AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NZ vs PAK: ಕೊನೆಗೆ ಗೆದ್ದು ಕ್ಲೀನ್ ಸ್ವೀಪ್ ಸೋಲು ತಪ್ಪಿಸಿಕೊಂಡ ಪಾಕಿಸ್ತಾನ್

New Zealand vs Pakistan: 5 ಪಂದ್ಯಗಳ ಈ ಸರಣಿಯ ಮೊದಲ ನಾಲ್ಕು ಮ್ಯಾಚ್​ಗಳಲ್ಲೂ ಪಾಕಿಸ್ತಾನ್ ತಂಡ ಸೋಲನುಭವಿಸಿತ್ತು. ಇತ್ತ ಬ್ಯಾಕ್ ಟು ಬ್ಯಾಕ್ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದ ನ್ಯೂಝಿಲೆಂಡ್ ತಂಡಕ್ಕೆ ಕ್ಲೀನ್ ಸ್ವೀಪ್ ಗೆಲುವು ಸಾಧಿಸುವ ಉತ್ತಮ ಅವಕಾಶವಿತ್ತು.

NZ vs PAK: ಕೊನೆಗೆ ಗೆದ್ದು ಕ್ಲೀನ್ ಸ್ವೀಪ್ ಸೋಲು ತಪ್ಪಿಸಿಕೊಂಡ ಪಾಕಿಸ್ತಾನ್
NZ vs PAK
TV9 Web
| Edited By: |

Updated on:Jan 21, 2024 | 9:35 AM

Share

ಕ್ರೈಸ್ಟ್​ಚರ್ಚ್​ನ ಹ್ಯಾಗ್ಲಿ ಓವಲ್​ ಮೈದಾನದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ (Pakistan) ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಶಾಹೀನ್ ಅಫ್ರಿದಿ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ ಹಸೀಬುಲ್ಲಾ ಖಾನ್ (0) ಶೂನ್ಯಕ್ಕೆ ಔಟಾದರೆ, ಆ ಬಳಿಕ ಬಂದ ಬಾಬರ್ ಆಝಂ 13 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೊಹಮ್ಮದ್ ರಿಝ್ವಾನ್ (38) ಹಾಗೂ ಫಖರ್ ಝಮಾನ್ (33) ಉಪಯುಕ್ತ ಕಾಣಿಕೆ ನೀಡುವ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಇದಾಗ್ಯೂ ಅಂತಿಮ ಹಂತದಲ್ಲಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ ನ್ಯೂಝಿಲೆಂಡ್ ಬೌಲರ್​ಗಳು ಪಾಕಿಸ್ತಾನ್ ತಂಡವನ್ನು 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 134 ರನ್​ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು.

135 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ಉತ್ತಮ ಆರಂಭ ಪಡೆಯಲಿಲ್ಲ. ಕೇವಲ 70 ರನ್​ಗಳಿಸುಷ್ಟರಲ್ಲಿ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ಗ್ಲೆನ್ ಫಿಲಿಪ್ಸ್ 26 ರನ್ ಬಾರಿಸಿದರೂ ಹೆಚ್ಚು ಹೊತ್ತು ಕ್ರೀಸ್​ನಲ್ಲಿರಲು ಸಾಧ್ಯವಾಗಲಿಲ್ಲ.

ಪರಿಣಾಮ ನ್ಯೂಝಿಲೆಂಡ್ ತಂಡವು 17.2 ಓವರ್​ಗಳಲ್ಲಿ 92 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಪಾಕಿಸ್ತಾನ್ ತಂಡ 42 ರನ್​ಗಳ ಜಯ ಸಾಧಿಸಿದೆ. ಪಾಕ್ ಪರ ಇಫ್ತಿಕರ್ ಅಹ್ಮದ್ 3 ವಿಕೆಟ್ ಪಡೆದರೆ, ಶಾಹೀನ್ ಅಫ್ರಿದಿ ಹಾಗೂ ಮೊಹಮ್ಮದ್ ನವಾಝ್ ತಲಾ 2 ವಿಕೆಟ್ ಕಬಳಿಸಿದರು.

ಕ್ಲೀನ್ ಸ್ವೀಪ್ ತಪ್ಪಿಸಿಕೊಂಡ ಪಾಕ್ ಪಡೆ:

5 ಪಂದ್ಯಗಳ ಈ ಸರಣಿಯ ಮೊದಲ ನಾಲ್ಕು ಮ್ಯಾಚ್​ಗಳಲ್ಲೂ ಪಾಕಿಸ್ತಾನ್ ತಂಡ ಸೋಲನುಭವಿಸಿತ್ತು. ಇತ್ತ ಬ್ಯಾಕ್ ಟು ಬ್ಯಾಕ್ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದ ನ್ಯೂಝಿಲೆಂಡ್ ತಂಡಕ್ಕೆ ಕ್ಲೀನ್ ಸ್ವೀಪ್ ಗೆಲುವು ಸಾಧಿಸುವ ಉತ್ತಮ ಅವಕಾಶವಿತ್ತು.

ಆದರೆ ಅಂತಿಮ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 42 ರನ್​ಗಳಿಂದ ಸೋಲಿಸುವಲ್ಲಿ ಪಾಕಿಸ್ತಾನ್ ಯಶಸ್ವಿಯಾಗಿದೆ. ಇದರೊಂದಿಗೆ ಸರಣಿಯು 4-1 ಅಂತರದಿಂದ ಮುಗಿದಿದ್ದು, ಈ ಮೂಲಕ ಕ್ಲೀನ್ ಸ್ವೀಪ್ ಸರಣಿ ಸೋಲನ್ನು ತಪ್ಪಿಸಿಕೊಳ್ಳುವಲ್ಲಿ ಪಾಕಿಸ್ತಾನ್ ತಂಡ ಯಶಸ್ವಿಯಾಗಿದೆ.

ನ್ಯೂಝಿಲೆಂಡ್ ಪ್ಲೇಯಿಂಗ್ 11: ಫಿನ್ ಅಲೆನ್ , ರಚಿನ್ ರವೀಂದ್ರ , ಟಿಮ್ ಸೀಫರ್ಟ್ (ವಿಕೆಟ್ ಕೀಪರ್) , ವಿಲ್ ಯಂಗ್ , ಗ್ಲೆನ್ ಫಿಲಿಪ್ಸ್ , ಮಾರ್ಕ್ ಚಾಪ್ಮನ್ , ಮಿಚೆಲ್ ಸ್ಯಾಂಟ್ನರ್ (ನಾಯಕ) , ಇಶ್ ಸೋಧಿ , ಮ್ಯಾಟ್ ಹೆನ್ರಿ , ಟಿಮ್ ಸೌಥಿ , ಲಾಕಿ ಫರ್ಗುಸನ್.

ಇದನ್ನೂ ಓದಿ: ಅಫ್ಘಾನಿಸ್ತಾನ್ ವಿರುದ್ಧ ಗೆದ್ದು ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಮುರಿದ ಟೀಮ್ ಇಂಡಿಯಾ

ಪಾಕಿಸ್ತಾನ್ ಪ್ಲೇಯಿಂಗ್ 11: ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್) , ಹಸೀಬುಲ್ಲಾ ಖಾನ್ , ಬಾಬರ್ ಆಝಂ , ಫಖರ್ ಜಮಾನ್ , ಸಾಹಿಬ್ಜಾದಾ ಫರ್ಹಾನ್ , ಇಫ್ತಿಕರ್ ಅಹ್ಮದ್ , ಮೊಹಮ್ಮದ್ ನವಾಜ್ , ಶಾಹೀನ್ ಅಫ್ರಿದಿ (ನಾಯಕ) , ಉಸಾಮಾ ಮಿರ್ , ಅಬ್ಬಾಸ್ ಅಫ್ರಿದಿ , ಜಮಾನ್ ಖಾನ್.

Published On - 9:35 am, Sun, 21 January 24

ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!