AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ಬೆನ್ನಲ್ಲೇ ನ್ಯೂಝಿಲೆಂಡ್ ತಂಡದಿಂದ 5 ಆಟಗಾರರು ಔಟ್!

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 3ನೇ ಟಿ20 ಪಂದ್ಯವು ಅಕ್ಟೋಬರ್ 27 ರಂದು ನಡೆಯಲಿದೆ. ವೆಲ್ಟಿಂಗ್ಟನ್​ನಲ್ಲಿ ಜರುಗಲಿರುವ ಈ ಪಂದ್ಯಕ್ಕೂ ಮುನ್ನ ನ್ಯೂಝಿಲೆಂಡ್ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಬದಲಾವಣೆಯಿಂದಾಗಿ ಐವರು ಆಟಗಾರರು ತಂಡದಿಂದ ಹೊರಬಿದ್ದಿದ್ದಾರೆ. ಹಾಗೆಯೇ ಮೂವರು ಆಟಗಾರರು ಕಿವೀಸ್ ಪಡೆಗೆ ಎಂಟ್ರಿ ಕೊಟ್ಟಿದ್ದಾರೆ.

ಸೋಲಿನ ಬೆನ್ನಲ್ಲೇ ನ್ಯೂಝಿಲೆಂಡ್ ತಂಡದಿಂದ 5 ಆಟಗಾರರು ಔಟ್!
New ZealandImage Credit source: GettyImages
ಝಾಹಿರ್ ಯೂಸುಫ್
|

Updated on:Oct 25, 2026 | 7:40 AM

Share

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯಕ್ಕೂ ಮುನ್ನ ಕಿವೀಸ್ ಪಡೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಫಿಟ್​ನೆಸ್ ಸಮಸ್ಯೆ ಹಾಗೂ ಕಾರ್ಯಭಾರದ ನಿರ್ವಹಣೆಗಾಗಿ ಕೆಲ ಆಟಗಾರರನ್ನು ತಂಡದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ಮೂವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಅದರಂತೆ ತಂಡದಿಂದ ಹೊರಬಿದ್ದಿರುವ ಹಾಗೂ ಟೀಮ್​ಗೆ ಎಂಟ್ರಿ ಕೊಟ್ಟಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

ಮ್ಯಾಟ್ ಹೆನ್ರಿ: ಎರಡನೇ ಟಿ20 ಪಂದ್ಯದ ವೇಳೆ ಮ್ಯಾಟ್ ಹೆನ್ರಿ ಕಾಲಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಇಡೀ ಟಿ20 ಸರಣಿಯಿಂದ ಇವರು ಹೊರಬಿದ್ದಿದ್ದು, ನೇರವಾಗಿ ಮುಂಬರುವ ಏಕದಿನ ಸರಣಿಗೆ ಲಭ್ಯರಿರಲಿದ್ದಾರೆ.

ಲಾಕಿ ಫರ್ಗುಸನ್: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಲಾಕಿ ಫರ್ಗುಸನ್ ಅವರಿಗೆ 3ನೇ ಟಿ20 ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ. ಇವರು ಆಕ್ಲೆಂಡ್‌ಗೆ ಮರಳಲಿದ್ದು, ಸರಣಿಯ ಕೊನೆಯ ಎರಡು ಪಂದ್ಯಗಳ ವೇಳೆ ಮರಳಿ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ.

ಕೈಲ್ ಜೇಮಿಸನ್: ಮೂರನೇ ಟಿ20 ಪಂದ್ಯದ ಮುಕ್ತಾಯದ ನಂತರ ಇವರು ದೇಶಿ ಕ್ರಿಕೆಟ್ ಆಡಲು ವೆಲ್ಲಿಂಗ್ಟನ್‌ನಲ್ಲೇ ಉಳಿಯಲಿದ್ದು, ಸರಣಿಯ ಮುಂದಿನ ಪಂದ್ಯಗಳಲ್ಲಿ ಭಾಗವಹಿಸುವುದಿಲ್ಲ.

ಮಾರ್ಕ್ ಚಾಪ್‌ಮನ್: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಮಾರ್ಕ್​ ಚಾಪ್​ಮನ್ ಅವರನ್ನು ಇಡೀ ಸರಣಿಯಿಂದ ಕೈ ಬಿಡಲಾಗಿದೆ.

ಝಾಕ್ ಫೋಲ್ಕ್ಸ್: ನ್ಯೂಝಿಲೆಂಡ್ ವೇಗಿ ಝಾಕ್ ಫೋಲ್ಕ್ಸ್​ ಇನ್ನೂ ಕೂಡ ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡಿಲ್ಲ. ಹೀಗಾಗಿ ಸರಣಿಯ ಮುಂದಿನ ಪಂದ್ಯಗಳಿಗೂ ಫೋಲ್ಕ್ಸ್​ ಅಲಭ್ಯರಾಗಲಿದ್ದಾರೆ ಎಂದು ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.

ಜೋಶ್ ಕ್ಲಾರ್ಕ್ಸನ್: ಅನುಭವಿ ವೇಗಿ ಜೋಶ್ ಕ್ಲಾರ್ಕ್ಸನ್ ವೆಲ್ಲಿಂಗ್ಟನ್ ಪಂದ್ಯದ ಭಾಗವಾಗಿರುವುದಿಲ್ಲ. ಬದಲಿಗೆ ಆಕ್ಲೆಂಡ್‌ನಲ್ಲಿ ನಡೆಯಲಿರುವ 4ನೇ ಮತ್ತು 5ನೇ ಟಿ20 ಪಂದ್ಯಗಳಿಗೆ ಮಾತ್ರ ನ್ಯೂಝಿಲೆಂಡ್ ತಂಡವನ್ನು ಸೇರಿಕೊಳ್ಳಲಿದ್ದಾರೆ

ಬ್ಲೇರ್ ಟಿಕ್ನರ್:  ಮ್ಯಾಟ್ ಹೆನ್ರಿ ಅವರ ಅನುಪಸ್ಥಿತಿಯಲ್ಲಿ ಮೂರನೇ ಪಂದ್ಯಕ್ಕೂ ಮುನ್ನ ಬ್ಲೇರ್ ಟಿಕ್ನರ್ ನ್ಯೂಝಿಲೆಂಡ್ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಮ್ಯಾಟ್ ಫಿಶರ್:  ಲಾಕಿ ಫರ್ಗುಸನ್ ಹೊರಗುಳಿದಿರುವ ಕಾರಣ 3ನೇ ಟಿ20 ಪಂದ್ಯಕ್ಕಾಗಿ ಬ್ಯಾಕ್-ಅಪ್ ಆಟಗಾರನಾಗಿ ಮ್ಯಾಟ್ ಫಿಶರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಟೀಮ್ ಇಂಡಿಯಾಗೆ ಯುವ ಆಟಗಾರ ಎಂಟ್ರಿ: ಯಾರು ಈ ಕುಮಾರ್ ಕುಶಾಗ್ರ?

ಒಟ್ಟಾರೆಯಾಗಿ, ಸರಣಿಯಲ್ಲಿ 0-2 ಹಿನ್ನಡೆಯಲ್ಲಿರುವ ನ್ಯೂಝಿಲೆಂಡ್ ತಂಡಕ್ಕೆ, ಈ 5 ಆಟಗಾರರ ಬದಲಾವಣೆ ಮತ್ತು ಕಾರ್ಯಭಾರ ನಿರ್ವಹಣೆಯ ತ್ರವು ಸರಣಿಯಲ್ಲಿ ಪುನರಾಗಮನ ಮಾಡಲು ಎಷ್ಟು ನೆರವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Published On - 7:39 am, Sun, 25 October 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ