ಲೆಜೆಂಡ್ ಕ್ರಿಕೆಟಿಗನ ಕಾಲಿಗೆ ಬಿದ್ದ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

Australia vs India, 4th Test: ಮೆಲ್ಬೋರ್ನ್​ನ ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್ ಪಂದ್ಯವು ನಾಲ್ಕನೇ ದಿನದಾಟಕ್ಕೆ ಕಾಲಿಟ್ಟಿದೆ. ಈ ಪಂದ್ಯದಲ್ಲಿ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ತಂಡವು 2 ವಿಕೆಟ್ ಕಳೆದುಕೊಂಡಿದ್ದು, ಇದಾಗ್ಯೂ ಉತ್ತಮ ಬ್ಯಾಟಿಂಗ್ ಮುಂದುವರೆಸಿದೆ.

ಲೆಜೆಂಡ್ ಕ್ರಿಕೆಟಿಗನ ಕಾಲಿಗೆ ಬಿದ್ದ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
Nitish Kumar Reddy
Follow us
ಝಾಹಿರ್ ಯೂಸುಫ್
|

Updated on: Dec 29, 2024 | 8:21 AM

ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್ ಶನಿವಾರ ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿತ್ತು. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ನಿತೀಶ್ ಕುಮಾರ್ ರೆಡ್ಡಿ ಆಕರ್ಷಕ ಶತಕ ಬಾರಿಸಿ ಮಿಂಚಿದ್ದರು. ಇತ್ತ ನಿತೀಶ್ ಶತಕ ಪೂರೈಸುತ್ತಿದ್ದರೆ, ಅತ್ತ ಅವರ ತಂದೆ ಮುತ್ಯಾಲ ರೆಡ್ಡಿ ಆನಂದಭಾಷ್ಪ ಸುರಿಸಿದ್ದರು.

ಇದಾದ ಬಳಿಕ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನ ಕಾಮೆಂಟ್ರಿ ರೂಮ್​ ಬಳಿ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ ದಿ ಲೆಜೆಂಡ್ ಸುನಿಲ್ ಗವಾಸ್ಕರ್ ಅವರನ್ನು ಭೇಟಿಯಾಗಿದ್ದಾರೆ. ಗವಾಸ್ಕರ್ ಅವರೊಂದಿಗೆ ಮಾತನಾಡುತ್ತಾ ಮುತ್ಯಾಲ ರೆಡ್ಡಿ ದಂಪತಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದು ವಿಶೇಷವಾಗಿತ್ತು. ಇದೀಗ ಗವಾಸ್ಕರ್ ಅವರಿಂದ ಆಶೀರ್ವಾದ ಪಡೆಯುತ್ತಿರುವ ನಿತೀಶ್ ಕುಮಾರ್ ರೆಡ್ಡಿ ಅವರ ಪೋಷಕರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಸ್ಯಾಮ್ ಕೊನ್​ಸ್ಟಾಸ್ (60), ಉಸ್ಮಾನ್ ಖ್ವಾಜಾ (57) ಹಾಗೂ ಮಾರ್ನಸ್ ಲಾಬುಶೇನ್ (72) ಅರ್ಧಶತಕ ಬಾರಿಸಿದರೆ, ಸ್ಟೀವ್ ಸ್ಮಿತ್ (140) ಶತಕ ಸಿಡಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದೆ.

ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ 8ನೇ ವಿಕೆಟ್​ಗೆ ಜೊತೆಯಾದ ವಾಷಿಂಗ್ಟನ್ ಸುಂದರ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಶತಕದ ಜೊತೆಯಾಟವಾಡಿದರು.

ವಾಷಿಂಗ್ಟನ್ ಸುಂದರ್ ಅರ್ಧಶತಕ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಿತೀಶ್ ಕುಮಾರ್ ರೆಡ್ಡಿ 114 ರನ್​ಗಳ ಭರ್ಜರಿ ಶತಕ ಸಿಡಿಸಿದರು. ಈ ಅತ್ಯುತ್ತಮ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 369 ರನ್ ಕಲೆಹಾಕಿದೆ.

ಇದನ್ನೂ ಓದಿ: ಭಾರತ vs ಆಸ್ಟ್ರೇಲಿಯಾ ಪಂದ್ಯದ ನಡುವೆ ಹಾರಾಡಿದ ಕಾಂಡೋಮ್

ಇದೀಗ 105 ರನ್​​ಗಳ ಮೊದಲ ಇನಿಂಗ್ಸ್​ ಮುನ್ನಡೆಯೊಂದಿಗೆ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್ ಶುರು ಮಾಡಿದ್ದು, 31 ಓವರ್​​ಗಳ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 78 ರನ್ ಕಲೆಹಾಕಿದೆ. ಕ್ರೀಸ್​ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಮುಂದುವರೆಸಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ