AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬೋಜ್ ಕರಾರುವಾಕ್ ದಾಳಿಗೆ ತತ್ತರಿಸಿದ ಕಿವೀಸ್ ಪಡೆ!

ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಈವರೆಗೆ ಒಟ್ಟು 123 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಟೀಮ್ ಇಂಡಿಯಾ 63 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದ್ದರೆ, ನ್ಯೂಝಿಲೆಂಡ್ 52 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ ಪಂದ್ಯಗಳ ಪೈಕಿ 7 ಪಂದ್ಯಗಳು ವಿವಿಧ ಕಾರಣಗಳಿಂದಾಗಿ ಫಲಿತಾಂಶವಿಲ್ಲದೆ ಅಂತ್ಯಗೊಂಡರೆ, ಕೇವಲ ಒಂದು ಪಂದ್ಯ ಮಾತ್ರ ಟೈ ಆಗಿತ್ತು.

ಕಂಬೋಜ್ ಕರಾರುವಾಕ್ ದಾಳಿಗೆ ತತ್ತರಿಸಿದ ಕಿವೀಸ್ ಪಡೆ!
Ind Vs NzImage Credit source: BCCI
ಝಾಹಿರ್ ಯೂಸುಫ್
|

Updated on:Nov 04, 2026 | 11:06 AM

Share

ಆಕ್ಲೆಂಡ್​ನ ಈಡನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ದಾಂಡಿಗ ವಿಲ್ ಯಂಗ್ ಕೇವಲ 9 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ಹೆನ್ರಿ ನಿಕೋಲ್ಸ್ ಕೂಡ 9 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇದರ ನಡುವೆ ಟಿಮ್ ಸೈಫರ್ಟ್ 43 ಎಸೆತಗಳಲ್ಲಿ 38 ರನ್ ಬಾರಿಸಿದರೂ ಗುರ್ನೂರ್ ಬ್ರಾರ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚಿ ನೀಡಿದರು.

ಮತ್ತೊಂದೆಡೆ ಕ್ರೀಸ್ ಕಚ್ಚಿ ನಿಂತಿದ್ದ ಡ್ಯಾರಿಲ್ ಮಿಚೆಲ್ (28) ಅನವಶ್ಯಕ ರನ್ ಕದಿಯಲು ಯತ್ನಿಸಿ ರನೌಟ್ ಆಗಿ ಹೊರ ನಡೆದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಲ್ಯಾಥಮ್ ಇನಿಂಗ್ಸ್ ಕೇವಲ 11 ರನ್​ಗಳಿಗೆ ಸೀಮಿವಾಯಿತು.

ನಾಯಕ ಮಿಚೆಲ್ ಸ್ಯಾಂಟ್ನರ್ 4 ರನ್​ಗಳಿಸಿ ವಿಕೆಟ್ ಒಪ್ಪಿಸಿದರೆ, ನಾಥನ್ ಸ್ಮಿತ್ (1) ಬಂದ ವೇಗದಲ್ಲೇ ಹಿಂತಿರುಗಿದರು. ಪರಿಣಾಮ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 111 ರನ್​ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು.

ಈ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಗ್ಲೆನ್ ಫಿಲಿಪ್ಸ್ 30 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ನ್ಯೂಝಿಲೆಂಡ್ ತಂಡ ಮೊತ್ತವನ್ನು 150 ರನ್​ಗಳ ಗುರಿ ದಾಟುವಂತೆ ಮಾಡಿದರು. ಇನ್ನು ಕೊನೆಯ ಬ್ಯಾಟರ್ ಆಗಿ ಕಣಕ್ಕಿಳಿದ ಬ್ಲೇರ್ ಟಿಕ್ನರ್ 4 ಭರ್ಜರಿ ಸಿಕ್ಸರ್​ಗಳೊಂದಿಗೆ 34 ರನ್ ಚಚ್ಚಿದರು. ಈ ಮೂಲಕ ನ್ಯೂಝಿಲೆಂಡ್ ತಂಡ 40.2 ಓವರ್​ಗಳಲ್ಲಿ 185 ರನ್​ಗಳಿಸಿ ಆಲೌಟ್ ಆಯಿತು.

ಟೀಮ್ ಇಂಡಿಯಾ ಪರ ಕರಾರುವಾಕ್ ದಾಳಿ ಸಂಘಟಿಸಿದ ಅನ್ಶುಲ್ ಕಂಬೋಜ್ 10 ಓವರ್​ಗಳಲ್ಲಿ ಕೇವಲ 22 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು. ಅಂದರೆ ಕಂಬೋಜ್ ತಮ್ಮ 10 ಓವರ್​ಗಳಲ್ಲಿ ಬರೋಬ್ಬರಿ 46 ಡಾಟ್​ ಬಾಲ್​ಗಳನ್ನು ಎಸೆದಿದ್ದರು. ಕಂಬೋಜ್​ಗೆ ಉತ್ತಮ ಸಾಥ್ ನೀಡಿದ ಅರ್ಷದೀಪ್ ಸಿಂಗ್ 4 ವಿಕೆಟ್ ಪಡೆದರೆ,  ಗುರ್ನೂರ್ ಬ್ರಾರ್ 3 ವಿಕೆಟ್ ಕಬಳಿಸಿದರು.

  • ಟೀಮ್ ಇಂಡಿಯಾಗೆ ಗೆಲ್ಲಲು 50 ಓವರ್​ಗಳಲ್ಲಿ 186 ರನ್​ಗಳ ಗುರಿ

ಭಾರತ (ಪ್ಲೇಯಿಂಗ್ XI): ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಮನ್ ಧೀರ್, ಅನ್ಶುಲ್ ಕಂಬೋಜ್, ಆಖಿಬ್ ನಬಿ, ಗುರ್ನೂರ್ ಬ್ರಾರ್, ಅರ್ಷದೀಪ್ ಸಿಂಗ್.

ಇದನ್ನೂ ಓದಿ: IPL ಟ್ರೇಡಿಂಗ್ ಅಂದರೆ ಏನು? ಇದರ ನಿಯಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಝಿಲೆಂಡ್ (ಪ್ಲೇಯಿಂಗ್ XI): ಟಿಮ್ ಸೈಫರ್ಟ್, ವಿಲ್ ಯಂಗ್, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಕೈಲ್ ಜೇಮಿಸನ್, ಜೇಕಬ್ ಡಫಿ, ಬ್ಲೇರ್ ಟಿಕ್ನರ್.

Published On - 11:05 am, Wed, 4 November 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ