ಟೆಸ್ಟ್​ನಲ್ಲಿ ಸರ್ವಶ್ರೇಷ್ಠ ಗೆಲುವು ದಾಖಲಿಸಿದ ನ್ಯೂಝಿಲೆಂಡ್

New Zealand vs England: ನ್ಯೂಝಿಲೆಂಡ್ ವಿರುದ್ಧದ 3 ಪಂದ್ಯಗಳ ಸರಣಿಯನ್ನು ಇಂಗ್ಲೆಂಡ್ 2-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಈ ಸರಣಿ ಮೊದಲ ಟೆಸ್ಟ್​ನಲ್ಲಿ ಆಂಗ್ಲರು 8 ವಿಕೆಟ್​ಗಳ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ 323 ರನ್​​ಗಳ ಗೆಲುವು ಸಾಧಿಸಿತ್ತು. ಈ ಮೂಲಕ 2-1 ಅಂತರದಿಂದ ಸರಣಿ ಗೆಲ್ಲುವಲ್ಲಿ ಬೆನ್ ಸ್ಟೋಕ್ಸ್ ಪಡೆ ಯಶಸ್ವಿಯಾಗಿದೆ.

ಟೆಸ್ಟ್​ನಲ್ಲಿ ಸರ್ವಶ್ರೇಷ್ಠ ಗೆಲುವು ದಾಖಲಿಸಿದ ನ್ಯೂಝಿಲೆಂಡ್
New Zealand
Follow us
ಝಾಹಿರ್ ಯೂಸುಫ್
|

Updated on: Dec 17, 2024 | 7:53 AM

ಹ್ಯಾಮಿಲ್ಟನ್​ನ ಸೆಡನ್ ಪಾರ್ಕ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವು 423 ರನ್​​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ಪರ ನಾಯಕ ಟಾಮ್ ಲ್ಯಾಥಮ್ (63) ಅರ್ಧಶತಕ ಸಿಡಿಸಿದರು. ಇನ್ನು ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಮಿಚೆಲ್ ಸ್ಯಾಂಟ್ನರ್ 76 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ನ್ಯೂಝಿಲೆಂಡ್ ಪ್ರಥಮ ಇನಿಂಗ್ಸ್​ನಲ್ಲಿ 347 ರನ್​ ಕಲೆಹಾಕಿ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಮ್ಯಾಟ್ ಹೆನ್ರಿ ದಾಳಿಗೆ ತತ್ತರಿಸಿದೆ. ಪರಿಣಾಮ ಕೇವಲ 143 ರನ್​​ಗಳಿಸಿ ಸರ್ವಪತನ ಕಂಡಿತು. ಕಿವೀಸ್ ಪರ ಹೆನ್ರಿ 4 ವಿಕೆಟ್ ಕಬಳಿಸಿದರೆ, ಸ್ಯಾಂಟ್ನರ್ ಹಾಗೂ ವಿಲಿಯಮ್ ಒರೋಕ್ ತಲಾ 3 ವಿಕೆಟ್ ಪಡೆದರು.

ಮೊದಲ ಇನಿಂಗ್ಸ್​ನ 204 ರನ್​​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ಪರ ವಿಲ್ ಯಂಗ್ 60 ರನ್ ಬಾರಿಸಿದರೆ, ಕೇನ್ ವಿಲಿಯಮ್ಸನ್ 156 ರನ್​ಗಳ ಮ್ಯಾರಥಾನ್ ಇನಿಂಗ್ಸ್ ಆಡಿದರು. ಇನ್ನು ಡೇರಿಲ್ ಮಿಚೆಲ್ 60 ರನ್​​ಗಳ ಕೊಡುಗೆ ನೀಡಿದರು. ಈ ಮೂಲಕ ನ್ಯೂಝಿಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 453 ರನ್​ ಕಲೆಹಾಕಿತು.

ಪ್ರಥಮ ಇನಿಂಗ್ಸ್​ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 657 ರನ್​​ಗಳ ಕಠಿಣ ಗುರಿ ಪಡೆದ ಇಂಗ್ಲೆಂಡ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಜೇಕಬ್ ಬೆಥೆಲ್ (76) ಹಾಗೂ ಜೋ ರೂಟ್ (54) ಅರ್ಧಶತಕ ಬಾರಿಸಿ ತಂಡಕ್ಕೆ ಆಸರೆಯಾಗಿ ನಿಂತರು.

ಆದರೆ ಜೇಕಬ್ ಹಾಗೂ ರೂಟ್ ವಿಕೆಟ್ ಸಿಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ನ್ಯೂಝಿಲೆಂಡ್ ಬೌಲರ್​​ಗಳು ಅಂತಿಮವಾಗಿ ಇಂಗ್ಲೆಂಡ್ ತಂಡವನ್ನು 234 ರನ್​​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಈ ಮೂಲಕ ಕಿವೀಸ್ ಪಡೆ ಮೂರನೇ ಟೆಸ್ಟ್ ಪಂದ್ಯವನ್ನು 423 ರನ್​​ಗಳಿಂದ ಗೆದ್ದುಕೊಂಡಿದೆ.

ಸರ್ವಶ್ರೇಷ್ಠ ಗೆಲುವು:

ಇದು ಟೆಸ್ಟ್​ ಕ್ರಿಕೆಟ್​ನಲ್ಲಿ ನ್ಯೂಝಿಲೆಂಡ್ ತಂಡದ ಸರ್ವಶ್ರೇಷ್ಠ ಗೆಲುವು. ಅದರಲ್ಲೂ ಇದೇ ಮೊದಲ ಬಾರಿಗೆ ಕ್ರಿಕೆಟ್ ಜನಕರಾದ ಇಂಗ್ಲೆಂಡ್ ತಂಡವನ್ನು 400 ಕ್ಕಿಂತ ಹೆಚ್ಚು ರನ್​​ಗಳಿಂದ ಮಣಿಸುವಲ್ಲಿ ಕಿವೀಸ್ ಪಡೆ ಯಶಸ್ವಿಯಾಗಿದೆ. ಈ ಮೂಲಕ ಆಸ್ಟ್ರೇಲಿಯಾ, ಭಾರತ, ವೆಸ್ಟ್ ಇಂಡೀಸ್ ಬಳಿಕ ಇಂಗ್ಲೆಂಢ್ ತಂಡವನ್ನು 400 ಕ್ಕಿಂತ ಅಧಿಕ ರನ್​​ಗಳಿಂದ ಮಣಿಸಿದ ತಂಡವೆಂಬ ಕೀರ್ತಿಗೆ ನ್ಯೂಝಿಲೆಂಡ್ ಪಾತ್ರವಾಗಿದೆ.

ಇದಾಗ್ಯೂ ಈ ಸರಣಿ ಇಂಗ್ಲೆಂಡ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ನಡೆದ ಮೊದಲ ಟೆಸ್ಟ್​ನಲ್ಲಿ ಆಂಗ್ಲರು 8 ವಿಕೆಟ್​ಗಳ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ 323 ರನ್​​ಗಳ ಗೆಲುವು ಸಾಧಿಸಿತ್ತು. ಈ ಮೂಲಕ 2-1 ಅಂತರದಿಂದ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ (ನಾಯಕ) , ವಿಲ್ ಯಂಗ್ , ಕೇನ್ ವಿಲಿಯಮ್ಸನ್ , ರಚಿನ್ ರವೀಂದ್ರ , ಡೇರಿಲ್ ಮಿಚೆಲ್ , ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್) ಗ್ಲೆನ್ ಫಿಲಿಪ್ಸ್ , ಮಿಚೆಲ್ ಸ್ಯಾಂಟ್ನರ್ , ಮ್ಯಾಟ್ ಹೆನ್ರಿ , ಟಿಮ್ ಸೌಥಿ , ವಿಲಿಯಂ ಒರೋಕ್.

ಇದನ್ನೂ ಓದಿ: ಪಾಕಿಸ್ತಾನ್ ಪರ ಕಣಕ್ಕಿಳಿದ ಇಬ್ಬರು ಹಿಂದೂ ಕ್ರಿಕೆಟಿಗರು ಯಾರು ಗೊತ್ತಾ?

ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ , ಬೆನ್ ಡಕೆಟ್ , ಜೇಕಬ್ ಬೆಥೆಲ್ , ಜೋ ರೂಟ್ , ಹ್ಯಾರಿ ಬ್ರೂಕ್ , ಒಲೀ ಪೋಪ್ (ವಿಕೆಟ್ ಕೀಪರ್) , ಬೆನ್ ಸ್ಟೋಕ್ಸ್ (ನಾಯಕ) , ಗಸ್ ಅಟ್ಕಿನ್ಸನ್ , ಮ್ಯಾಥ್ಯೂ ಪಾಟ್ಸ್ , ಬ್ರೈಡನ್ ಕಾರ್ಸೆ , ಶೋಯೆಬ್ ಬಶೀರ್.

Daily Devotional: ತುಳಸಿ ತೀರ್ಥದ ಮಹತ್ವ ತಿಳಿಯಿರಿ
Daily Devotional: ತುಳಸಿ ತೀರ್ಥದ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
Daily horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
‘ಯುಐ’ ಸಿನಿಮಾ ಪ್ರೀ-ರಿಲೀಸ್ ಇವೆಂಟ್​: ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಸಿನಿಮಾ ಪ್ರೀ-ರಿಲೀಸ್ ಇವೆಂಟ್​: ಇಲ್ಲಿದೆ ಲೈವ್ ವಿಡಿಯೋ
ಹೊಸ ಹೋಸ್ಟ್ ನನ್ನಂತೆ ನಡೆಸಿಕೊಡುತ್ತಾರೋ ಇಲ್ಲವೋ ಬೇರೆ ವಿಚಾರ: ಸುದೀಪ್
ಹೊಸ ಹೋಸ್ಟ್ ನನ್ನಂತೆ ನಡೆಸಿಕೊಡುತ್ತಾರೋ ಇಲ್ಲವೋ ಬೇರೆ ವಿಚಾರ: ಸುದೀಪ್
ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಬಲಪಡಿಸುತ್ತೇವೆ: ಸಚಿವ
ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಬಲಪಡಿಸುತ್ತೇವೆ: ಸಚಿವ
ಎತ್ತಿನ ಜನ್ಮದಿನ ಆಚರಣೆ: ಕೇಕ್ ಕತ್ತರಿಸಿ..ಊರಿಗೆಲ್ಲ ಊಟ ಹಾಕಿಸಿದ ರೈತ
ಎತ್ತಿನ ಜನ್ಮದಿನ ಆಚರಣೆ: ಕೇಕ್ ಕತ್ತರಿಸಿ..ಊರಿಗೆಲ್ಲ ಊಟ ಹಾಕಿಸಿದ ರೈತ
ನ್ಯಾಯಾಲಯದಿಂದ ಪುನಃ ಆಸ್ಪತ್ರೆಗೆ ವಾಪಸ್ಸು ಹೋದ ದರ್ಶನ್ ತೂಗುದೀಪ
ನ್ಯಾಯಾಲಯದಿಂದ ಪುನಃ ಆಸ್ಪತ್ರೆಗೆ ವಾಪಸ್ಸು ಹೋದ ದರ್ಶನ್ ತೂಗುದೀಪ
ಕುಮಾರ ಬಂಗಾರಪ್ಪ ಸೊರಬದಲ್ಲಿ ಬಿಜೆಪಿ ಸೊರಗುವಂತೆ ಮಾಡಿದ್ದಾರೆ: ರೇಣುಕಾಚಾರ್ಯ
ಕುಮಾರ ಬಂಗಾರಪ್ಪ ಸೊರಬದಲ್ಲಿ ಬಿಜೆಪಿ ಸೊರಗುವಂತೆ ಮಾಡಿದ್ದಾರೆ: ರೇಣುಕಾಚಾರ್ಯ
ಜುಟ್ಟು ಹಿಡಿದುಕೊಂಡು ಕಿತ್ತಾಡಿದ ಭವ್ಯಾ, ಐಶ್ವರ್ಯಾ; ದೊಡ್ಮನೆಯಲ್ಲಿ ಗದ್ದಲ
ಜುಟ್ಟು ಹಿಡಿದುಕೊಂಡು ಕಿತ್ತಾಡಿದ ಭವ್ಯಾ, ಐಶ್ವರ್ಯಾ; ದೊಡ್ಮನೆಯಲ್ಲಿ ಗದ್ದಲ
ದರ್ಶನ್ ಮೇಲಿನ ಅಭಿಮಾನ ಹೆಚ್ಚಾಗಿದೆಯೇ ಹೊರತು ಕಮ್ಮಿಯಾಗಿಲ್ಲ: ಅಭಿಮಾನಿ
ದರ್ಶನ್ ಮೇಲಿನ ಅಭಿಮಾನ ಹೆಚ್ಚಾಗಿದೆಯೇ ಹೊರತು ಕಮ್ಮಿಯಾಗಿಲ್ಲ: ಅಭಿಮಾನಿ