IPL 2022: ಇಂಡಿಯನ್ ಪ್ರೀಮಿಯರ್ ಲೀಗ್‌ನ 15 ನೇ ಸೀಸನ್ ಮೇ 29 ರಂದು ಯಶಸ್ವಿಯಾಗಿ ಪೂರ್ಣಗೊಂಡಿತು. ಈ ಸೀಸನ್ನ ಫೈನಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿ ಗುಜರಾತ್ ಟೈಟಾನ್ಸ್ ತಂಡ ಪ್ರಶಸ್ತಿ ಗೆದ್ದುಕೊಂಡಿತು. ಇಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ತಂಡವು ಚಾಂಪಿಯನ್ ಆಗಿದ್ದರೂ, 10 ತಂಡಗಳಲ್ಲಿನ ಅನೇಕ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಹೀಗೆ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಒಳಗೊಂಡ ಪ್ಲೇಯಿಂಗ್ 11 ಅನ್ನು ಕೆಲ ದಿನಗಳ ಹಿಂದೆಯಷ್ಟೇ ಸಚಿನ್ ತೆಂಡೂಲ್ಕರ್ ಪ್ರಕಟಿಸಿದ್ದರು. ಇದೀಗ ಇಂಗ್ಲೆಂಡ್ನ ಮಾಜಿ ನಾಯಕ ಕೆವಿನ್ ಪೀಟರ್ಸನ್ (Kevin Pietersen) ಕೂಡ ಈ ಬಾರಿಯ ಐಪಿಎಲ್ನ ಬೆಸ್ಟ್ ಪ್ಲೇಯಿಂಗ್ 11 ಪ್ರಕಟಿಸಿದ್ದಾರೆ. ವಿಶೇಷವೆಂದರೆ ಈ ತಂಡದಲ್ಲಿ ದಿನೇಶ್ ಕಾರ್ತಿಕ್ ಮತ್ತು ರಶೀದ್ ಖಾನ್ ಅವರನ್ನು ಸೇರಿಸಿಕೊಂಡಿಲ್ಲ.
ಇನ್ನು ಪೀಟರ್ಸನ್ ಅವರ ಪ್ಲೇಯಿಂಗ್ ಇಲೆವೆನ್ನಲ್ಲಿ ಚಾಂಪಿಯನ್ ತಂಡ ಗುಜರಾತ್ ಟೈಟಾನ್ಸ್‌ನ ಕೇವಲ 3 ಆಟಗಾರರು ಮಾತ್ರ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ರಶೀದ್ ಖಾನ್ ಹಾಗೂ ದಿನೇಶ್ ಕಾರ್ತಿಕ್ ಅವರನ್ನು ಯಾಕೆ ಆಯ್ಕೆ ಮಾಡಿಲ್ಲ ಎಂಬುದೇ ಅಚ್ಚರಿ. ಏಕೆಂದರೆ ಐಪಿಎಲ್ 2022 ರಲ್ಲಿ ರಶೀದ್ ಖಾನ್ ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಗುಜರಾತ್ ಟೈಟಾನ್ಸ್ ಪರ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಈ ಬಾರಿ ರಶೀದ್ ಖಾನ್ 16 ಪಂದ್ಯಗಳಲ್ಲಿ 19 ವಿಕೆಟ್ ಪಡೆದಿದ್ದಾರೆ. ಅಷ್ಟೇ ಅಲ್ಲ ಹಲವು ಬಾರಿ ಮಹತ್ವದ ಇನ್ನಿಂಗ್ಸ್‌ಗಳನ್ನು ಆಡುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.
ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಕೂಡ ಈ ಬಾರಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆರ್ಸಿಬಿ ತಂಡ ಫಿನಿಶರ್ ಪಾತ್ರವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿದರು. ಕಾರ್ತಿಕ್ 16 ಪಂದ್ಯಗಳಲ್ಲಿ 330 ರನ್ ಗಳಿಸಿ ಮಿಂಚಿದ್ದರು. ಇದಾಗ್ಯೂ ಕೆವಿನ್ ಪೀಟರ್ಸನ್ ಅವರ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಸಿಕ್ಕಿಲ್ಲ. ಆಗಿದ್ರೆ ಪೀಟರ್ಸನ್ ಅವರ ಐಪಿಎಲ್ ಪ್ಲೇಯಿಂಗ್ 11 ನಲ್ಲಿ ಯಾರೆಲ್ಲಾ ಇದ್ದಾರೆ ನೋಡೋಣ…
ಕೆವಿನ್ ಪೀಟರ್ಸನ್ ಪ್ಲೇಯಿಂಗ್ ಇಲೆವೆನ್: ಜೋಸ್ ಬಟ್ಲರ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಿಲ್ಲರ್, ರವಿಚಂದ್ರನ್ ಅಶ್ವಿನ್, ರಾಹುಲ್ ತೆವಾಟಿಯಾ, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್ ಮತ್ತು ಜೋಸ್ ಹ್ಯಾಝಲ್ವುಡ್.
ಕ್ರಿಕೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.