IPL 2022: ಡಿಕೆ,ಆರ್​ಕೆಗೂ ಇಲ್ಲ ಸ್ಥಾನ, ಪೀಟರ್ಸನ್​ರ ಅಚ್ಚರಿಯ ಐಪಿಎಲ್ ಪ್ಲೇಯಿಂಗ್ 11

Kevin Pietersen's IPL 2022 XI: ಕೆವಿನ್ ಪೀಟರ್ಸನ್ ಅವರ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾಂಪಿಯನ್ ತಂಡ ಗುಜರಾತ್ ಟೈಟಾನ್ಸ್‌ನ ಕೇವಲ 3 ಆಟಗಾರರು ಮಾತ್ರ ಸ್ಥಾನ ಪಡೆದಿದ್ದಾರೆ.

IPL 2022: ಡಿಕೆ,ಆರ್​ಕೆಗೂ ಇಲ್ಲ ಸ್ಥಾನ, ಪೀಟರ್ಸನ್​ರ ಅಚ್ಚರಿಯ ಐಪಿಎಲ್ ಪ್ಲೇಯಿಂಗ್ 11
Kevin Pietersen's IPL 2022 XI
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 01, 2022 | 2:26 PM

IPL 2022: ಇಂಡಿಯನ್ ಪ್ರೀಮಿಯರ್ ಲೀಗ್‌ನ 15 ನೇ ಸೀಸನ್ ಮೇ 29 ರಂದು ಯಶಸ್ವಿಯಾಗಿ ಪೂರ್ಣಗೊಂಡಿತು. ಈ ಸೀಸನ್​ನ ಫೈನಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿ ಗುಜರಾತ್ ಟೈಟಾನ್ಸ್ ತಂಡ ಪ್ರಶಸ್ತಿ ಗೆದ್ದುಕೊಂಡಿತು. ಇಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ತಂಡವು ಚಾಂಪಿಯನ್ ಆಗಿದ್ದರೂ, 10 ತಂಡಗಳಲ್ಲಿನ ಅನೇಕ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಹೀಗೆ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಒಳಗೊಂಡ ಪ್ಲೇಯಿಂಗ್ 11 ಅನ್ನು ಕೆಲ ದಿನಗಳ ಹಿಂದೆಯಷ್ಟೇ ಸಚಿನ್ ತೆಂಡೂಲ್ಕರ್ ಪ್ರಕಟಿಸಿದ್ದರು. ಇದೀಗ ಇಂಗ್ಲೆಂಡ್​ನ ಮಾಜಿ ನಾಯಕ ಕೆವಿನ್ ಪೀಟರ್ಸನ್ (Kevin Pietersen) ಕೂಡ ಈ ಬಾರಿಯ ಐಪಿಎಲ್​ನ ಬೆಸ್ಟ್ ಪ್ಲೇಯಿಂಗ್ 11 ಪ್ರಕಟಿಸಿದ್ದಾರೆ. ವಿಶೇಷವೆಂದರೆ ಈ ತಂಡದಲ್ಲಿ ದಿನೇಶ್ ಕಾರ್ತಿಕ್ ಮತ್ತು ರಶೀದ್ ಖಾನ್ ಅವರನ್ನು ಸೇರಿಸಿಕೊಂಡಿಲ್ಲ.

ಇನ್ನು ಪೀಟರ್ಸನ್ ಅವರ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾಂಪಿಯನ್ ತಂಡ ಗುಜರಾತ್ ಟೈಟಾನ್ಸ್‌ನ ಕೇವಲ 3 ಆಟಗಾರರು ಮಾತ್ರ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ರಶೀದ್ ಖಾನ್ ಹಾಗೂ ದಿನೇಶ್ ಕಾರ್ತಿಕ್ ಅವರನ್ನು ಯಾಕೆ ಆಯ್ಕೆ ಮಾಡಿಲ್ಲ ಎಂಬುದೇ ಅಚ್ಚರಿ. ಏಕೆಂದರೆ ಐಪಿಎಲ್ 2022 ರಲ್ಲಿ ರಶೀದ್ ಖಾನ್ ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಗುಜರಾತ್ ಟೈಟಾನ್ಸ್​ ಪರ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಈ ಬಾರಿ ರಶೀದ್ ಖಾನ್ 16 ಪಂದ್ಯಗಳಲ್ಲಿ 19 ವಿಕೆಟ್ ಪಡೆದಿದ್ದಾರೆ. ಅಷ್ಟೇ ಅಲ್ಲ ಹಲವು ಬಾರಿ ಮಹತ್ವದ ಇನ್ನಿಂಗ್ಸ್‌ಗಳನ್ನು ಆಡುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.

ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಕೂಡ ಈ ಬಾರಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆರ್​ಸಿಬಿ ತಂಡ ಫಿನಿಶರ್ ಪಾತ್ರವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿದರು. ಕಾರ್ತಿಕ್ 16 ಪಂದ್ಯಗಳಲ್ಲಿ 330 ರನ್ ಗಳಿಸಿ ಮಿಂಚಿದ್ದರು. ಇದಾಗ್ಯೂ ಕೆವಿನ್ ಪೀಟರ್ಸನ್ ಅವರ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಸಿಕ್ಕಿಲ್ಲ. ಆಗಿದ್ರೆ ಪೀಟರ್ಸನ್ ಅವರ ಐಪಿಎಲ್ ಪ್ಲೇಯಿಂಗ್ 11 ನಲ್ಲಿ ಯಾರೆಲ್ಲಾ ಇದ್ದಾರೆ ನೋಡೋಣ…

ಇದನ್ನೂ ಓದಿ
Image
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Image
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಕೆವಿನ್ ಪೀಟರ್ಸನ್ ಪ್ಲೇಯಿಂಗ್ ಇಲೆವೆನ್: ಜೋಸ್ ಬಟ್ಲರ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಿಲ್ಲರ್, ರವಿಚಂದ್ರನ್ ಅಶ್ವಿನ್, ರಾಹುಲ್ ತೆವಾಟಿಯಾ, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್ ಮತ್ತು ಜೋಸ್ ಹ್ಯಾಝಲ್​ವುಡ್​.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್