AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹಮ್ಮದ್ ಶಮಿ ಇನ್ಯಾವತ್ತೂ ಟೀಮ್ ಇಂಡಿಯಾಗೆ ಆಯ್ಕೆಯಾಗಲ್ಲ!

ಭಾರತೀಯ ಕ್ರಿಕೆಟ್ ತಂಡದಲ್ಲಿ ಯುವ ವೇಗಿಗಳ ಯುಗ ಆರಂಭವಾಗಿದೆಯೇ? ಹಿರಿಯ ವೇಗಿ ಮೊಹಮ್ಮದ್ ಶಮಿ ಅವರ ಅಂತರರಾಷ್ಟ್ರೀಯ ಕ್ರಿಕೆಟ್ ಭವಿಷ್ಯದ ಕುರಿತು ಮಾಜಿ ಆಟಗಾರ ದಿನೇಶ್ ಕಾರ್ತಿಕ್ ನೀಡಿರುವ ಹೇಳಿಕೆ ಈ ಪ್ರಶ್ನೆಯನ್ನು ಬಲವಾಗಿ ಮುನ್ನೆಲೆಗೆ ತಂದಿದೆ. ಹಾಗಾದರೆ ಶಮಿ ಅವರ ಭವಿಷ್ಯದ ಬಗ್ಗೆ 'ಡಿಕೆ' ಹೇಳಿದ್ದೇನು? ಅದರ ಸಂಪೂರ್ಣ ವಿವರ ಇಲ್ಲಿದೆ...

ಮೊಹಮ್ಮದ್ ಶಮಿ ಇನ್ಯಾವತ್ತೂ ಟೀಮ್ ಇಂಡಿಯಾಗೆ ಆಯ್ಕೆಯಾಗಲ್ಲ!
Mohammed Shami Image Credit source: ICC
ಝಾಹಿರ್ ಯೂಸುಫ್
|

Updated on: Oct 05, 2026 | 10:41 AM

Share

ಟೀಮ್ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್ ಶಮಿ ಮತ್ತೆ ರಾಷ್ಟ್ರೀಯ ತಂಡಕ್ಕೆ ಕಂಬ್ಯಾಕ್ ಮಾಡಲಿದ್ದಾರಾ? ಈ ಕುತೂಹಲಕಾರಿ ಪ್ರಶ್ನೆಗೆ ಭಾರತತ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಹಾಲಿ ಕ್ರಿಕೆಟ್ ವಿಶ್ಲೇಷಕ ದಿನೇಶ್ ಕಾರ್ತಿಕ್ ನೀಡಿದ ಉತ್ತರ ‘ಇಲ್ಲ’. ಶಮಿ ಏನೇ ಮಾಡಿದರೂ ಅವರು ಮತ್ತೆ ಭಾರತ ತಂಡಕ್ಕೆ ಆಯ್ಕೆಯಾಗಲ್ಲ ಎಂದು ಡಿಕೆ ಖಂಡತುಂಡವಾಗಿ ಹೇಳಿದ್ದದ್ದಾರೆ.

ಆಯ್ಕೆ ಮಾಡುವುದರಲ್ಲಿ ಅರ್ಥವಿಲ್ಲ!

ಕ್ರಿಕ್‌ಬಝ್ ವಾಹಿನಿಯ ಚರ್ಚೆಯಲ್ಲಿ ಮಾತನಾಡಿದ ದಿನೇಶ್ ಕಾರ್ತಿಕ್, ಮುಂಬರುವ 2027ರ ಏಕದಿನ ವಿಶ್ವಕಪ್ ದೃಷ್ಟಿಯಿಂದ ಶಮಿ ಅವರನ್ನು ಮರಳಿ ತಂಡಕ್ಕೆ ಸೇರಿಸಿಕೊಳ್ಳುವುದು ಸರಿಯಾದ ನಿರ್ಧಾರವಲ್ಲ ಎಂದಿದ್ದಾರೆ. ಭಾರತ ತಂಡದಲ್ಲಿ ಸದ್ಯ ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ಅವರಂತಹ ಅತ್ಯುತ್ತಮ ಯುವ ವೇಗಿಗಳಿದ್ದಾರೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ಹೀಗಾಗಿ ಮೊಹಮ್ಮದ್ ಶಮಿ ಅವರನ್ನು ಭಾರತ ತಂಡಕ್ಕೆ ಮತ್ತೆ ಆಯ್ಕೆ ಮಾಡುವುದರಲ್ಲಿ ಅರ್ಥವಿಲ್ಲ. ಭಾರತೀಯ ಕ್ರಿಕೆಟ್ ಈಗಾಗಲೇ ಅವರಿಗಿಂತ ಮುಂದೆ ಸಾಗಿದೆ ಎಂದು ಕಾರ್ತಿಕ್ ನೇರವಾಗಿ ಹೇಳಿದ್ದಾರೆ.

ದೇಶಿ ಕ್ರಿಕೆಟ್‌ನಲ್ಲಿ ಶಮಿ ಅಮೋಘ ಪ್ರದರ್ಶನ:

35 ವರ್ಷದ ಮೊಹಮ್ಮದ್ ಶಮಿ ಇತ್ತೀಚೆಗೆ ದೇಶಿ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅವರು ಸಿಲಿಗುರಿ ಸ್ಟ್ರೈಕರ್ಸ್ ಪರ ಬೆಂಗಾಲ್ ಪ್ರೊ ಟಿ20 ಲೀಗ್ ಹಾಗೂ ಈಸ್ಟ್ ಝೋನ್ ಪರವಾಗಿ ದುಲೀಪ್ ಟ್ರೋಫಿ ಪಂದ್ಯಾವಳಿಗಳಲ್ಲಿ ವಿಕೆಟ್ ಬೇಟೆಯಾಡಿದ್ದಾರೆ. ಆದರೆ, ಕಾರ್ತಿಕ್ ಪ್ರಕಾರ, ಶಮಿ ಎಷ್ಟೇ ಚೆನ್ನಾಗಿ ಬೌಲಿಂಗ್ ಮಾಡಿದರೂ ಪ್ರಯೋಜನವಿಲ್ಲ. ಏಕೆಂದರೆ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಈಗಾಗಲೇ ಯುವ ಪೀಳಿಗೆಯತ್ತ ಮುಖ ಮಾಡಿದೆ. ಹೀಗಾಗಿ ಅವರನ್ನು ಮತ್ತೆ ಆಯ್ಕೆ ಮಾಡಲ್ಲ ಎಂದಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ನಂತರ ದೂರ:

ಮೊಹಮ್ಮದ್ ಶಮಿ ಅವರು 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದ ನಂತರ ಭಾರತ ತಂಡದ ಜೆರ್ಸಿಯಲ್ಲಿ ಕಾಣಿಸಿಕೊಂಡಿಲ್ಲ. ಗಾಯದ ಸಮಸ್ಯೆಗಳು ಮತ್ತು ಫಿಟ್​ನೆಸ್​ ಕೊರತೆಯಿಂದಾಗಿ ಬಿಸಿಸಿಐ ಆಯ್ಕೆ ಸಮಿತಿಯು ಹರ್ಷಿತ್ ರಾಣಾ ಮತ್ತು ಗುರ್ನೂರ್ ಬ್ರಾರ್ ಅವರಂತಹ ಹೊಸ ವೇಗಿಗಳಿಗೆ ಮಣೆ ಹಾಕುತ್ತಿದೆ. ಹೀಗಾಗಿಯೇ ಈ ವರ್ಷ ನಡೆದ ಯಾವುದೇ ಏಕದಿನ ಸರಣಿಗೂ ಶಮಿಯನ್ನು ಆಯ್ಕೆ ಮಾಡಿರಲಿಲ್ಲ.

ಆಯ್ಕೆಗಾರರ ಬದಲಾವಣೆಯೂ ನೆರವಾಗದು!

ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥರಾದ ಅಜಿತ್ ಅಗರ್ಕರ್ ಅವರು ತಮ್ಮ ಹುದ್ದೆಯಿಂದ ನಿರ್ಗಮಿಸಿದರೂ ಸಹ ಶಮಿ ಅವರ ಕಂಬ್ಯಾಕ್ ಸಾಧ್ಯತೆ ತುಂಬಾ ವಿರಳ. ಟೀಮ್ ಇಂಡಿಯಾ ಸಂಪೂರ್ಣವಾಗಿ ಯುವ ವೇಗಿಗಳ ಬೆಂಬಲಕ್ಕೆ ನಿಂತಿರುವುದರಿಂದ ಶಮಿ ಅವರ ಅಂತರರಾಷ್ಟ್ರೀಯ ಕ್ರಿಕೆಟ್ ಭವಿಷ್ಯದ ಹಾದಿ ಮತ್ತಷ್ಟು ಕಠಿಣವಾಗಿದೆ. ನನ್ನ ಪ್ರಕಾರ ಮೊಹಮ್ಮದ್ ಶಮಿಗೆ ಮತ್ತೆ ಅವಕಾಶ ಸಿಗುವುದಿಲ್ಲ ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

ಇದನ್ನೂ ಓದಿ: ಏಕದಿನ ವಿಶ್ವಕಪ್​ನ ಸೂಪರ್ ಸೆವೆನ್​​ನ 7 ತಂಡಗಳ ಪಟ್ಟಿ ಪ್ರಕಟ

ಒಟ್ಟಾರೆಯಾಗಿ ಹೇಳುವುದಾದರೆ, ಮೊಹಮ್ಮದ್ ಶಮಿ ಭಾರತೀಯ ಕ್ರಿಕೆಟ್‌ಗೆ ನೀಡಿರುವ ಕೊಡುಗೆ ಅನನ್ಯ ಮತ್ತು ಅಪ್ರತಿಮ. ಆದರೆ ದಿನೇಶ್ ಕಾರ್ತಿಕ್ ಅವರ ಈ ನೇರ ಮಾತುಗಳು ಆಧುನಿಕ ಕ್ರಿಕೆಟ್‌ನ ಕಹಿ ವಾಸ್ತವವನ್ನು ಬಿಂಬಿಸುತ್ತವೆ. ಮುಂಬರುವ 2027ರ ವಿಶ್ವಕಪ್‌ಗೆ ಬಲಿಷ್ಠ ಯುವ ಪಡೆಯನ್ನು ಸಜ್ಜುಗೊಳಿಸುವ ಬಿಸಿಸಿಐನ ದೂರದೃಷ್ಟಿಯ ಯೋಜನೆಗೆ ಶಮಿ ಅವರ ವಯಸ್ಸು ಮತ್ತು ಗಾಯದ ಸಮಸ್ಯೆಗಳು ಅಡ್ಡಿಯಾಗಿವೆ ಎಂಬುದು ಸ್ಪಷ್ಟ.

ದೇಶಿ ಕ್ರಿಕೆಟ್‌ನಲ್ಲಿ ಶಮಿ ಎಷ್ಟೇ ಅದ್ಭುತವಾಗಿ ಬೌಲಿಂಗ್ ಮಾಡಿದರೂ, ಟೀಮ್ ಇಂಡಿಯಾ ಈಗಾಗಲೇ ‘ಮುಂದಿನ ಪೀಳಿಗೆ’ಯತ್ತ ಮುಖ ಮಾಡಿರುವುದರಿಂದ ಅವರ ಕಂಬ್ಯಾಕ್ ಹಾದಿ ಬಹುತೇಕ ಮುಚ್ಚಿದಂತಾಗಿದೆ. ಭಾರತದ ಶ್ರೇಷ್ಠ ವೇಗಿಗಳಲ್ಲಿ ಒಬ್ಬರಾದ ಶಮಿ ಅವರ ಅಂತರರಾಷ್ಟ್ರೀಯ ವೃತ್ತಿಜೀವನ ಹೀಗೆ ಮೌನವಾಗಿ ಕೊನೆಗೊಳ್ಳಲಿದೆಯೇ ಅಥವಾ ಅವರು ಈ ಎಲ್ಲಾ ವಿಶ್ಲೇಷಣೆಗಳನ್ನು ಸುಳ್ಳು ಮಾಡಿ ಮತ್ತೆ ನೀಲಿ ಜೆರ್ಸಿಯಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದನ್ನು ಕಾಲವೇ ಉತ್ತರಿಸಬೇಕಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು