ಕಿವೀಸ್ ನಾಡಲ್ಲಿ ಸಚಿನ್ ಬರೆದಿದ್ದ 14 ವರ್ಷಗಳ ಹಳೆಯ ದಾಖಲೆ ಮುರಿದ ಬಾಂಗ್ಲಾ ಬ್ಯಾಟರ್

NZ vs BAN: ಈ ಪಂದ್ಯದಲ್ಲಿ ಬಾಂಗ್ಲಾ ಪರ 169 ರನ್​ಗಳ ಐತಿಹಾಸಿಕ ಇನ್ನಿಂಗ್ಸ್ ಆಡಿದ ಆರಂಭಿಕ ಆಟಗಾರ ಸೌಮ್ಯ ಸರ್ಕಾರ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ 14 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು.

ಕಿವೀಸ್ ನಾಡಲ್ಲಿ ಸಚಿನ್ ಬರೆದಿದ್ದ 14 ವರ್ಷಗಳ ಹಳೆಯ ದಾಖಲೆ ಮುರಿದ ಬಾಂಗ್ಲಾ ಬ್ಯಾಟರ್
ಸೌಮ್ಯ ಸರ್ಕಾರ್, ಸಚಿನ್ ತೆಂಡೂಲ್ಕರ್
Follow us
ಪೃಥ್ವಿಶಂಕರ
|

Updated on: Dec 20, 2023 | 3:31 PM

ಪ್ರಸ್ತುತ ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಬಾಂಗ್ಲಾದೇಶ ತಂಡ (Bangladesh vs New Zealand) ಅತಿಥೇಯರ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದೆ. ಉಭಯ ತಂಡಗಳ ನಡುವೆ ಇಂದು ನಡೆದ ಸರಣಿಯ ಎರಡನೇ ಏಕದಿನ ಪಂದ್ಯವನ್ನು ಕಿವೀಸ್ ಪಡೆ 7 ವಿಕೆಟ್​ಗಳಿಂದ ಜಯಿಸುವ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡ 50ನೇ ಓವರ್​ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 291 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಕೇವಲ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಗುರಿ ಮುಟ್ಟಿತು. ಇನ್ನು ಈ ಪಂದ್ಯದಲ್ಲಿ ಬಾಂಗ್ಲಾ ಪರ 169 ರನ್​ಗಳ ಐತಿಹಾಸಿಕ ಇನ್ನಿಂಗ್ಸ್ ಆಡಿದ ಆರಂಭಿಕ ಆಟಗಾರ ಸೌಮ್ಯ ಸರ್ಕಾರ್ (Soumya Sarkar), ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರ 14 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು.

ಸಚಿನ್ ದಾಖಲೆ ಉಡೀಸ್

ಬಾಂಗ್ಲಾ ಪರ ಶತಕದ ಇನ್ನಿಂಗ್ಸ್ ಆಡಿದ ಸೌಮ್ಯ ಸರ್ಕಾರ್, ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿದು ನ್ಯೂಜಿಲೆಂಡ್‌ನಲ್ಲಿ ಅತಿದೊಡ್ಡ ಇನ್ನಿಂಗ್ಸ್ ಆಡಿದ ಏಷ್ಯಾದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರಿಗಿಂತ ಮೊದಲು ಕ್ರೀಡಾ ಲೋಕದಲ್ಲಿ ‘ಕ್ರಿಕೆಟ್ ದೇವರು’ ಎಂದೇ ಖ್ಯಾತರಾಗಿರುವ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ಈ ವಿಶೇಷ ಸಾಧನೆ ದಾಖಲಾಗಿತ್ತು. 14 ವರ್ಷಗಳ ಹಿಂದೆ 2009ರಲ್ಲಿ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದ ಪಂದ್ಯದಲ್ಲಿ ತೆಂಡೂಲ್ಕರ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿ 163 ರನ್​ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದ್ದರು. ವಿಶೇಷವೆಂದರೆ ಈ ಪಂದ್ಯದಲ್ಲಿ ಅವರು ಔಟಾಗದೆ, ಇಂಜುರಿಯಿಂದಾಗಿ ರಿಟೈಡ್ ಹರ್ಟ್​ ಆಗಿ ಪೆವಿಲಿಯನ್‌ ಸೇರಿಕೊಂಡಿದ್ದರು.

U-19 Asia Cup: ಚೊಚ್ಚಲ ಅಂಡರ್-19 ಏಷ್ಯಾಕಪ್‌ ಗೆದ್ದ ಬಾಂಗ್ಲಾ; ಯುಎಇಗೆ ನಿರಾಸೆ

169 ರನ್ ಸಿಡಿಸಿದ ಸೌಮ್ಯ

ಇದೀಗ ಸುಮಾರು 14 ವರ್ಷಗಳ ನಂತರ ಬಾಂಗ್ಲಾದೇಶದ ಆರಂಭಿಕ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ವಿಶೇಷ ದಾಖಲೆಯನ್ನು ಮುರಿದಿದ್ದಾರೆ. ಎರಡನೇ ಏಕದಿನದಲ್ಲಿ ಬಾಂಗ್ಲಾ ಪರ ಅತ್ಯಧಿಕ ಇನ್ನಿಂಗ್ಸ್ ಅಡಿದ ಸೌಮ್ಯ ಸರ್ಕಾರ್ ಆರಂಭಿಕರಾಗಿ ಕಣಕ್ಕಿಳಿದು, ತಮ್ಮ ಇನ್ನಿಂಗ್ಸ್​ನಲ್ಲಿ ಒಟ್ಟು 151 ಎಸೆತಗಳನ್ನು ಎದುರಿಸಿ,111.92 ಸ್ಟ್ರೈಕ್ ರೇಟ್‌ನಲ್ಲಿ 169 ರನ್ ಗಳಿಸುವಲ್ಲಿ ಯಶಸ್ವಿಯಾದರು. ಈ ಅವಧಿಯಲ್ಲಿ ಅವರ ಬ್ಯಾಟ್‌ನಿಂದ 22 ಬೌಂಡರಿಗಳು ಮತ್ತು ಎರಡು ಅತ್ಯುತ್ತಮ ಸಿಕ್ಸರ್‌ಗಳು ಸಿಡಿದವು.

ಬಾಂಗ್ಲಾ ತಂಡಕ್ಕೆ ಸೋಲು

ಇನ್ನು ಈ ಪಂದ್ಯದ ಫಲಿತಾಂಶದ ಕುರಿತು ಮಾತನಾಡುವುದಾದರೆ, ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡವು 49.5 ಓವರ್‌ಗಳಲ್ಲಿ 291 ರನ್ ಗಳಿಸಲು ಶಕ್ತವಾಯಿತು. ಗುರಿ ಬೆನ್ನಟ್ಟಿದ ಆತಿಥೇಯ ತಂಡ 46.2 ಓವರ್‌ಗಳಲ್ಲಿ ಮೂರು ವಿಕೆಟ್‌ ಕಳೆದುಕೊಂಡು ಸುಲಭವಾಗಿ ಗುರಿ ಮುಟ್ಟಿತು. ಪಂದ್ಯದಲ್ಲಿ ಅತ್ಯುತ್ತಮ ಇನ್ನಿಂಗ್ಸ್ ಆಡಿದ ಸೌಮ್ಯ ಸರ್ಕಾರ್ ‘ಪ್ಲೇಯರ್ ಆಫ್ ದಿ ಮ್ಯಾಚ್’ ಪ್ರಶಸ್ತಿಗೆ ಭಾಜನರಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ನ್ಯೂಝಿಲೆಂಡ್ ತಂಡ ಪ್ರಕಟ
Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ನ್ಯೂಝಿಲೆಂಡ್ ತಂಡ ಪ್ರಕಟ
ಮನೆ ಮಂದಿಗೆ ಶಾಕ್ ಕೊಟ್ಟ ಕಿಚ್ಚ ಸುದೀಪ್, ಬಚ್ಚಿಟ್ಟುಕೊಂಡ ಹನುಮಂತ
ಮನೆ ಮಂದಿಗೆ ಶಾಕ್ ಕೊಟ್ಟ ಕಿಚ್ಚ ಸುದೀಪ್, ಬಚ್ಚಿಟ್ಟುಕೊಂಡ ಹನುಮಂತ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ