ತಗ್ಗೋದೆ ಇಲ್ಲ… ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್ ರೆಡ್ಡಿ
India vs Australia: ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಆಕರ್ಷಕ ಅರ್ಧಶತಕ ಬಾರಿಸಿದ್ದಾರೆ. ಅದು ನಿತೀಶ್ ಅವರ ಚೊಚ್ಚಲ ಹಾಫ್ ಸೆಂಚುರಿ ಎಂಬುದು ವಿಶೇಷ. ಈ ಅರ್ಧಶತಕದ ಬೆನ್ನಲ್ಲೇ ನಿತೀಶ್ ಕುಮಾರ್ ರೆಡ್ಡಿ ಪುಷ್ಪ ಸ್ಟ್ರೈಲ್ನಲ್ಲಿ ಸಂಭ್ರಮಿಸಿದರು.
ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಅರ್ಧಶತಕ ಬಾರಿಸಿದ್ದಾರೆ. ಈ ಅರ್ಧಶತಕದ ಬೆನ್ನಲ್ಲೇ ನಿತೀಶ್ ರೆಡ್ಡಿ ಪುಷ್ಪ ಸ್ಟೈಲ್ನಲ್ಲಿ ಸಂಭ್ರಮಿಸಿದ್ದು ವಿಶೇಷ.
ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ ಕುಮಾರ್ ರೆಡ್ಡಿ 81 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಯುವ ದಾಂಡಿಗ ಚೊಚ್ಚಲ ಹಾಫ್ ಸೆಂಚುರಿ ಎಂಬುದು ವಿಶೇಷ. ಈ ಅರ್ಧಶತಕದ ಸಾಧನೆ ಮಾಡುತ್ತಿದ್ದಂತೆ ಬ್ಯಾಟ್ ಮೂಲಕ ತಗ್ಗೋದೆ ಇಲ್ಲ ಎಂಬ ಪುಷ್ಪ ಶೈಲಿಯಲ್ಲಿ ಸಂಭ್ರಮಿಸಿದರು.
ಇದೀಗ ಅಲ್ಲು ಅರ್ಜುನ್ ನಟನೆಯ ಪುಷ್ಪ ಚಿತ್ರದ ಸ್ಟ್ರೈಲ್ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್ ರೆಡ್ಡಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಸ್ಯಾಮ್ ಕೊನ್ಸ್ಟಾಸ್ (60), ಉಸ್ಮಾನ್ ಖ್ವಾಜಾ (57) ಹಾಗೂ ಮಾರ್ನಸ್ ಲಾಬುಶೇನ್ (72) ಅರ್ಧಶತಕ ಬಾರಿಸಿದರು. ಆ ಬಳಿಕ ಬಂದ ಸ್ಟೀವ್ ಸ್ಮಿತ್ 140 ರನ್ ಬಾರಿಸಿ ಅಬ್ಬರಿಸಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್ನಲ್ಲಿ 474 ರನ್ ಕಲೆಹಾಕಿದೆ.
ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಟೀಮ್ ಇಂಡಿಯಾ 90 ಓವರ್ಗಳ ಮುಕ್ತಾಯದ ವೇಳೆಗೆ ಮೊದಲ ಇನಿಂಗ್ಸ್ನಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿದೆ. ಕ್ರೀಸ್ನಲ್ಲಿ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್ ಮಾಡುತ್ತಿದ್ದಾರೆ.