ಇದೆಂತಾ ಅನ್ಯಾಯ… ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..!

ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ಮೂವರು ಅಪ್ರತಿಮ ಮ್ಯಾಚ್ ವಿನ್ನರ್‌ಗಳಾದ ರಜತ್ ಪಾಟಿದಾರ್, ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ಅವರನ್ನು ಮುಂಬರುವ ಇಂಗ್ಲೆಂಡ್ ಹಾಗೂ ಐರ್ಲೆಂಡ್ ಪ್ರವಾಸದ ಟಿ20 ಸರಣಿಯಿಂದ ಕೈಬಿಡುವ ಮೂಲಕ ಬಿಸಿಸಿಐ ಬಿಗ್ ಶಾಕ್ ನೀಡಿದೆ!

ಇದೆಂತಾ ಅನ್ಯಾಯ... ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..!
Team India
Image Credit source: SK

Updated on: Jun 07, 2026 | 7:19 AM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮೂವರು ಸ್ಟಾರ್ ಆಟಗಾರರಿಗೆ ಬಿಸಿಸಿಐ (BCCI) ಬಿಗ್ ಶಾಕ್ ನೀಡಿದೆ. ಮುಂಬರುವ ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸದ ಟಿ20 ಸರಣಿಗಾಗಿ ಪ್ರಕಟಿಸಲಾದ ಭಾರತ ತಂಡದಲ್ಲಿ ರಜತ್ ಪಾಟಿದಾರ್, ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ಅವರಿಗೆ ಸ್ಥಾನ ನೀಡಲಾಗಿಲ್ಲ.

ರಜತ್ ಪಾಟಿದಾರ್‌: ಐಪಿಎಲ್ 2026 ರಲ್ಲಿ ಆರ್‌ಸಿಬಿ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿದ ರಜತ್ ಪಾಟಿದಾರ್ ಬ್ಯಾಟಿಂಗ್‌ನಲ್ಲೂ ಅಬ್ಬರಿಸಿದ್ದರು. ಈ ಸೀಸನ್‌ನಲ್ಲಿ ಆಡಿದ 15 ಪಂದ್ಯಗಳಲ್ಲಿ 41.75 ರ ಸರಾಸರಿಯಲ್ಲಿ 501 ರನ್ ಗಳಿಸಿ ಟಾಪ್ ಫಾರ್ಮ್‌ನಲ್ಲಿದ್ದರು. ಆದಾಗ್ಯೂ, ಭಾರತ ಟಿ20 ತಂಡದ ಮಧ್ಯಮ ಕ್ರಮಾಂಕದಲ್ಲಿ ಪಾಟಿದಾರ್​​ಗೆ ಚಾನ್ಸ್​ ನೀಡಲಾಗಿಲ್ಲ.

ಕೃನಾಲ್ ಪಾಂಡ್ಯ: ಆರ್‌ಸಿಬಿ ಮಧ್ಯಮ ಕ್ರಮಾಂಕ ಹಾಗೂ ಸ್ಪಿನ್ ವಿಭಾಗಕ್ಕೆ ಬಲ ತುಂಬಿದ್ದ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಕೂಡ ಆಯ್ಕೆದಾರರ ಗಮನ ಸೆಳೆಯುವಲ್ಲಿ ವಿಫಲರಾಗಿದ್ದಾರೆ. ಕೃನಾಲ್ ಕಳೆದ ಎರಡು ಸೀಸನ್​​ಗಳಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿ 29 ವಿಕೆಟ್ ಪಡೆದಿದ್ದರು. ಈ ವೇಳೆ ಕೇವಲ 8.42 ಸರಾಸರಿಯಲ್ಲಿ ಮಾತ್ರ ರನ್ ನೀಡಿದ್ದಾರೆ. ಇದರ ನಡುವೆ 335 ರನ್​ ಕೂಡ ಕಲೆಹಾಕಿದ್ದಾರೆ. ಇದಾಗ್ಯೂ ಸ್ಪಿನ್ ಆಲ್​ರೌಂಡರ್ ಆಗಿ ಕೃನಾಲ್ ಪಾಂಡ್ಯರನ್ನು ಪರಿಗಣಿಸದೇ ಇರುವುದು ಅಚ್ಚರಿಯೇ ಸರಿ.

ಭುವನೇಶ್ವರ್ ಕುಮಾರ್: ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಈ ಬಾರಿಯ ಐಪಿಎಲ್‌ನಲ್ಲಿ ಬರೋಬ್ಬರಿ ಬರೋಬ್ಬರಿ 28 ವಿಕೆಟ್ ಕಬಳಿಸಿದ್ದರು. ಅಷ್ಟೇ ಅಲ್ಲದೆ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ವೇಗಿ ಎನಿಸಿಕೊಂಡಿದ್ದರು. ಪವರ್‌ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿರುವ ಭುವಿ ಕೇವಲ 7.94 ಎಕಾನಮಿ ರೇಟ್​​ನಲ್ಲಿ ಮಾತ್ರ ರನ್ ನೀಡಿದ್ದರು. ಇದಾಗ್ಯೂ ಅನುಭವಿ ವೇಗಿಯನ್ನು ಆಯ್ಕೆದಾರರು ಕಡೆಗಣಿಸಿದ್ದಾರೆ.

  • ಇಲ್ಲಿ ಕೃನಾಲ್ ಪಾಂಡ್ಯರನ್ನು ಕಡೆಗಣಿಸಿ ಆಯ್ಕೆ ಮಾಡಿರುವುದು ವಾಷಿಂಗ್ಟನ್ ಸುಂದರ್ ಅವರನ್ನು ಎಂಬುದೇ ಅಚ್ಚರಿ.
  • ಭುವನೇಶ್ವರ್ ಕುಮಾರ್ ಬದಲಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿರುವುದು ಹರ್ಷಿತ್ ರಾಣಾ.
  • ರಜತ್ ಪಾಟಿದಾರ್ ಬದಲಿಗೆ ಔಟ್ ಆಫ್ ಫಾರ್ಮ್​ನಲ್ಲಿರುವ ಆಲ್​ರೌಂಡರ್​ ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ವೈಭವ್ ಸೂರ್ಯವಂಶಿ ಎಂಟ್ರಿ: ಟೀಮ್ ಇಂಡಿಯಾದ 3 ತಂಡಗಳು ಪ್ರಕಟ

ಒಟ್ಟಾರೆಯಾಗಿ ಹೇಳುವುದಾದರೆ, ಐಪಿಎಲ್ ಇತಿಹಾಸದಲ್ಲೇ ಸತತ ಎರಡು ಬಾರಿ ಟ್ರೋಫಿ ಗೆದ್ದು ಬೀಗಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಹೀರೊಗಳಿಗೆ ಬಿಸಿಸಿಐ ಕೊಟ್ಟ ಬಹುಮಾನ ಮಾತ್ರ ಶೂನ್ಯ! ಇದಕ್ಕೆ ಸಾಕ್ಷಿ ಈ ಮೂವರು ಮ್ಯಾಚ್​ ವಿನ್ನರ್​​ಗಳನ್ನು ನಿರ್ಲಕ್ಷಿಸಿರುವುದು.

 

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us