಿದ ಟೀಮ್ ಇಂಡಿಯಾ: ಗೆಲ್ಲಲೇ ಬೇಕಾದ ಪಂದ್ಯಕ್ಕೆ ಅಭ್ಯಾಸ ಆರಂಭ
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
ಬ್ಯಾಟಿಗೆ ಒಂದೂ ಬಾಲ್ ತಾಗಲಿಲ್ಲ; ಕೋಪದಿಂದ ಬ್ಯಾಟ್ ಬೀಸಾಡಿದ ಪಾಕ್ ಬ್ಯಾಟ್ಸ್​ಮನ್..! ವಿಡಿಯೋ
ಕೇವಲ ಎರಡೇ ಬೌಂಡರಿ..! 0, 4, 4, 6.. ಇದು ಬಾಬರ್ ಕಳಪೆ ಫಾರ್ಮ್​ನ ಕರುಣಾಜನಕ ಕಥೆ

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.

ಐರ್ಲೆಂಡ್: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಫಿಯಾನ್ ಹ್ಯಾಂಡ್, ಜೋಶ್ವಾ ಲಿಟಲ್.

Published On - 9:42 am, Fri, 4 November 22