ಐಪಿಎಲ್ 2022 ರಲ್ಲಿ ಅನೇಕ ವಿಕೆಟ್-ಕೀಪರ್ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಮುಂಬರುವ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಇದೀಗ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಯಾರಾಗಲಿದ್ದಾರೆ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಈ ಪಟ್ಟಿಯಲ್ಲಿ ವಿಕೆಟ್ ಕೀಪರ್ ಆಗಿ ರಿಷಬ್ ಪಂತ್ ಟೀಮ್ ಇಂಡಿಯಾದ ಮೊದಲ ಆಯ್ಕೆಯಾಗಲಿದ್ದಾರೆ. ಇವರಲ್ಲದೆ, ದಿನೇಶ್ ಕಾರ್ತಿಕ್, ವೃದ್ಧಿಮಾನ್ ಸಹಾ, ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ಕೂಡ ತಮ್ಮ ಬ್ಯಾಟಿಂಗ್‌ನಿಂದ ಆಯ್ಕೆಗಾರರ ಗಮನ ಸೆಳೆದಿದ್ದಾರೆ. ಆದರೆ ಇವರಲ್ಲಿ ಯಾರನ್ನು ಬ್ಯಾಕ್ ಅಪ್ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆ. ಇದರ ನಡುವೆ ಟೀಮ್ ಇಂಡಿಯಾದ ಮಾಜಿ ಸ್ಪೋಟಕ ಆರಂಭಿಕ ಆಟಗಾರ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ವಿಕೆಟ್ ಕೀಪರ್ರೊಬ್ಬರ ಹೆಸರನ್ನು ಮುಂದಿಟ್ಟಿದ್ದಾರೆ. ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡುತ್ತಿರುವ ಜಿತೇಶ್ ಶರ್ಮಾ ಅವರನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡುವಂತೆ ಸೆಹ್ವಾಗ್ ಸೂಚಿಸಿದ್ದಾರೆ.
“ನಿಸ್ಸಂದೇಹವಾಗಿ ಜಿತೇಶ್ ಶರ್ಮಾ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಇಶಾನ್ ಕಿಶನ್, ರಿಷಬ್ ಪಂತ್ ಮತ್ತು ವೃದ್ಧಿಮಾನ್ ಸಾಹಾ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳು. ಆದರೆ ಜಿತೇಶ್ ನನ್ನನ್ನು ತುಂಬಾ ಪ್ರಭಾವಿತಗೊಳಿಸಿದರು. ನಿರ್ಭೀತಿಯಿಂದ ಬ್ಯಾಟಿಂಗ್ ಮಾಡುವುದು ಅವರ ಶೈಲಿ. ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಜಿತೇಶ್ ಶರ್ಮಾ ಅವರನ್ನು ಬ್ಯಾಕ್-ಅಪ್ ವಿಕೆಟ್‌ಕೀಪರ್ ಆಗಿ ಆಯ್ಕೆ ಮಾಡಿಕೊಳ್ಳಬೇಕು” ಎಂದು ಸೆಹ್ವಾಗ್ ಹೇಳಿದ್ದಾರೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಪಂದ್ಯದಲ್ಲಿ ಜಿತೇಶ್ ಶರ್ಮಾ 18 ಎಸೆತಗಳಲ್ಲಿ 38 ರನ್ ಗಳಿಸಿದ್ದರು. ಈ ಸಮಯದಲ್ಲಿ, ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಬಾರಿಸಿದ್ದರು. ಜಿತೇಶ್ ಶರ್ಮಾರ ಅಬ್ಬರ ನೋಡಿ ಸೆಹ್ವಾಗ್ ಮಂತ್ರಮುಗ್ಧರಾಗಿದ್ದಾರೆ. ಈ ಬಗ್ಗೆ ಮಾತನಾಡಿದ ವೀರು, “ಜಿತೇಶ್ ಅವರ ಒಂದು ಸ್ಟ್ರೋಕ್ ನನಗೆ ವಿವಿಎಸ್ ಲಕ್ಷ್ಮಣ್ ಅವರ ಹೊಡೆತವನ್ನು ನೆನಪಿಸಿತು. ಶೇನ್ ವಾರ್ನ್ ವಿರುದ್ಧ ಲಕ್ಷ್ಮಣ್ ಇಂತಹ ಹೊಡೆತವನ್ನು ಆಡುತ್ತಿದ್ದರು. ಅಲ್ಲದೆ ಆತನಲ್ಲಿರುವ ಆಕ್ರಮಣ ಬ್ಯಾಟಿಂಗ್ ಶೈಲಿಯು ಉತ್ತಮವಾಗಿದೆ. ಹೀಗಾಗಿ ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾ ಬ್ಯಾಕ್ ಅಪ್ ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾರನ್ನು ಆಯ್ಕೆ ಮಾಡಬೇಕೆಂದು ವೀರೇಂದ್ರ ಸೆಹ್ವಾಗ್ ತಿಳಿಸಿದ್ದಾರೆ.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.