NZ Vs PAK Playing XI: ಟಾಸ್ ಗೆದ್ದ ನ್ಯೂಜಿಲೆಂಡ್, ಪಾಕಿಸ್ತಾನ ಬೌಲಿಂಗ್; ಉಭಯ ತಂಡಗಳು ಹೀಗಿವೆ

ICC T20 World Cup New Zealand vs Pakistan Semi-Final Playing XI: ಈ ಪಂದ್ಯದಲ್ಲಿ ಗೆದ್ದವರು ನೇರವಾಗಿ ಫೈನಲ್​ಗೆ ಲಗ್ಗೆ ಇಡಲಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

NZ Vs PAK Playing XI: ಟಾಸ್ ಗೆದ್ದ ನ್ಯೂಜಿಲೆಂಡ್, ಪಾಕಿಸ್ತಾನ ಬೌಲಿಂಗ್; ಉಭಯ ತಂಡಗಳು ಹೀಗಿವೆ
Follow us
TV9 Web
| Updated By: ಪೃಥ್ವಿಶಂಕರ

Updated on:Nov 09, 2022 | 1:21 PM

ಇಂದು ಸಿಡ್ನಿ ಮೈದಾನದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನದ (Pakistan Vs New Zealand) ನಡುವೆ ಟಿ20 ವಿಶ್ವಕಪ್​ನ (T20 World Cup 2022) ಮೊದಲ ಸೆಮಿಫೈನಲ್‌ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದವರು ನೇರವಾಗಿ ಫೈನಲ್​ಗೆ ಲಗ್ಗೆ ಇಡಲಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ನ್ಯೂಜಿಲೆಂಡ್ ತಂಡವು ಗ್ರೂಪ್ 1 ರಿಂದ ನಂಬರ್ ಒನ್ ಸ್ಥಾನದಲ್ಲಿ ಉಳಿಯುವ ಮೂಲಕ ಸೆಮಿಫೈನಲ್ ಪ್ರವೇಶಿಸಿದೆ. ಮತ್ತೊಂದೆಡೆ, ಪಾಕಿಸ್ತಾನ ಗ್ರೂಪ್ 2 ರಿಂದ ಸೆಮಿಫೈನಲ್ ಪ್ರವೇಶಿಸಿದೆ. ಕಳಪೆ ಆರಂಭದ ಹೊರತಾಗಿಯೂ, ಪಾಕಿಸ್ತಾನ ತಂಡ ಸೆಮಿಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ.

ಸಿಡ್ನಿಯಲ್ಲಿ ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಈ ಟಿ20 ವಿಶ್ವಕಪ್‌ನ 6 ಪಂದ್ಯಗಳು ಸಿಡ್ನಿಯಲ್ಲಿ ನಡೆದಿದ್ದು, ಅದರಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಐದು ಬಾರಿ ಗೆದ್ದಿದೆ. ಸಿಡ್ನಿ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗುವುದರಿಂದ, ಈ ಪಿಚ್​​ನಲ್ಲಿ ಚೇಸ್ ಮಾಡುವುದು ಸುಲಭವಲ್ಲ. ಹೀಗಾಗಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ಎರಡೂ ತಂಡಗಳು ತಮ್ಮ ಆಡುವ XI ನಲ್ಲಿ ತಲಾ 2 ಸ್ಪಿನ್ನರ್‌ಗಳಿಗೆ ಸ್ಥಾನ ನೀಡಲು ಇದು ಕಾರಣವಾಗಿದೆ.

ಪಾಕಿಸ್ತಾನ-ನ್ಯೂಜಿಲೆಂಡ್ ತಂಡದಲ್ಲಿ ಯಾರಿಗೆ ಸ್ಥಾನ?

ಪಾಕಿಸ್ತಾನದ ಪ್ಲೇಯಿಂಗ್ ಇಲೆವೆನ್- ಮೊಹಮ್ಮದ್ ರಿಜ್ವಾನ್, ಬಾಬರ್ ಅಜಮ್, ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ.

ನ್ಯೂಜಿಲೆಂಡ್‌ನ ಪ್ಲೇಯಿಂಗ್ XI: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್, ಗ್ಲೆನ್ ಫಿಲಿಪ್ಸ್, ಡಾರೆಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.

ಇದನ್ನೂ ಓದಿ: ICC rankings: ನಂ.1 ಪಟ್ಟದಲ್ಲಿ ಸೂರ್ಯ ಭದ್ರ; ಟಾಪ್ 10 ರಿಂದ ಕಿಂಗ್ ಕೊಹ್ಲಿ ಔಟ್..!

ಸಿಡ್ನಿಯಲ್ಲಿ ಪಾಕಿಸ್ತಾನ-ನ್ಯೂಜಿಲೆಂಡ್ ದಾಖಲೆ ಉತ್ತಮವಾಗಿದೆ

ಸಿಡ್ನಿ ಮೈದಾನದಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ಎರಡೂ ಉತ್ತಮ ಪ್ರದರ್ಶನ ನೀಡಿವೆ. ಸಿಡ್ನಿ ಮೈದಾನದಲ್ಲಿ ನಡೆದ ಈ ಟೂರ್ನಿಯಲ್ಲಿ ನ್ಯೂಜಿಲೆಂಡ್ ಎರಡು ಪಂದ್ಯಗಳನ್ನು ಗೆದ್ದಿದೆ. ಮೊದಲು ಆಸ್ಟ್ರೇಲಿಯಾವನ್ನು ಸೋಲಿಸಿದ ಕಿವೀಸ್ ಪಡೆ ನಂತರ ಶ್ರೀಲಂಕಾವನ್ನು ಸೋಲಿಸಿತ್ತು. ಮತ್ತೊಂದೆಡೆ, ಪಾಕಿಸ್ತಾನ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಟೂರ್ನಿಯಲ್ಲಿ ತನ್ನ ಮೊದಲ ಗೆಲುವು ದಾಖಲಿಸಿತ್ತು. ಆದರೆ, ಐಸಿಸಿ ಟೂರ್ನಮೆಂಟ್‌ಗಳ ಇತಿಹಾಸದಲ್ಲಿ ಪಾಕಿಸ್ತಾನ ತಂಡ, ನ್ಯೂಜಿಲೆಂಡ್‌ ಎದುರು ಮೇಲುಗೈ ಸಾಧಿಸಿದೆ. ಸೆಮಿಫೈನಲ್‌ನಲ್ಲಿ ಉಭಯ ತಂಡಗಳು ಮೂರು ಬಾರಿ ಮುಖಾಮುಖಿಯಾಗಿದ್ದು, ಪ್ರತಿ ಬಾರಿಯೂ ಪಾಕಿಸ್ತಾನ ಗೆಲುವು ಸಾಧಿಸಿದೆ.

ಅಂದಹಾಗೆ, ನ್ಯೂಜಿಲೆಂಡ್ ತಂಡ ಸೆಮಿಫೈನಲ್‌ನಲ್ಲಿ ಆಗಾಗ್ಗೆ ಮುಗ್ಗರಿಸಿದೆ. ವಿಶ್ವಕಪ್ ಇತಿಹಾಸದಲ್ಲಿ, ಈ ತಂಡವು 10 ಬಾರಿ ಸೆಮಿಫೈನಲ್ ತಲುಪಿದೆ, ಅದರಲ್ಲಿ ಕೇವಲ 3 ಬಾರಿ ಗೆದ್ದಿದೆ. ಅದೇ ಸಮಯದಲ್ಲಿ ಪಾಕಿಸ್ತಾನ 20 ಬಾರಿ ಸೆಮಿಫೈನಲ್ ತಲುಪಿದೆ ಮತ್ತು 10 ರಲ್ಲಿ ಗೆದ್ದು 10 ರಲ್ಲಿ ಸೋತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:19 pm, Wed, 9 November 22

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ