AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ವಿರುದ್ಧದ ಸರಣಿಗೂ ಮುನ್ನ ನ್ಯೂಝಿಲೆಂಡ್​ಗೆ ಡಬಲ್ ಶಾಕ್!

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ನವೆಂಬರ್ 4 ರಿಂದ ಆರಂಭವಾಗಲಿದೆ. ಐದು ಪಂದ್ಯಗಳ ಈ ಸರಣಿಯಿಂದ ನ್ಯೂಝಿಲೆಂಡ್ ತಂಡದ ಇಬ್ಬರು ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿದ್ದಾರೆ. ಈ ಆಘಾತದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್ ಬದಲಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿದ್ದು, ಈ ಮೂಲಕ ಟೀಮ್ ಇಂಡಿಯಾ ವಿರುದ್ಧ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲು ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.

ಭಾರತ ವಿರುದ್ಧದ ಸರಣಿಗೂ ಮುನ್ನ ನ್ಯೂಝಿಲೆಂಡ್​ಗೆ ಡಬಲ್ ಶಾಕ್!
New Zealand Image Credit source: GettyImages
ಝಾಹಿರ್ ಯೂಸುಫ್
|

Updated on: Nov 02, 2026 | 9:51 AM

Share

ಭಾರತ ವಿರುದ್ಧದ ಮುಂಬರುವ ಮಹತ್ವದ 5 ಪಂದ್ಯಗಳ ಏಕದಿನ ಸರಣಿಗೂ ಮುನ್ನ ನ್ಯೂಝಿಲೆಂಡ್ ತಂಡಕ್ಕೆ ಭಾರಿ ಆಘಾತ ಎದುರಾಗಿದೆ. ತಂಡದ ಇಬ್ಬರು ಪ್ರಮುಖ ಆಟಗಾರರಾದ ಮಾರ್ಕ್ ಚಾಪ್‌ಮನ್ ಮತ್ತು ರಚಿನ್ ರವೀಂದ್ರ ಅವರು ಗಾಯದ ಸಮಸ್ಯೆಯಿಂದಾಗಿ ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ.

ಗಾಯದ ಸಮಸ್ಯೆ ಏನು?

ನ್ಯೂಝಿಲೆಂಡ್ ಕ್ರಿಕೆಟ್ ಮಂಡಳಿಯ ಮೂಲಗಳ ಮಾಹಿತಿ ಪ್ರಕಾರ, ಮಧ್ಯಮ ಕ್ರಮಾಂಕದ ಬ್ಯಾಟರ್ ಮಾರ್ಕ್ ಚಾಪ್‌ಮನ್ ಭೀಕರ ಹ್ಯಾಮ್‌ಸ್ಟ್ರಿಂಗ್ ಗಾಯಕ್ಕೆ ಒಳಗಾಗಿದ್ದಾರೆ. ಮತ್ತೊಂದೆಡೆ, ಇತ್ತೀಚೆಗಷ್ಟೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವ ಆಲ್ ರೌಂಡರ್ ರಚಿನ್ ರವೀಂದ್ರ ಅವರು ಇನ್ನೂ ಸಂಪೂರ್ಣವಾಗಿ ಗುಣಮುಖರಾಗದ ಕಾರಣ (ಹೆಗಲಿನ ಗಾಯದ ಚೇತರಿಕೆ) ಮುನ್ನೆಚ್ಚರಿಕಾ ಕ್ರಮವಾಗಿ ಸರಣಿಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

ತಂಡಕ್ಕೆ ಮರಳಿದ ನಿಕೋಲ್ಸ್:

ಇಬ್ಬರು ಆಟಗಾರರ ಅಲಭ್ಯತೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ನ್ಯೂಝಿಲೆಂಡ್ ಆಯ್ಕೆ ಸಮಿತಿಯು ಅನುಭವಿ ಬ್ಯಾಟರ್ ಹೆನ್ರಿ ನಿಕೋಲ್ಸ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ. ನಿಕೋಲ್ಸ್ ಅವರ ಅನುಭವವು ಭಾರತದ ವಿರುದ್ಧದ ಸರಣಿಯಲ್ಲಿ ಕಿವೀಸ್ ಪಡೆಗೆ ನೆರವಾಗಲಿದೆ ಎಂಬ ನಂಬಿಕೆ ಮ್ಯಾನೇಜ್‌ಮೆಂಟ್‌ದ್ದಾಗಿದೆ.

ಸೈಫರ್ಟ್, ಫಿಶರ್‌ಗೆ ಹೆಚ್ಚಿನ ಜವಾಬ್ದಾರಿ:

ಆಟಗಾರರ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಟಿಮ್ ಸೈಫರ್ಟ್ ಮತ್ತು ಯುವ ಬೌಲರ್ ಮ್ಯಾಟ್ ಫಿಶರ್ ಅವರಿಗೆ ತಂಡದಲ್ಲಿ ಹೆಚ್ಚಿನ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ.

  • ಮಾರ್ಕ್​ ಚಾಪ್‌ಮನ್ ಹೊರಬಿದ್ದಿರುವುದರಿಂದ ಮಧ್ಯಮ ಕ್ರಮಾಂಕದಲ್ಲಿ ದೊಡ್ಡ ಹೊಡೆತಗಳನ್ನು ಹೊಡೆಯಬಲ್ಲ ಆಕ್ರಮಣಕಾರಿ ಬ್ಯಾಟರ್ ಕೊರತೆ ಎದುರಾಗಿದ್ದು, ಈ ಜವಾಬ್ದಾರಿಯನ್ನು ಟಿಮ್ ಸೈಫರ್ಟ್ ನಿರ್ವಹಿಸಲಿದ್ದಾರೆ.
  • ರಚಿನ್ ರವೀಂದ್ರ ಅವರು ತಂಡಕ್ಕೆ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಸಮತೋಲನ ನೀಡುತ್ತಿದ್ದರು. ರಚಿನ್ ಇಲ್ಲದಿರುವುದರಿಂದ ಯುವ ಬೌಲರ್ ಮ್ಯಾಟ್ ಫಿಶರ್ ಅವರನ್ನು ಕಣಕ್ಕಿಳಿಸಲು ನ್ಯೂಝಿಲೆಂಡ್ ಟೀಮ್ ಮ್ಯಾನೇಜ್ಮೆಂಟ್ ಪ್ಲ್ಯಾನ್ ರೂಪಿಸಿದೆ.

ನ್ಯೂಝಿಲೆಂಡ್ ಏಕದಿನ ತಂಡ (ಮೊದಲ 3 ಪಂದ್ಯಗಳಿಗೆ): ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ, ಜೇಕಬ್ ಡಫಿ, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಟಿಮ್ ಸೈಫರ್ಟ್, ನಾಥನ್ ಸ್ಮಿತ್, ವಿಲ್ ಯಂಗ್, ಬ್ಲೇರ್ ಟಿಕ್ನರ್.

ಇದನ್ನೂ ಓದಿ: 36 ಎಸೆತಗಳಲ್ಲಿ 154 ರನ್ ಚಚ್ಚಿದ ಪಾಕಿಸ್ತಾನ್: ವಿಶ್ವ ದಾಖಲೆ ಜಸ್ಟ್ ಮಿಸ್!

ನ್ಯೂಝಿಲೆಂಡ್ ಏಕದಿನ ತಂಡ (ಕೊನೆಯ 2 ಪಂದ್ಯಗಳಿಗೆ): ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಕ್ರಿಸ್ಟಿಯನ್ ಕ್ಲಾರ್ಕ್, ಜೇಕಬ್ ಡಫಿ, ಮ್ಯಾಟ್ ಫಿಶರ್, ಡೀನ್ ಫಾಕ್ಸ್‌ಕ್ರಾಫ್ಟ್, ಲಾಕಿ ಫರ್ಗುಸನ್, ಮಿಚ್ ಹೇ (ವಿಕೆಟ್ ಕೀಪರ್), ನಿಕ್ ಕೆಲ್ಲಿ, ಟಿಮ್ ಸೈಫರ್ಟ್, ಬ್ಲೇರ್ ಟಿಕ್ನರ್, ವಿಲ್ ಯಂಗ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಸತ್ತ ನಾಲ್ವರ ಮೃತದೇಹ ಬೆಂಗಳೂರಿಗೆ
ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಸತ್ತ ನಾಲ್ವರ ಮೃತದೇಹ ಬೆಂಗಳೂರಿಗೆ
ಶಿವಲಿಂಗೇಗೌಡ ಕಬಡ್ಡಿ ಅಖಾಡಕ್ಕಿಳಿದು ರೈಡ್ ಮಾಡಿದ ಸ್ಟೈಲ್ ನೋಡಿ
ಶಿವಲಿಂಗೇಗೌಡ ಕಬಡ್ಡಿ ಅಖಾಡಕ್ಕಿಳಿದು ರೈಡ್ ಮಾಡಿದ ಸ್ಟೈಲ್ ನೋಡಿ
ಇಂದು ಕಾಲಾಷ್ಟಮಿ; ಕಾಲಭೈರವನ ಆರಾಧನೆಗೆ ಸೂಕ್ತ ದಿನ
ಇಂದು ಕಾಲಾಷ್ಟಮಿ; ಕಾಲಭೈರವನ ಆರಾಧನೆಗೆ ಸೂಕ್ತ ದಿನ
ಮೆರವಣಿಗೆಯಲ್ಲಿ ಗಮನ ಸೆಳೆದ ರೋಬೋಟಿಕ್​ ಆನೆಗಳು!
ಮೆರವಣಿಗೆಯಲ್ಲಿ ಗಮನ ಸೆಳೆದ ರೋಬೋಟಿಕ್​ ಆನೆಗಳು!
ಹಾಸನಾಂಬ ಸನ್ನಿಧಾನಕ್ಕೆ ಹರಿದುಬರುತ್ತಿದೆ ಕೋಟಿ ಕೋಟಿ ದುಡ್ಡು!
ಹಾಸನಾಂಬ ಸನ್ನಿಧಾನಕ್ಕೆ ಹರಿದುಬರುತ್ತಿದೆ ಕೋಟಿ ಕೋಟಿ ದುಡ್ಡು!
ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹುಟ್ಟಿದರೆ ಕನ್ನಡ ನಾಡಲಿ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಸಚಿವ ಶಿವಲಿಂಗೇಗೌಡ
ಹುಟ್ಟಿದರೆ ಕನ್ನಡ ನಾಡಲಿ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಸಚಿವ ಶಿವಲಿಂಗೇಗೌಡ
ಸುದೀಪ್ ಎದುರು, ಸೋನಿಕಾ-ಧನುಶ್​​ ಅವರ ಮಿಮಿಕ್ ಮಾಡಿದ ತಾಂಡವ್-ಪ್ರಶಾಂತ್
ಸುದೀಪ್ ಎದುರು, ಸೋನಿಕಾ-ಧನುಶ್​​ ಅವರ ಮಿಮಿಕ್ ಮಾಡಿದ ತಾಂಡವ್-ಪ್ರಶಾಂತ್
ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ
ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ
ಬೆಂಗಳೂರಿನಲ್ಲಿ ಮೈ ಹೋಮ್ ಗ್ರೂಪ್‌ನ ನೂತನ ಕಚೇರಿ ಉದ್ಘಾಟನೆ
ಬೆಂಗಳೂರಿನಲ್ಲಿ ಮೈ ಹೋಮ್ ಗ್ರೂಪ್‌ನ ನೂತನ ಕಚೇರಿ ಉದ್ಘಾಟನೆ