Tom Latham: ಸಚಿನ್ ಅವರ 24 ವರ್ಷಗಳ ಹಳೆಯ ದಾಖಲೆ ಮುರಿದ ನ್ಯೂಜಿಲೆಂಡ್ ಕ್ರಿಕೆಟಿಗ

Sachin Tendulkar: ಏಕದಿನ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್ ಬಾರಿಸಿದ ದಾಖಲೆ ಇದೀಗ ಟಾಮ್ ಲ್ಯಾಥಮ್ ಪಾಲಾಗಿದೆ. 140 ರನ್​ ಬಾರಿಸುವ ಮೂಲಕ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದರು.

Tom Latham: ಸಚಿನ್ ಅವರ 24 ವರ್ಷಗಳ ಹಳೆಯ ದಾಖಲೆ ಮುರಿದ ನ್ಯೂಜಿಲೆಂಡ್ ಕ್ರಿಕೆಟಿಗ
Tom Latham-Sachin Tendulkar
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 03, 2022 | 4:22 PM

ನ್ಯೂಜಿಲೆಂಡ್ ಮತ್ತು ನೆದರ್ಲೆಂಡ್ಸ್ ನಡುವಿನ ಮೂರು ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಕಿವೀಸ್ ಬ್ಯಾಟ್ಸ್‌ಮನ್ ಟಾಮ್ ಲ್ಯಾಥಮ್ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ದಾಖಲೆ ಬರೆದಿದ್ದಾರೆ. ಅಷ್ಟೇ ಅಲ್ಲದೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ 24 ವರ್ಷಗಳ ಹಳೆಯ ದಾಖಲೆಯನ್ನು ಲ್ಯಾಥಮ್ ಮುರಿದಿರುವುದು ವಿಶೇಷ . ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 9 ವಿಕೆಟ್‌ಗೆ 264 ರನ್ ಗಳಿಸಿತು. ಕಿವೀಸ್ ಪರ ಟಾಮ್ ಲ್ಯಾಥಮ್ 123 ಎಸೆತಗಳಲ್ಲಿ 140 ರನ್ ಗಳಿಸಿದರು. ಈ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಮತ್ತು 5 ಸಿಕ್ಸರ್‌ಗಳನ್ನು ಬಾರಿಸಿದ್ದರು. ಈ ಭರ್ಜರಿ ಇನಿಂಗ್ಸ್ ಪರಿಣಾಮ ನೆದರ್ಲೆಂಡ್ ತಂಡವು 118 ರನ್​ಗಳಿಂದ ಸೋಲನುಭವಿಸಬೇಕಾಯಿತು.

ಸಚಿನ್ ದಾಖಲೆ ಮುರಿದ ಲ್ಯಾಥಮ್: ಜನ್ಮದಿನದಂದು ಏಕದಿನ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್ ಬಾರಿಸಿದ ದಾಖಲೆ ಇದೀಗ ಟಾಮ್ ಲ್ಯಾಥಮ್ ಪಾಲಾಗಿದೆ. 140 ರನ್​ ಬಾರಿಸುವ ಮೂಲಕ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದರು. ಸಚಿನ್ 24 ವರ್ಷಗಳ ಹಿಂದೆ 1998 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಶಾರ್ಜಾದಲ್ಲಿ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ 134 ರನ್ ಗಳಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ 140 ರನ್​ ಬಾರಿಸಿ ಲ್ಯಾಥಮ್ ಬರ್ತ್​ ಡೇ ಸ್ಪಷೆಲ್ ದಾಖಲೆ ಬರೆದಿದ್ದಾರೆ.

ಟಾಮ್ ಲ್ಯಾಥಮ್ ಮತ್ತು ಸಚಿನ್ ತೆಂಡೂಲ್ಕರ್ ಹೊರತುಪಡಿಸಿ, ರಾಸ್ ಟೇಲರ್ ಅವರು ಕೂಡ ಜನ್ಮದಿನದಂದು ಭರ್ಜರಿ ಇನ್ನಿಂಗ್ಸ್ ಆಡಿದ್ದಾರೆ . ಟೇಲರ್​ 2011ರ ಹುಟ್ಟುಹಬ್ಬದಂದು 131 ರನ್ ಗಳಿಸಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಮಾಜಿ ಬ್ಯಾಟ್ಸ್‌ಮನ್ ಸನತ್ ಜಯಸೂರ್ಯ ಅವರು 2008 ರಲ್ಲಿ ತಮ್ಮ ಜನ್ಮದಿನದಂದು 130 ರನ್ ಗಳಿಸಿ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಕೂಡ ತಮ್ಮ ಹುಟ್ಟುಹಬ್ಬದಂದು ಶತಕ ಸಿಡಿಸಿದ್ದಾರೆ. ಅವರು 1993 ರಲ್ಲಿ ತಮ್ಮ ಜನ್ಮದಿನದಂದು 100 ರನ್ ಗಳಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್