NZ vs ENG: ಆಂಗ್ಲರ ಹೊಡಿಬಡಿ ಆಟಕ್ಕೆ ಸುಸ್ತಾದ ಕಿವೀಸ್; ಮೊದಲ ಟೆಸ್ಟ್​ನಲ್ಲಿ 267 ರನ್​ಗಳ ಬೃಹತ್ ಸೋಲು!

NZ vs ENG: ನ್ಯೂಜಿಲೆಂಡ್ ತಂಡ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 126 ರನ್‌ಗಳಿಗೆ ಆಲೌಟ್ ಆಗುವುದರೊಂದಿಗೆ 267 ರನ್​ಗಳ ಬೃಹತ್ ಅಂತರದ ಸೋಲು ಕಂಡಿತು.

NZ vs ENG: ಆಂಗ್ಲರ ಹೊಡಿಬಡಿ ಆಟಕ್ಕೆ ಸುಸ್ತಾದ ಕಿವೀಸ್; ಮೊದಲ ಟೆಸ್ಟ್​ನಲ್ಲಿ 267 ರನ್​ಗಳ ಬೃಹತ್ ಸೋಲು!
ಇಂಗ್ಲೆಂಡ್- ನ್ಯೂಜಿಲೆಂಡ್ ಟೆಸ್ಟ್ ಸರಣಿ
Follow us
|

Updated on:Feb 19, 2023 | 10:26 AM

ಇಂಗ್ಲೆಂಡ್ ವಿರುದ್ಧ ತವರು ನೆಲದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ (New Zealand vs England) ತಂಡ ಹೀನಾಯ ಸೋಲು ಕಂಡಿದೆ. ಉಭಯ ದೇಶಗಳ ನಡುವಿನ ಈ ಪಂದ್ಯ ಹಗಲು-ರಾತ್ರಿಯ ಪಂದ್ಯವಾಗಿದ್ದು, ಇಂಗ್ಲೆಂಡ್ ತಂಡ ನ್ಯೂಜಿಲೆಂಡ್ ಗೆಲುವಿಗೆ 394 ರನ್​ಗಳ ಗುರಿ ನೀಡಿತ್ತು. ಆದರೆ, ಕಿವೀಸ್ ತಂಡ ಆ ಗುರಿಯ ಸಮೀಪಕ್ಕೂ ಬರಲಾಗದೆ ಹೀನಾಯ ಸೋಲು ಎದುರಿಸಬೇಕಾಯಿತು. ನ್ಯೂಜಿಲೆಂಡ್ ವಿರುದ್ಧದ ಈ ಸೋಲಿನೊಂದಿಗೆ ಇಂಗ್ಲೆಂಡ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ವಾಸ್ತವವಾಗಿ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯ ಫೆಬ್ರವರಿ 20 ರವರೆಗೆ ನಡೆಯಬೇಕಿತ್ತು. ಆದರೆ ನಾಲ್ಕನೇ ದಿನದಲ್ಲಿಯೇ ಅಂತ್ಯ ಕಂಡಿತು. ಆಂಗ್ಲರು ನೀಡಿದ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ತಂಡ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 126 ರನ್‌ಗಳಿಗೆ ಆಲೌಟ್ ಆಗುವುದರೊಂದಿಗೆ 267 ರನ್​ಗಳ ಬೃಹತ್ ಅಂತರದ ಸೋಲು ಕಂಡಿತು.

ಇಂಗ್ಲೆಂಡ್ ಮೊದಲ ಇನ್ನಿಂಗ್ಸ್

ಇದಕ್ಕೂ ಮುನ್ನ ಫೆಬ್ರವರಿ 16 ರಿಂದ ಪಿಂಕ್ ಬಾಲ್‌ನೊಂದಿಗೆ ಆರಂಭವಾದ ಈ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 9 ವಿಕೆಟ್‌ಗೆ 325 ರನ್ ಗಳಿಸಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಪರ ಹ್ಯಾರಿ ಬ್ರೂಕ್ ಗರಿಷ್ಠ 89 ರನ್ ಮತ್ತು ಬೆನ್ ಡಕೆಟ್ 84 ರನ್ ಗಳಿಸಿದರು.

IND vs AUS: ಟೆಸ್ಟ್ ಆರಂಭದಲ್ಲೇ ಮೊಹಮ್ಮದ್ ಸಿರಾಜ್​ಗೆ ಗಾಯ; ಕೈಯಿಂದ ಸುರಿಯಿತು ರಕ್ತ..!

ನ್ಯೂಜಿಲೆಂಡ್ ಮೊದಲ ಇನಿಂಗ್ಸ್‌

ಇದಾದ ಬಳಿಕ  ಮೊದಲ ಇನ್ನಿಂಗ್ಸ್‌ ಆರಂಭಿಸಿದ ನ್ಯೂಜಿಲೆಂಡ್‌ ಆರಂಭ ಅತ್ಯಂತ ಕಳಪೆಯಾಗಿತ್ತು. ತಂಡದ  3 ವಿಕೆಟ್‌ಗಳು ಕೇವಲ 31 ರನ್‌ಗಳಿಗೆ ಪತನಗೊಂಡವು. ಅಗ್ರ ನಾಲ್ಕು ಬ್ಯಾಟ್ಸ್‌ಮನ್‌ಗಳಲ್ಲಿ, ಡೆವೊನ್ ಕಾನ್ವೆ ಮಾತ್ರ ಉತ್ತಮ ಪ್ರದರ್ಶನ ನೀಡಿದರು. ಇವರಲ್ಲದೆ, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಟಾಮ್ ಬ್ಲಂಡೆಲ್ ಶತಕ ಬಾರಿಸಿ ಮಧ್ಯಮ ಕ್ರಮಾಂಕದಲ್ಲಿ 138 ರನ್ ಗಳಿಸಿದರು. ಈ ಮೂಲಕ ನ್ಯೂಜಿಲೆಂಡ್ ತನ್ನ ಮೊದಲ ಇನಿಂಗ್ಸ್‌ನಲ್ಲಿ 306 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಇಂಗ್ಲೆಂಡ್ ಪರ ಮೊದಲ ಇನ್ನಿಂಗ್ಸ್‌ನಲ್ಲಿ ಒಲಿ ರಾಬಿನ್ಸನ್ 4 ವಿಕೆಟ್ ಪಡೆದರೆ, ಆಂಡರ್ಸನ್ 3 ವಿಕೆಟ್ ಪಡೆದರು.

ಕಿವೀಸ್​ಗೆ 394 ರನ್​ಗಳ ಟಾರ್ಗೆಟ್

ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 19 ರನ್‌ಗಳ ಮುನ್ನಡೆ ಸಾಧಿಸಿದ ಇಂಗ್ಲೆಂಡ್ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 374 ರನ್‌ಗಳ ಗುರಿ ನೀಡಿತು. 54 ರನ್ ಗಳಿಸಿದ ಹ್ಯಾರಿ ಬ್ರೂಕ್ ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ನ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಎನಿಸಿಕೊಂಡರು.  ಅವರನ್ನು ಹೊರತುಪಡಿಸಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಬೆನ್ ಫಾಕ್ಸ್ 51 ರನ್ ಗಳಿಸಿದರೆ, ಓಲಿ ಪೋಪ್ 49 ರನ್ ಗಳಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಗಳಿಸಿದ ರನ್ ಮತ್ತು ಮೊದಲ ಇನ್ನಿಂಗ್ಸ್ ಮುನ್ನಡೆ ಆಧರಿಸಿ ಇಂಗ್ಲೆಂಡ್ ನ್ಯೂಜಿಲೆಂಡ್‌ಗೆ 394 ರನ್‌ಗಳ ಗುರಿ ನೀಡಿತು.

100ರೊಳಗೆ 9 ವಿಕೆಟ್

ಈ ಗುರಿ ಬೆನ್ನಟಿದ್ದ ಕಿವೀಸ್ ತಂಡ ಬ್ರಾಡ್ ಮತ್ತು ಆಂಡರ್ಸನ್ ಅವರ ಮಾರಕ ದಾಳಿಗೆ ನಲುಗಿ ಹೋಯಿತು. ಕೇವಲ 100 ರನ್​ಗಳ ಅಂತರದಲ್ಲಿ ಕಿವೀಸ್ ತಂಡದ 9 ಬ್ಯಾಟ್ಸ್​ಮನ್​ಗಳು ಪೆವಿಲಿಯನ್ ಸೇರಿಕೊಂಡರು. ಆದರೆ ಕೊನೆಯ ವಿಕೆಟ್‌ಗೆ ಟಿಕ್ನರ್ ಮತ್ತು ಡ್ಯಾರಿಲ್ ಮಿಚೆಲ್ ಅವರ ಜೊತೆಯಾಟವು ನ್ಯೂಜಿಲೆಂಡ್ ಅನ್ನು 125 ರನ್‌ಗಳ ಗಡಿ ದಾಟಿಸಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್ ಮತ್ತು ಸ್ಟುವರ್ಟ್ ಬ್ರಾಡ್ ತಲಾ 4 ವಿಕೆಟ್ ಪಡೆದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:23 am, Sun, 19 February 23

ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ