ರೋಹಿತ್ ಶರ್ಮಾ ಬೇಡ, ಟಿ20 ವಿಶ್ವಕಪ್ಗೆ ಇವರಿಬ್ಬರು ಆರಂಭಿಕರಾಗಲಿ ಎಂದ ಮಾಜಿ ಕ್ರಿಕೆಟಿಗ
Team India: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ.
ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ (Team India) ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದೇ ದೊಡ್ಡ ಪ್ರಶ್ನೆ. ಏಕೆಂದರೆ ತಂಡದಲ್ಲಿ ಅತ್ಯುತ್ತಮ ಆಟಗಾರರ ದಂಡೇ ಇದೆ. ಹೀಗಾಗಿ ಯಾರನ್ನು ಕೈ ಬಿಟ್ಟು ಯಾರನ್ನು ಆಯ್ಕೆ ಮಾಡುವುದು ಎಂಬ ಸವಾಲು ಟೀಮ್ ಇಂಡಿಯಾ ಕೋಚ್ ಹಾಗೂ ನಾಯಕನ ಮುಂದಿದೆ. ಇದರ ನಡುವೆ ಟೀಮ್ ಇಂಡಿಯಾ ಮಾಜಿ ಆಟಗಾರ ವಾಸಿಂ ಜಾಫರ್ ಹೆಸರಿಸಿರುವ ಟೀಮ್ ಇಂಡಿಯಾ ಟಾಪ್ 5 ಆಟಗಾರರ ಪಟ್ಟಿ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಪ್ಲೇಯಿಂಗ್ ಇಲೆವೆನ್ನ ಅಗ್ರ ಐದು ಆಟಗಾರರು ಎಲ್ಲರ ಗಮನ ಸೆಳೆಯಲು ಮುಖ್ಯ ಕಾರಣ ತಂಡದ ಆರಂಭಿಕರ ಬದಲಾವಣೆ.
ಅಂದರೆ ವಾಸಿಂ ಜಾಫರ್ ಹೆಸರಿಸಿರುವ ಟೀಮ್ ಇಂಡಿಯಾ ಆರಂಭಿಕರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಹೆಸರಿಲ್ಲ. ಬದಲಾಗಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಅವರಿದ್ದಾರೆ. ಅಂದರೆ ಟಿ20 ವಿಶ್ವಕಪ್ನಲ್ಲಿ ಪಂತ್ ಹಾಗೂ ಕೆಎಲ್ ರಾಹುಲ್ ಆರಂಭಿಕರಾಗಿ ಆಡುವುದು ಸೂಕ್ತ ಎಂದಿದ್ದಾರೆ ವಾಸಿಂ ಜಾಫರ್.
ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಿದ್ದಾರೆ. ಆದರೆ ನಾಲ್ಕನೇ ಕ್ರಮಾಂಕದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಡುವುದು ಉತ್ತಮ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಜಾಫರ್. ಏಕೆಂದರೆ 2013 ರ ಚಾಂಪಿಯನ್ ಟ್ರೋಫಿಗಿಂತ ಮುಂಚಿತವಾಗಿ ಮಹೇಂದ್ರ ಸಿಂಗ್ ಧೋನಿ ರೋಹಿತ್ ಶರ್ಮಾ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದರು. ಆ ಬಳಿಕ ನಡೆದಿದ್ದೆಲ್ಲವೂ ಇತಿಹಾಸ.
ಇದೀಗ ನಾಯಕನಾಗಿ ರೋಹಿತ್ ಶರ್ಮಾ ರಿಷಭ್ ಪಂತ್ ವಿಷಯದಲ್ಲಿ ಅಂತಹದೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಬೇಕಿದೆ. ಈ ಮೂಲಕ ಹೊಸ ಆರಂಭಿಕರನ್ನು ಸಿದ್ಧಗೊಳಿಸಬೇಕೆಂದು ವಾಸಿಂ ಜಾಫರ್ ಅಭಿಪ್ರಾಯಪಟ್ಟಿದ್ದಾರೆ. ಇನ್ನು ಟಿ20 ವಿಶ್ವಕಪ್ಗಾಗಿ ಟಾಪ್-5 ಕ್ರಮಾಂಕಗಳ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್ ಅವರನ್ನು ಆರಂಭಿಕರಾಗಿ ಆಯ್ಕೆ ಮಾಡಿರುವ ಜಾಫರ್, 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿಯನ್ನೇ ಇರಿಸಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ರೋಹಿತ್ ಶರ್ಮಾ ಆಡುವುದು ಸೂಕ್ತ ಎಂದಿದ್ದಾರೆ. ಅದೇ ರೀತಿ ಸೂರ್ಯಕುಮಾರ್ 5ನೇ ಕ್ರಮಾಂಕದಲ್ಲಿ ಬ್ಯಾಟ್ಸ್ ಬೀಸಿದರೆ ಉತ್ತಮ ಎಂಬ ಅಭಿಪ್ರಾಯ ಮುಂದಿಟ್ಟಿದ್ದಾರೆ.
ಒಟ್ಟಿನಲ್ಲಿ ವಾಸಿಂ ಜಾಫರ್ ಅವರ ಸಲಹೆಯೊಂದಿಗೆ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾದ ಆರಂಭಿಕರು ಯಾರಾಗುತ್ತಾರೆ ಎಂಬ ಚರ್ಚೆಗಳು ಶುರುವಾಗಿದೆ. ಕೆಲವರು ವಾಸಿಂ ಜಾಫರ್ ಅತ್ಯುತ್ತಮ ಸಲಹೆ ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಎಡಗೈ-ಬಲಗೈ ಬ್ಯಾಟ್ಸ್ಮನ್ಗಳು ಆರಂಭಿಕರಾಗಿ ಕಣಕ್ಕಿಳಿದರೆ ಹೆಚ್ಚು ಯಶಸ್ಸು ಸಾಧಿಸುತ್ತಾರೆ. ಇದಕ್ಕೆ ಸಾಕ್ಷಿಯಾಗಿ ಸಚಿನ್ ತೆಂಡೂಲ್ಕರ್-ಸೌರವ್ ಗಂಗೂಲಿ, ಸೆಹ್ವಾಗ್-ಗಂಭೀರ್, ರೋಹಿತ್ ಶರ್ಮಾ-ಶಿಖರ್ ಧವನ್ ಅವರ ಅಂಕಿ ಅಂಶಗಳು ಕಣ್ಮುಂದೆ ಇದೆ.
ಹೀಗಾಗಿ ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್ ಆರಂಭಿಕರಾಗಿ ಉತ್ತಮ ಆಯ್ಕೆ ಎಂದು ಕೆಲವರು ಜಾಫರ್ ಅಭಿಪ್ರಾಯವನ್ನು ಬೆಂಬಲಿಸಿದ್ದಾರೆ. ಇನ್ನು ಕೆಲವರು ಟಿ20 ವಿಶ್ವಕಪ್ಗೂ ಮುನ್ನ ನಡೆಯಲಿರುವ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಗಳಲ್ಲಿ ಇಂತಹದೊಂದು ಪ್ರಯೋಗ ನಡೆಸುವುದು ಸೂಕ್ತ ಎಂದಿದ್ದಾರೆ.
ಟಿ20 ವಿಶ್ವಕಪ್ಗೆ ಟೀಮ್ ಇಂಡಿಯಾ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಮೀಸಲು ಆಟಗಾರರು: ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಶ್ರೇಯಸ್ ಅಯ್ಯರ್, ದೀಪಕ್ ಚಹರ್