Virat Kohli: ಇದು ಆರಂಭವಷ್ಟೇ…ಎದುರಾಳಿಗಳಿಗೆ ವಿರಾಟ್ ಕೊಹ್ಲಿ ಎಚ್ಚರಿಕೆ
T20 World Cup 2021: ಇನ್ನು 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ದ ಆಡಲಿದ್ದು, ಭಾರತ ಹಾಗೂ ನ್ಯೂಜಿಲೆಂಡ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಬಳಿಕ ಮತ್ತೊಮ್ಮೆ ಮುಖಾಮುಖಿಯಾಗುತ್ತಿದೆ.

T20 World Cup 2021: ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ತಂಡದ ಗೆಲುವಿನ ನಾಗಾಲೋಟಕ್ಕೆ ಭಾನುವಾರ ತೆರೆಬಿದ್ದಿದೆ. ಟಿ20 ವಿಶ್ವಕಪ್‌ನ ಸೂಪರ್-12 ಹಂತದ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಪಾಕಿಸ್ತಾನ (India vs Pakistan) 10 ವಿಕೆಟ್‌ಗಳಿಂದ ಸೋಲಿಸಿ ಭರ್ಜರಿಯಾಗಿ ವಿಶ್ವಕಪ್ ಅಭಿಮಾನ ಆರಂಭಿಸಿದೆ. ಇತ್ತ ಮೊದಲ ಸೋಲಿನ ನಡುವೆಯೂ ಟೀಮ್ ಇಂಡಿಯಾ (Team India) ನಾಯಕ ವಿರಾಟ್ ಕೊಹ್ಲಿ (Virat Kohli) ಕಂಬ್ಯಾಕ್ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಂದ್ಯದ ಬಳಿಕ ಮಾತನಾಡಿದ ಕೊಹ್ಲಿ, ಇದು ಆರಂಭಿಕ ಪಂದ್ಯವಷ್ಟೇ. ಇನ್ನು ಪಂದ್ಯಗಳು ಬಾಕಿಯಿವೆ. ಮೊದಲ ಪಂದ್ಯದ ಸೋಲಿನೊಂದಿಗೆ ಟೀಮ್ ಇಂಡಿಯಾ ವಿಶ್ವಕಪ್ ಅಭಿಮಾನ ಕೊನೆಗೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಮುಂದಿನ ಪಂದ್ಯದ ಮೂಲಕ ಭರ್ಜರಿಯಾಗಿ ಕಂಬ್ಯಾಕ್ ಮಾಡಲಿದೆ ಎಂದು ವಿರಾಟ್ ಕೊಹ್ಲಿ ಪರೋಕ್ಷವಾಗಿ ಹೇಳಿದ್ದಾರೆ.
ಇನ್ನು 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ದ ಆಡಲಿದ್ದು, ಭಾರತ ಹಾಗೂ ನ್ಯೂಜಿಲೆಂಡ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಬಳಿಕ ಮತ್ತೊಮ್ಮೆ ಮುಖಾಮುಖಿಯಾಗುತ್ತಿದೆ. ಇದೇ ಕಾರಣದಿಂದ ಟೀಮ್ ಇಂಡಿಯಾ ಪಾಲಿಗೆ ಈ ಪಂದ್ಯ ಕೂಡ ಮಹತ್ವದ್ದಾಗಿದೆ. ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಗೆಲ್ಲುವ ಫೇವರೇಟ್ ತಂಡ ಎನಿಸಿಕೊಂಡಿದ್ದ ಭಾರತಕ್ಕೆ ನ್ಯೂಜಿಲೆಂಡ್ ಸೋಲುಣಿಸಿ ಚಾಂಪಿಯನ್ ಕಿರೀಟ ತನ್ನದಾಗಿಸಿಕೊಂಡಿತು. ಅಷ್ಟೇ ಅಲ್ಲದೆ 2019 ರ ಏಕದಿನ ವಿಶ್ವಕಪ್‌ನಲ್ಲಿ ಭಾರತವನ್ನು ಸೆಮಿಫೈನಲ್ನಲ್ಲಿ ಸೋಲಿಸಿ ನ್ಯೂಜಿಲೆಂಡ್ ಫೈನಲ್ ಪ್ರವೇಶಿಸಿತ್ತು.
ಐಸಿಸಿಯ ಟೂರ್ನಿಯ ಈ ಎರಡು ಮಹತ್ವದ ಪಂದ್ಯಗಳಲ್ಲಿ ಭಾರತಕ್ಕೆ ಸೋಲುಣಿಸಿದ್ದ ಕೇನ್ ವಿಲಿಯಮ್ಸನ್ ಪಡೆ ಇದೀಗ ಮತ್ತೊಮ್ಮೆ ವಿರಾಟ್ ಕೊಹ್ಲಿ ಬಳಗವನ್ನು ಎದುರುಗೊಳ್ಳುತ್ತಿದೆ. ಹೀಗಾಗಿ ಈ ಪಂದ್ಯದಲ್ಲಿ ಕಿವೀಸ್ ಪಡೆಗೆ ಸೋಲುಣಿಸಿ ಹಳೆಯ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.
ಇದನ್ನೂ ಓದಿ: ಪಂದ್ಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮಂಡಿಯೂರಿದ್ದು ಯಾಕೆ ಗೊತ್ತಾ?
ಇದನ್ನೂ ಓದಿ: Virat Kohli: ಸೋತರೂ ಟಿ20 ವಿಶ್ವಕಪ್‌ನಲ್ಲಿ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
ಇದನ್ನೂ ಓದಿ: T20 World Cup 2021: ಟಿ20 ರ್ಯಾಂಕಿಂಗ್ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?
(Not The End Of T20 World Cup For India Says Virat Kohli)
Published On - 8:47 pm, Mon, 25 October 21
