IND vs PAK: ಭಾರತ- ಪಾಕ್ ನಡುವೆ ದ್ವಿಪಕ್ಷೀಯ ಸರಣಿ ಸಾಧ್ಯವೇ ಇಲ್ಲ ಎಂದ ಬಿಸಿಸಿಐ
No Bilateral India-Pakistan Cricket Series: ಪಹಲ್ಗಾಮ್‌ನ ಭಯೋತ್ಪಾದಕ ದಾಳಿಯ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆಯುವ ಸಾಧ್ಯತೆಯೇ ಇಲ್ಲ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಘೋಷಿಸಿದ್ದಾರೆ. ಭಾರತ ಸರ್ಕಾರದ ನಿರ್ಧಾರಕ್ಕೆ ಬಿಸಿಸಿಐ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಐಸಿಸಿ ಟೂರ್ನಮೆಂಟ್‌ಗಳಲ್ಲಿ ಮಾತ್ರ ಭಾರತ ಪಾಕಿಸ್ತಾನದ ವಿರುದ್ಧ ಆಡಲಿದೆ ಎಂದು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ (IND vs PAK) ನಡುವಿನ ಕ್ರಿಕೆಟ್ ಪಂದ್ಯಕ್ಕಾಗಿ ಪ್ರಪಂಚದಾದ್ಯಂತದ ಅಭಿಮಾನಿಗಳು ಕಾಯುತ್ತಿರುತ್ತಾರೆ. ಆದಾಗ್ಯೂ, ರಾಜಕೀಯ ಸಮಸ್ಯೆಗಳಿಂದಾಗಿ ಎರಡೂ ದೇಶಗಳು ಬಹಳ ಸಮಯದಿಂದ ಯಾವುದೇ ದ್ವಿಪಕ್ಷೀಯ ಸರಣಿಗಳನ್ನು (Bilateral Series) ಆಡಿಲ್ಲ. ಮಂಗಳವಾರ ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terrorist Attack) ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ, ಎರಡೂ ದೇಶಗಳ ನಡುವಿನ ಸಂಬಂಧಗಳು ಮತ್ತೊಮ್ಮೆ ಹದಗೆಟ್ಟಿವೆ. ಈ ಹೇಡಿತನದ ದಾಳಿಯಲ್ಲಿ 26 ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯ ನಂತರ, ಎಲ್ಲರ ಮನಸ್ಸಿನಲ್ಲಿರುವ ಪ್ರಶ್ನೆಯೆಂದರೆ ನಾವು ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸರಣಿಯನ್ನು ನೋಡುತ್ತೇವೆಯೇ ಎಂಬುದು. ಈ ಪ್ರಶ್ನೆಗೆ ಉತ್ತರವನ್ನು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ನೀಡಿದ್ದಾರೆ.
ಈ ಬಗ್ಗೆ ‘ಸ್ಪೋರ್ಟ್ಸ್ ತಕ್’ ಜೊತೆ ಮಾತನಾಡಿದ ರಾಜೀವ್ ಶುಕ್ಲಾ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದರು ಮತ್ತು ಭಾರತ ಸರ್ಕಾರ ಏನು ಹೇಳುತ್ತದೆಯೋ, ಬಿಸಿಸಿಐ ಅದನ್ನೇ ಮಾಡುತ್ತದೆ. ನಾವು ಪಾಕಿಸ್ತಾನದ ವಿರುದ್ಧ ಯಾವುದೇ ದ್ವಿಪಕ್ಷೀಯ ಸರಣಿಯನ್ನು ಆಡುವುದಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ನಾವು ಅಮಾಯಕರೊಂದಿಗೆ ಇದ್ದು, ಇಡೀ ಘಟನೆಯನ್ನು ಖಂಡಿಸುತ್ತೇವೆ. ನಮ್ಮ ಸರ್ಕಾರ ಏನು ಹೇಳುತ್ತದೆಯೋ, ಅದನ್ನು ಮಾಡುತ್ತೇವೆ ಎಂದಿದ್ದಾರೆ.
ಭವಿಷ್ಯದಲ್ಲಿಯೂ ದ್ವಿಪಕ್ಷೀಯ ಸರಣಿ ಆಡುವುದಿಲ್ಲ
‘ನಾವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿಗಳನ್ನು ಆಡುವುದಿಲ್ಲ ಎಂದಿರುವ ರಾಜೀವ್ ಭವಿಷ್ಯದಲ್ಲಿಯೂ ನಾವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿಗಳನ್ನು ಆಡುವುದಿಲ್ಲ. ಆದರೆ ಐಸಿಸಿ ಕಾರ್ಯಕ್ರಮಗಳ ವಿಷಯಕ್ಕೆ ಬಂದಾಗ, ನಾವು ಐಸಿಸಿ ಭಾಗವಹಿಸುವಿಕೆಯಿಂದಾಗಿ ಆಡುತ್ತೇವೆ ಎಂದಿದ್ದಾರೆ.
Pahalgam attack: ಭಾರತದಲ್ಲಿ ಪಾಕ್ ಸೂಪರ್ ಲೀಗ್ ಪಂದ್ಯಗಳ ಪ್ರಸಾರ ರದ್ದು
12 ವರ್ಷಗಳ ಹಿಂದೆ ದ್ವಿಪಕ್ಷೀಯ ಸರಣಿ
ಭಾರತ ಮತ್ತು ಪಾಕಿಸ್ತಾನ ಕೊನೆಯ ಬಾರಿಗೆ ದ್ವಿಪಕ್ಷೀಯ ಸರಣಿಯನ್ನು ಆಡಿದ್ದು 2012-2013 ರಲ್ಲಿ. ಈ ವೇಳೆ ಎರಡು ಪಂದ್ಯಗಳ ಟಿ20 ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಎರಡೂ ದೇಶಗಳ ನಡುವೆ ಆಡಲಾಯಿತು. ಭಾರತದ ಬಗ್ಗೆ ಹೇಳುವುದಾದರೆ, ತಂಡವು ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ 2008 ರಲ್ಲಿ ಏಷ್ಯಾಕಪ್ ಆಡಲು ಭೇಟಿ ನೀಡಿತ್ತು. ಈ ವರ್ಷ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸಲಾಗಿತ್ತು, ಅಲ್ಲಿ ಭಾರತ ತನ್ನ ಎಲ್ಲಾ ಪಂದ್ಯಗಳನ್ನು ಯುಎಇಯಲ್ಲಿ ಆಡಿತು. ಭಾರತ ಫೈನಲ್ ತಲುಪಿದ್ದರಿಂದ ಈ ಪಂದ್ಯವನ್ನು ದುಬೈನಲ್ಲಿ ಆಡಲಾಯಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ