AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ರಾಧಾ ಏಕಾಂಗಿ ಹೋರಾಟ ವ್ಯರ್ಥ; 2ನೇ ಏಕದಿನ ಪಂದ್ಯ ಗೆದ್ದ ಕಿವೀಸ್ ತಂಡ

IND vs NZ: ಅಹಮದಾಬಾದ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಮಹಿಳಾ ತಂಡವು ಭಾರತವನ್ನು 76 ರನ್‌ಗಳಿಂದ ಸೋಲಿಸಿದೆ. ನ್ಯೂಜಿಲೆಂಡ್ ಮೊದಲು ಬ್ಯಾಟ್ ಮಾಡಿ 259 ರನ್ ಗಳಿಸಿತು, ಸುಜಿ ಬೇಟ್ಸ್ ಮತ್ತು ಸೋಫಿ ಡಿವೈನ್ ಅರ್ಧಶತಕ ಗಳಿಸಿದರು. ಭಾರತ 260 ರನ್‌ಗಳ ಗುರಿ ಬೆನ್ನಟ್ಟಲು ವಿಫಲವಾಯಿತು, ರಾಧಾ ಯಾದವ್ 48 ರನ್ ಗಳಿಸಿದರು. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿ 1-1ಕ್ಕೆ ಸಮವಾಗಿದೆ.

IND vs NZ: ರಾಧಾ ಏಕಾಂಗಿ ಹೋರಾಟ ವ್ಯರ್ಥ; 2ನೇ ಏಕದಿನ ಪಂದ್ಯ ಗೆದ್ದ ಕಿವೀಸ್ ತಂಡ
ಭಾರತ- ನ್ಯೂಜಿಲೆಂಡ್
ಪೃಥ್ವಿಶಂಕರ
|

Updated on:Oct 27, 2024 | 9:21 PM

Share

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾವನ್ನು 76 ರನ್​ಗಳಿಂದ ಮಣಿಸಿದ ನ್ಯೂಜಿಲೆಂಡ್ ಮಹಿಳಾ ತಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ರಿಂದ ಸಮಬಲ ಸಾಧಿಸಿದೆ. ಇನ್ನು ಇದಕ್ಕೂ ಮುಂಚೆ ಇದೇ ಮೈದಾನದಲ್ಲಿ ನಡೆದಿದ್ದ ಮೊದಲ ಏಕದಿನ ಪಂದ್ಯವನ್ನು ಆತಿಥೇಯ ಭಾರತ ವನಿತಾ ಪಡೆ ಗೆದ್ದುಕೊಂಡಿತ್ತು. ಇದೀಗ ಎರಡನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಕಿವೀಸ್ ತಂಡ ಸರಣಿಯನ್ನು ಇನ್ನಷ್ಟು ರೋಚಕಗೊಳಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಿ 50 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 259 ರನ್ ಗಳಿಸಿತು.ಗೆಲುವಿಗೆ 260 ರನ್‌ಗಳ ಗುರಿಗೆ ಉತ್ತರವಾಗಿ ಭಾರತ ತಂಡ 47.1 ಓವರ್‌ಗಳಲ್ಲಿ 183 ರನ್‌ಗಳಿಗೆ ಆಲೌಟ್ ಆಗಿದ್ದು, 76 ರನ್‌ಗಳಿಂದ ಸೋಲನುಭವಿಸಬೇಕಾಯಿತು.

ಸುಜಿ ಬೇಟ್ಸ್- ಸೋಫಿ ಡಿವೈನ್ ಅರ್ಧಶತಕ

ಈ ಪಂದ್ಯದ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ ಪರ ಆರಂಭಿಕ ಆಟಗಾರ್ತಿ ಸುಜಿ ಬೇಟ್ಸ್ 70 ಎಸೆತಗಳಲ್ಲಿ 8 ಬೌಂಡರಿಗಳ ಸಹಾಯದಿಂದ 58 ರನ್ ಗಳಿಸಿದರೆ, ಇತ್ತ ನಾಯಕಿ ಸೋಫಿ ಡಿವೈನ್ ಸಹ 86 ಎಸೆತಗಳಲ್ಲಿ 79 ರನ್ ಗಳಿಸಿದರು. ಇದರಲ್ಲಿ ಒಂದು ಸಿಕ್ಸರ್ ಮತ್ತು 7 ಬೌಂಡರಿಗಳು ಸೇರಿದ್ದವು. ಇವರಿಬ್ಬರ ಹೊರತಾಗಿ ಜಾರ್ಜಿಯಾ ಪ್ಲಿಮ್ಮರ್ ಕೂಡ 41 ರನ್‌ಗಳ ಕೊಡುಗೆ ನೀಡಿದರೆ, ಮ್ಯಾಡಿ ಗ್ರೀನ್ ಕೂಡ 42 ರನ್‌ಗಳ ಕೊಡುಗೆ ನೀಡಿದರು. ರಾಧಾ ಯಾದವ್ ಭಾರತದ ಅತ್ಯಂತ ಯಶಸ್ವಿ ಬೌಲರ್ ಆಗಿದ್ದು, 4 ವಿಕೆಟ್ ಪಡೆದರೆ, ದೀಪ್ತಿ ಶರ್ಮಾ 2 ವಿಕೆಟ್ ಪಡೆದರು.

ರಾಧಾ ಏಕಾಂಗಿ ಹೋರಾಟ ವ್ಯರ್ಥ

260 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ, ಕಿವೀಸ್ ತಂಡದ ಬಲಿಷ್ಠ ಬೌಲಿಂಗ್ ಎದುರು ಸುಲಭವಾಗಿ ವಿಕೆಟ್ ಕೈಚೆಲ್ಲುತ್ತ ಸಾಗಿತು. ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ 11 ರನ್ ಗಳಿಸಿದರೆ, ಸ್ಮೃತಿ ಮಂಧಾನ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಯಾಸ್ತಿಕಾ ಭಾಟಿಯಾ 12 ರನ್ ಗಳಿಸಿದರೆ, ನಾಯಕಿ ಹರ್ಮನ್‌ಪ್ರೀತ್ ಕೌರ್ 24 ರನ್ ಗಳಿಸಿ ಔಟಾದರು. ಜೆಮಿಮಾ 17 ರನ್, ತೇಜಲ್ ಮತ್ತು ದೀಪ್ತಿ ತಲಾ 15 ರನ್ ಕೊಡುಗೆ ನೀಡಿದರು. ಪಂದ್ಯದ ಕೊನೆಯ ಕ್ಷಣದಲ್ಲಿ ಸೈಮಾ ಠಾಕೋರ್ 29 ರನ್‌ಗಳ ಇನಿಂಗ್ಸ್‌ ಆಡಿ 9ನೇ ವಿಕೆಟ್‌ಗೆ ರಾಧಾ ಯಾದವ್ ಅವರೊಂದಿಗೆ 70 ರನ್‌ಗಳ ಜೊತೆಯಾಟ ನಡೆಸಿದರು. ಕೊನೆಯವರೆಗೂ ದಿಟ್ಟ ಹೋರಾಟ ನಡೆಸಿದ ರಾಧಾ ಯಾದವ್ 64 ಎಸೆತಗಳಲ್ಲಿ 5 ಬೌಂಡರಿಗಳ ನೆರವಿನಿಂದ 48 ರನ್ ಗಳಿಸಿ ಔಟಾದರು. ಕಿವೀಸ್ ಪರ ಲೀ ತಾಹುಹು ಹಾಗೂ ನಾಯಕಿ ಸೋಫಿ ಡಿವೈನ್ ತಲಾ 3 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:19 pm, Sun, 27 October 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ