ಮೊಣಕಾಲಿನಲ್ಲೇ ಮೆಟ್ಟಿಲು ಹತ್ತಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಟಿಮ್ ಇಂಡಿಯಾ ಆಟಗಾರ

Nitish Kumar Reddy: ನಿತೀಶ್ ಕುಮಾರ್ ರೆಡ್ಡಿ ಭಾರತದ ಪರ 5 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1 ಶತಕದೊಂದಿಗೆ ಒಟ್ಟು 298 ರನ್ ಕಲೆಹಾಕಿದ್ದಾರೆ. ಹಾಗೆಯೇ 5 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು 3 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ಅವರು 74 ರನ್ ಕಲೆಹಾಕಿದ್ದಲ್ಲದೆ, 3 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಮೊಣಕಾಲಿನಲ್ಲೇ ಮೆಟ್ಟಿಲು ಹತ್ತಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಟಿಮ್ ಇಂಡಿಯಾ ಆಟಗಾರ
Nitish Kumar Reddy
Follow us
ಝಾಹಿರ್ ಯೂಸುಫ್
|

Updated on:Jan 14, 2025 | 11:32 AM

ಟೀಮ್ ಇಂಡಿಯಾ ಆಟಗಾರ ನಿತೀಶ್ ಕುಮಾರ್ ರೆಡ್ಡಿ ಅವರ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ನಿತೀಶ್ ಕುಮಾರ್ ಮೊಣಕಾಲಿನಲ್ಲೇ ತಿರುಪತಿ ತಿರುಮಲ ದೇವಸ್ಥಾನದ ಮೆಟ್ಟಿಲು ಹತ್ತುತ್ತಿರುವುದನ್ನು ಕಾಣಬಹುದು. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಮುಗಿಸಿ ಬಂದಿರುವ ನಿತೀಶ್ ಕುಮಾರ್ ರೆಡ್ಡಿ ಕುಟುಂಬ ಸದಸ್ಯರೊಂದಿಗೆ ತಿರುಮಲ ಶ್ರೀ ವೆಂಕಟೇಶ್ವರನ ದರ್ಶನಕ್ಕೆ ತೆರಳಿದ್ದರು.

ಈ ವೇಳೆ ನಿತೀಶ್ ಕುಮಾರ್ ರೆಡ್ಡಿ ಮೊಣಕಾಲೂರಿ ಮೆಟ್ಟಿಲು ಹತ್ತಿದರು. ಸಾಮಾನ್ಯವಾಗಿ ತಿರುಮಲ ಶ್ರೀವಾರಿ ದರ್ಶನಕ್ಕೆ ಬರುವವರು ಭಕ್ತರು ಪರ್ವತವನ್ನು ಸಮೀಪಿಸುತ್ತಿದ್ದಂತೆ ಮೊಣಕಾಲುಗಳ ಮೇಲೆ ಮೆಟ್ಟಿಲುಗಳನ್ನು ಏರುತ್ತಾರೆ. ಇದೀಗ ನಿತೀಶ್ ಕುಮಾರ್ ರೆಡ್ಡಿ ಕೂಡ ಮೊಣಕಾಲೂರಿ ಮೆಟ್ಟಿಲು ಹತ್ತಿ ತಮ್ಮ ಆಸೆ ಈಡೇರಿಸಿಕೊಂಡಿದ್ದಾರೆ. ಇದೀಗ ಟೀಮ್ ಇಂಡಿಯಾ ಆಟಗಾರನ ಭಕ್ತಿ ಪ್ರಧಾನ ವಿಡಿಯೋ ಭಾರೀ ವೈರಲ್ ಆಗಿದೆ.

ಶ್ರೀ ವೆಂಕಟೇಶ್ವರನ ಸನ್ನಿಧಿಗೆ ಆಗಮಿಸಿದ ಟೀಮ್ ಇಂಡಿಯಾ ಆಟಗಾರನಿಗೆ ಟಿಟಿಡಿ ಆಡಳಿತ ಮಂಡಳಿ ಶ್ರೀಗಳ ನಾಮಸ್ಮರಣೆಯೊಂದಿಗೆ ಅದ್ಧೂರಿ ಸ್ವಾಗತ ಕೋರಿದೆ. ಅಲ್ಲದೆ ನಿತೀಶ್ ಕುಟುಂಬಕ್ಕೆ ದೇವರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ.

ಅದರಂತೆ ಮಂಗಳವಾರ (ಜನವರಿ 14) ಬೆಳಗ್ಗೆ ನಿತೀಶ್ ಕುಮಾರ್ ರೆಡ್ಡಿ ಕುಟುಂಬಸ್ಥರು ಸನ್ನಿಧಿಗೆ ತೆರಳಿ ತಿರುಮಲ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಇದೀಗ ಮೊಣಕಾಲಿನಲ್ಲೇ ತಿರುಮಲ ಮೆಟ್ಟಿಲು ಹತ್ತುತ್ತಿರುವ ನಿತೀಶ್ ಕುಮಾರ್ ರೆಡ್ಡಿ ಅವರ ಫೋಟೋ ಮತ್ತು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಿತೀಶ್ ಕುಮಾರ್ ರೆಡ್ಡಿ ವಿಡಿಯೋ:

ಐಸಿಸಿ ಟೂರ್ನಿಗೆ ಆಯ್ಕೆಯಾಗುವ ನಿರೀಕ್ಷೆಯಲ್ಲಿ ನಿತೀಶ್:

ನಿತೀಶ್ ಕುಮಾರ್ ರೆಡ್ಡಿ ಈಗಾಗಲೇ ಭಾರತ ಟೆಸ್ಟ್ ಮತ್ತು ಟಿ20 ತಂಡಗಳನ್ನು ಪ್ರತಿನಿಧಿಸಿದ್ದಾರೆ. ಅಲ್ಪಾವಧಿಯಲ್ಲೇ ಎರಡು ತಂಡಗಳಲ್ಲಿ ಸ್ಥಾನ ಪಡೆದಿರುವ ನಿತೀಶ್ ಅವರು ಇದೀಗ ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಅದರಲ್ಲೂ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗುವ ವಿಶ್ವಾಸದಲ್ಲಿದ್ದಾರೆ. ಈಗಾಗಲೇ ಟೆಸ್ಟ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿರುವ ನಿತೀಶ್ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಶತಕ ಸಿಡಿಸುವ ಮೂಲಕ ಮಿಂಚಿದ್ದರು.

ಇದನ್ನೂ ಓದಿ: ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ… 4 ತಿಂಗಳಲ್ಲಿ 3 ಪ್ರಮುಖ ಟೂರ್ನಿ

ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿರುವ ನಿತೀಶ್ ಕುಮಾರ್ ರೆಡ್ಡಿ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗಲಿದ್ದಾರಾ ಕಾದು ನೋಡಬೇಕಿದೆ.

Published On - 11:32 am, Tue, 14 January 25

ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ