Day-Night Test: ಭಾರತದಲ್ಲಿ ಇನ್ನು ಮುಂದೆ ನಡೆಯಲ್ಲ ಪಿಂಕ್ ಬಾಲ್ ಟೆಸ್ಟ್: ಬಿಸಿಸಿಐ ಶಾಕಿಂಗ್ ನಿರ್ಧಾರ

Pink Ball Test: ಇಲ್ಲಿಯವರೆಗೆ ಗುಲಾಬಿ ಚೆಂಡಿನೊಂದಿಗೆ ಆಡಿದ ಎಲ್ಲಾ ಟೆಸ್ಟ್‌ಗಳು ಕೇವಲ 2-3 ದಿನಗಳಲ್ಲಿ ಕೊನೆಗೊಂಡಿವೆ. ಜನರು 4 ರಿಂದ 5 ದಿನಗಳವರೆಗೆ ಟೆಸ್ಟ್ ಪಂದ್ಯಗಳನ್ನು ವೀಕ್ಷಿಸಲು ಇಷ್ಟಪಡುತ್ತಾರೆ. ಆದರೆ, ಇದು ಬೇಗನೆ ಮುಕ್ತಾಯಗೊಳ್ಳುತ್ತದೆ. ಹೀಗಾಗಿ ಬಿಸಿಸಿಐ ಭಾರತದಲ್ಲಿ ಇದನ್ನು ನಿಲ್ಲಿಸಲು ಮುಂದಾಗಿದೆಯಂತೆ.

Day-Night Test: ಭಾರತದಲ್ಲಿ ಇನ್ನು ಮುಂದೆ ನಡೆಯಲ್ಲ ಪಿಂಕ್ ಬಾಲ್ ಟೆಸ್ಟ್: ಬಿಸಿಸಿಐ ಶಾಕಿಂಗ್ ನಿರ್ಧಾರ
Pink Ball Test
Follow us
Vinay Bhat
|

Updated on: Dec 11, 2023 | 10:56 AM

ಇನ್ನು ಮುಂದೆ ಭಾರತದಲ್ಲಿ ಹಗಲು-ರಾತ್ರಿ ಟೆಸ್ಟ್ (Day-Night Test) ಪಂದ್ಯಗಳು ನಡೆಯುವು ಅನುಮಾನ. ಡೇ-ನೈಟ್ ಟೆಸ್ಟ್ ಪಂದ್ಯವನ್ನು ಗುಲಾಬಿ ಚೆಂಡಿನೊಂದಿಗೆ ಆಡಲಾಗುತ್ತದೆ. ಇದೀಗ ಭಾರತೀಯ ಮೈದಾನದಲ್ಲಿ ಈ ಪಂದ್ಯಗಳನ್ನು ಆಯೋಜಿಸುವ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ ಎಂಬ ವರದಿಗಳಾಗಿವೆ. ಬಿಸಿಸಿಐ ಇನ್ನು ಮುಂದೆ ಪುರುಷರ ಕ್ರಿಕೆಟ್‌ನಲ್ಲಿ ಅಥವಾ ಮಹಿಳೆಯರ ಈವೆಂಟ್‌ಗಳಲ್ಲಿ ಡೇ-ನೈಟ್ ಟೆಸ್ಟ್ ಪಂದ್ಯವನ್ನು ದೇಶೀಯ ಋತುವಿನಲ್ಲಿ ಆಯೋಜಿಸುವುದಿಲ್ಲ. ಬಿಸಿಸಿಐ ಪಿಂಕ್ ಬಾಲ್ ಟೆಸ್ಟ್ ಆಯೋಜಿಸಲು ಆಸಕ್ತಿ ಹೊಂದಿಲ್ಲ ಎಂದು ಹೇಳಲಾಗಿದೆ.

ವರದಿಯ ಪ್ರಕಾರ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪತ್ರಕರ್ತರೊಂದಿಗೆ ಮಾತನಾಡುತ್ತಾ, ಭಾರತೀಯ ಮಂಡಳಿಯು ಇನ್ನು ಮುಂದೆ ಪಿಂಕ್ ಬಾಲ್ ಟೆಸ್ಟ್‌ಗೆ ಉತ್ಸುಕವಾಗಿಲ್ಲ, ಏಕೆಂದರೆ ಇದು 4 ಅಥವಾ 5 ದಿನಗಳ ಬದಲಿಗೆ 2 ರಿಂದ 3 ದಿನಗಳಲ್ಲಿ ಕೊನೆಗೊಳ್ಳುತ್ತದೆ ಎಂದು ಹೇಳಿದ್ದಾರೆ. ಪಿಂಕ್ ಬಾಲ್ ಟೆಸ್ಟ್ ಅನ್ನು ಜನರಲ್ಲಿ ಜನಪ್ರಿಯಗೊಳಿಸಲು ಬಿಸಿಸಿಐ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದೆ ಎಂದು ಜಯ್ ಶಾ ಹೇಳಿದರು.

IND vs PAK: ಪಾಕ್ ಎದುರು ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಮತ್ತಷ್ಟು ಕಠಿಣ..!

ಇದನ್ನೂ ಓದಿ
Image
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
Image
ನಾಳೆ IND vs SA ಎರಡನೇ ಟಿ20: ಸ್ಯಾಂಟ್ ಜಾರ್ಜ್ ಪಾರ್ಕ್ ಪಿಚ್ ಹೇಗಿದೆ?
Image
IND vs SA ಎರಡನೇ ಟಿ20 ಪಂದ್ಯ ಕೂಡ ನಡೆಯುವುದು ಡೌಟ್: ಯಾಕೆ ನೋಡಿ
Image
IND vs SA ದ್ವಿತೀಯ ಟಿ20 ಪಂದ್ಯ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ?

ಇಲ್ಲಿಯವರೆಗೆ ಗುಲಾಬಿ ಚೆಂಡಿನೊಂದಿಗೆ ಆಡಿದ ಎಲ್ಲಾ ಟೆಸ್ಟ್‌ಗಳು ಕೇವಲ 2-3 ದಿನಗಳಲ್ಲಿ ಕೊನೆಗೊಂಡಿವೆ. ಜನರು 4 ರಿಂದ 5 ದಿನಗಳವರೆಗೆ ಟೆಸ್ಟ್ ಪಂದ್ಯಗಳನ್ನು ವೀಕ್ಷಿಸಲು ಇಷ್ಟಪಡುತ್ತಾರೆ. ಆದರೆ, ಇದು ಬೇಗನೆ ಮುಕ್ತಾಯಗೊಳ್ಳುತ್ತದೆ. ಹೀಗಾಗಿ ಬಿಸಿಸಿಐ ಭಾರತದಲ್ಲಿ ಇದನ್ನು ನಿಲ್ಲಿಸಲು ಮುಂದಾಗಿದೆಯಂತೆ. ಪಿಂಕ್ ಬಾಲ್ ಟೆಸ್ಟ್ ಅನ್ನು ಕೊನೆಯ ಬಾರಿಗೆ ಆಸ್ಟ್ರೇಲಿಯಾದಲ್ಲಿ ಆಡಲಾಯಿತು, ನಂತರ ಯಾವುದೇ ದೇಶವು ಇದನ್ನು ಆಯೋಜಿಸಲಿಲ್ಲ.

ಟೀಮ್ ಇಂಡಿಯಾ ಇದುವರೆಗೆ 4 ಪಿಂಕ್ ಬಾಲ್ ಟೆಸ್ಟ್ ಆಡಿದ್ದು, 3ರಲ್ಲಿ ಗೆದ್ದಿದ್ದರೆ ಒಂದರಲ್ಲಿ ಸೋಲು ಕಂಡಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ಭಾರತ ಕೊನೆಯ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಆಡಿದ್ದು, ಅದು ಕೂಡ 3 ದಿನಗಳಲ್ಲಿ ಕೊನೆಗೊಂಡಿತು. ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಲ್ಲಿಯವರೆಗೆ 2021 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಒಂದೇ ಒಂದು ಪಿಂಕ್ ಬಾಲ್ ಟೆಸ್ಟ್ ಆಡಿದ್ದರು. ಕ್ವೀನ್ಸ್‌ಲ್ಯಾಂಡ್‌ನಲ್ಲಿ ನಡೆದ ಆ ಟೆಸ್ಟ್ ಡ್ರಾ ಆಗಿತ್ತು.

ಬಿಸಿಸಿಐ ಕಾರ್ಯದರ್ಶಿಯ ಈ ಹೇಳಿಕೆಯ ನಂತರ, ಟೀಮ್ ಇಂಡಿಯಾ ಗುಲಾಬಿ ಚೆಂಡಿನೊಂದಿಗೆ ಟೆಸ್ಟ್ ಪಂದ್ಯ ಆಡುವುದು ಅನುಮಾನ. ಭಾರತೀಯ ಪುರುಷರ ತಂಡವು ಪ್ರಸ್ತುತ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಅಲ್ಲಿ ಅದು ಡಿಸೆಂಬರ್ 26 ರಿಂದ 2-ಟೆಸ್ಟ್ ಸರಣಿಯನ್ನು ಆಡಬೇಕಾಗಿದೆ. ಈ ಎರಡೂ ಟೆಸ್ಟ್‌ಗಳನ್ನು ಕೆಂಪು ಚೆಂಡಿನೊಂದಿಗೆ ಆಡಲಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್