3 ಸರಣಿಗಳಿಂದ ಟೀಮ್ ಇಂಡಿಯಾ ಆಟಗಾರ ಔಟ್!

ಭಾರತ ಮತ್ತು ಐರ್ಲೆಂಡ್ ನಡುವಣ ಟಿ20 ಸರಣಿಯ ಜೂನ್ 26 ರಿಂದ ಶುರುವಾಗಲಿದೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 5 ಮ್ಯಾಚ್​ಗಳ ಟಿ20 ಸರಣಿ ಆಡಲಿದೆ. ಆ ನಂತರ ಭಾರತ ಮತ್ತು ಇಂಗ್ಲೆಂಡ್ ನಡುವಣ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಮೂರು ಸರಣಿಗಳಿಂದ ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ಹೊರಬಿದ್ದಿದ್ದಾರೆ.

3 ಸರಣಿಗಳಿಂದ ಟೀಮ್ ಇಂಡಿಯಾ ಆಟಗಾರ ಔಟ್!
Team India
Image Credit source: BCCI

Updated on: Jun 23, 2026 | 10:46 AM

ಟೀಮ್ ಇಂಡಿಯಾದ ಉದಯೋನ್ಮುಖ ಆಲ್-ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರು ಮುಂಬರುವ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿಗಳಿಂದ ಹೊರಬಿದ್ದಿದ್ದಾರೆ.  ಎಡಗಾಲಿನ ಸ್ನಾಯು ಸೆಳೆತದ ಗಾಯದ ಸಮಸ್ಯೆಯ ಕಾರಣದಿಂದಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

ಅಫ್ಘಾನಿಸ್ತಾನ್ ವಿರುದ್ಧದ ಸರಣಿಯ ವೇಳೆ ಅವರು ತೊಡೆಯ ನೋವಿನ ಸಮಸ್ಯೆ ಎದುರಿಸಿದ್ದರು. ಆ ಬಳಿಕ ಅವರ ಗಾಯದ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ.

ಈ ಸಮಸ್ಯೆಯ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿತೀಶ್ ಅವರ ಎಡಗಾಲಿನ ಸ್ನಾಯುವಿನಲ್ಲಿ ತೀವ್ರವಾದ ಊತ ಮತ್ತು  ಹಾನಿಯಾಗಿರುವುದು ಎಂಆರ್‌ಐ ಸ್ಕ್ಯಾನಿಂಗ್‌ನಲ್ಲಿ ದೃಢಪಟ್ಟಿದೆ. ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ.

ಪ್ರಸ್ತುತ ಮಾಹಿತಿ ಪ್ರಕಾರ, ನಿತೀಶ್ ಕುಮಾರ್ ರೆಡ್ಡಿಗೆ ವೈದ್ಯರು ಕನಿಷ್ಠ 4 ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಯುವ ಆಲ್​ರೌಂಡರ್​ನನ್ನು ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿಗಳಿಂದ ಕೈ ಬಿಡಲಾಗಿದೆ.

ಪಾಂಡ್ಯ ಕೂಡ ಅಲಭ್ಯ:

ಟೀಮ್ ಇಂಡಿಯಾದ ಅನುಭವಿ ಆಲ್-ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿಯೇ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಭಾರತ ಟಿ20 ಹಾಗೂ ಏಕದಿನ ತಂಡಗಳಿಗೆ ಆಯ್ಕೆ ಮಾಡಲಾಗಿತ್ತು. ಆದರೀಗ ನಿತೀಶ್ ಕುಮಾರ್​ ರೆಡ್ಡಿ ಕೂಡ ಗಾಯದ ಸಮಸ್ಯೆಯಿಂದ ಹೊರಗುಳಿಯಬೇಕಾಗಿ ಬಂದಿದೆ.

ಬದಲಿ ಆಟಗಾರ ಯಾರು?

ನಿತೀಶ್ ಕುಮಾರ್ ರೆಡ್ಡಿ ಸ್ಥಾನಕ್ಕೆ ಇನ್ನೂ ಕೂಡ ಬದಲಿ ಆಟಗಾರನನ್ನು ಹೆಸರಿಸಿಲ್ಲ. ಇದಾಗ್ಯೂ ದೇಶಿ ಕ್ರಿಕೆಟ್‌ನಲ್ಲಿ ಆಲ್​ರೌಂಡರ್​ ಆಟದೊಂದಿಗೆ ಮಿಂಚಿರುವ ಸೂರ್ಯಾಂಶ್ ಶೆಡ್ಗೆ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

ಟೀಮ್ ಇಂಡಿಯಾದ ಮುಂದಿನ 3 ಸರಣಿ:

  • ಭಾರತ vs ಐರ್ಲೆಂಡ್: 2 ಪಂದ್ಯಗಳ ಟಿ20 ಸರಣಿ
  • ಭಾರತ vs ಇಂಗ್ಲೆಂಡ್:  5 ಪಂದ್ಯಗಳ ಟಿ20 ಸರಣಿ
  • ಭಾರತ vs ಇಂಗ್ಲೆಂಡ್: 3 ಪಂದ್ಯಗಳ ಏಕದಿನ ಸರಣಿ

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್. ನಿತೀಶ್ ಕುಮಾರ್ ರೆಡ್ಡಿ (ಅಲಭ್ಯ).

ಇದನ್ನೂ ಓದಿ: ವೈಭವ್ ಸೂರ್ಯವಂಶಿ ಕೈ ಸೇರಿದ ಟೀಮ್ ಇಂಡಿಯಾ ಜೆರ್ಸಿ!

ಭಾರತ ಟಿ20 ತಂಡ:  ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ. ನಿತೀಶ್ ಕುಮಾರ್ ರೆಡ್ಡಿ (ಅಲಭ್ಯ).

 

Published On - 10:43 am, Tue, 23 June 26

Follow Us