ಬಲಿಷ್ಠ ನ್ಯೂಜಿಲೆಂಡ್​ಗೆ ಅಫ್ಘಾನಿಸ್ತಾನ ಎದುರಾಳಿ; ಮತ್ತೊಂದು ಶಾಕ್ ನೀಡಲು ಶಾಹಿದಿ ಪಡೆ ರೆಡಿ

|

Updated on: Oct 18, 2023 | 8:36 AM

NZ vs AFG, World Cup 2023: ಏಕದಿನ ವಿಶ್ವಕಪ್​ನ 16 ನೇ ಪಂದ್ಯದಲ್ಲಿ ಇಂದು ಬಲಿಷ್ಠ ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್​ನಲ್ಲಿ ಉಭಯ ತಂಡಗಳಿಗೂ ಇದು ನಾಲ್ಕನೇ ಪಂದ್ಯವಾಗಿದೆ. ಇದರಲ್ಲಿ ನ್ಯೂಜಿಲೆಂಡ್ ಆಡಿದ ಮೂರೂ ಪಂದ್ಯಗಳನ್ನು ಗೆದ್ದಿದ್ದರೆ, ಅಫ್ಘಾನಿಸ್ತಾನ ತನ್ನ ಕೊನೆಯ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ತನ್ನ ಮೊದಲ ಗೆಲುವು ಸಾಧಿಸಿತು.

ಬಲಿಷ್ಠ ನ್ಯೂಜಿಲೆಂಡ್​ಗೆ ಅಫ್ಘಾನಿಸ್ತಾನ ಎದುರಾಳಿ; ಮತ್ತೊಂದು ಶಾಕ್ ನೀಡಲು ಶಾಹಿದಿ ಪಡೆ ರೆಡಿ
ನ್ಯೂಜಿಲೆಂಡ್- ಅಫ್ಘಾನಿಸ್ತಾನ
Follow us on

ಏಕದಿನ ವಿಶ್ವಕಪ್​ನ (ICC World cup 2023) 16 ನೇ ಪಂದ್ಯದಲ್ಲಿ ಇಂದು ಬಲಿಷ್ಠ ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ (New Zealand vs Afghanistan) ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್​ನಲ್ಲಿ ಉಭಯ ತಂಡಗಳಿಗೂ ಇದು ನಾಲ್ಕನೇ ಪಂದ್ಯವಾಗಿದೆ. ಇದರಲ್ಲಿ ನ್ಯೂಜಿಲೆಂಡ್ ಆಡಿದ ಮೂರೂ ಪಂದ್ಯಗಳನ್ನು ಗೆದ್ದಿದ್ದರೆ, ಅಫ್ಘಾನಿಸ್ತಾನ ತನ್ನ ಕೊನೆಯ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ತನ್ನ ಮೊದಲ ಗೆಲುವು ಸಾಧಿಸಿತು. ಇದೀಗ ಈ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಅಫ್ಘಾನಿಸ್ತಾನ ಎರಡನೇ ಗೆಲುವು ಸಾಧಿಸಲಿದೆಯೇ ಎಂಬ ಕುತೂಹಲ ಮೂಡಿದೆ. ಚೆನ್ನೈನಲ್ಲಿ ಎರಡು ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿವೆ.

ಉತ್ತಮ ಫಾರ್ಮ್‌ನಲ್ಲಿರುವ ನ್ಯೂಜಿಲೆಂಡ್ ತಂಡ ವಿಶ್ವಕಪ್‌ನಲ್ಲಿ ಸತತ ಮೂರು ಪಂದ್ಯಗಳನ್ನು ಗೆದ್ದು ಇಂಗ್ಲೆಂಡ್, ನೆದರ್‌ಲ್ಯಾಂಡ್ ಮತ್ತು ಬಾಂಗ್ಲಾದೇಶವನ್ನು ಸೋಲಿಸಿದೆ. ಬಾಂಗ್ಲಾದೇಶ ಮತ್ತು ಭಾರತದ ವಿರುದ್ಧದ ಮೊದಲ ಎರಡು ಪಂದ್ಯಗಳಲ್ಲಿ ಸೋತ ನಂತರ, ಅಫ್ಘಾನಿಸ್ತಾನವು ತನ್ನ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಆತ್ಮ ವಿಶ್ವಾಸದಿಂದ ಬೀಗುತ್ತಿದೆ.

ಮುಜುಗರದ ಸೋಲಿನಿಂದ ಹೊರಬಂದು ಯುಎಇ ವಿರುದ್ಧ ಟಿ20 ಸರಣಿ ಗೆದ್ದ ನ್ಯೂಜಿಲೆಂಡ್

ವಿಲಿಯಮ್ಸನ್ ಆಡುವುದು ಅನುಮಾನ

ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮತ್ತೊಮ್ಮೆ ಗಾಯಗೊಂಡಿದ್ದು, ಈ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಿವೀಸ್ ತಂಡದ ಕಮಾಂಡ್ ಟಾಮ್ ಲಾಥಮ್ ಕೈಯಲ್ಲಿರಲಿದ್ದು, ಅಫ್ಘಾನಿಸ್ತಾನವನ್ನು ಎಂದಿನಂತೆ ಹಶ್ಮತುಲ್ಲಾ ಶಾಹಿದಿ ಮುನ್ನಡೆಸಲಿದ್ದಾರೆ.

ಮುಖಾಮುಖಿ ವರದಿ

ಏಕದಿನ ವಿಶ್ವಕಪ್​ನಲ್ಲಿ ಇದುವರೆಗೆ ಉಭಯ ತಂಡಗಳು ಎರಡು ಬಾರಿ ಮುಖಾಮುಖಿಯಾಗಿವೆ. 2015 ಮತ್ತು 2019 ರ ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನದ ನಡುವೆ ಎರಡು ಪಂದ್ಯಗಳು ನಡೆದಿದ್ದವು. ಈ ಎರಡೂ ಪಂದ್ಯಗಳಲ್ಲೂ ಕಿವೀಸ್ ಪಡೆ ಗೆಲುವು ಸಾಧಿಸುವ ಮೂಲಕ ಅಫ್ಘಾನಿಸ್ತಾನದ ವಿರುದ್ಧ ಮೇಲುಗೈ ಸಾಧಿಸಿದೆ.

 

ಉಭಯ ತಂಡಗಳು

ನ್ಯೂಜಿಲೆಂಡ್ ಸಂಭಾವ್ಯ ತಂಡ: ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್

ಅಫ್ಘಾನಿಸ್ತಾನ ಸಂಭಾವ್ಯ ತಂಡ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:24 am, Wed, 18 October 23