AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NZ vs SA: 7 ಎಸೆತಗಳಲ್ಲಿ 7 ರನ್ ಬಾರಿಸಲಾಗದೆ ತ್ರಿಕೋನ ಸರಣಿ ಫೈನಲ್ ಸೋತ ಆಫ್ರಿಕಾ

NZ vs SA T20 Tri-Series Final: ಹರಾರೆಯಲ್ಲಿ ನಡೆದ ಟಿ20 ತ್ರಿಕೋನ ಸರಣಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ದಕ್ಷಿಣ ಆಫ್ರಿಕಾವನ್ನು 3 ರನ್‌ಗಳಿಂದ ಸೋಲಿಸಿ ಗೆಲುವು ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 180 ರನ್ ಗಳಿಸಿತು. ದಕ್ಷಿಣ ಆಫ್ರಿಕಾ ಉತ್ತಮ ಆರಂಭ ಪಡೆದರೂ, ಕೊನೆಯ ಓವರ್‌ಗಳಲ್ಲಿ ಒತ್ತಡಕ್ಕೆ ಒಳಗಾಗಿ ಸೋಲನುಭವಿಸಿತು

NZ vs SA: 7 ಎಸೆತಗಳಲ್ಲಿ 7 ರನ್ ಬಾರಿಸಲಾಗದೆ ತ್ರಿಕೋನ ಸರಣಿ ಫೈನಲ್ ಸೋತ ಆಫ್ರಿಕಾ
Sa Vs Nz
ಪೃಥ್ವಿಶಂಕರ
|

Updated on:Jul 26, 2025 | 10:45 PM

Share

ಹರಾರೆಯಲ್ಲಿ ನಡೆದ ಟಿ20 ತ್ರಿಕೋನ ಸರಣಿಯ (T20 Tri-Series) ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ (New Zealand vs South Africa) ಮುಖಾಮುಖಿಯಾಗಿದ್ದವು. ಉಭಯ ತಂಡಗಳ ನಡುವೆ ನಡೆದ ಈ ರೋಮಾಂಚಕ ಪಂದ್ಯದಲ್ಲಿ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾವನ್ನು 3 ರನ್‌ಗಳಿಂದ ಸೋಲಿಸಿ ಟ್ರೋಫಿಯನ್ನು ಗೆದ್ದುಕೊಂಡಿತು. ವಾಸ್ತವವಾಗಿ ಒಂದು ಹಂತದಲ್ಲಿ ದಕ್ಷಿಣ ಆಫ್ರಿಕಾ ಬಹಳ ಸುಲಭವಾಗಿ ಗೆಲುವಿನತ್ತ ಸಾಗುತ್ತಿತ್ತು, ಆದರೆ ಕೊನೆ ಕೊನೆಯಲ್ಲಿ ಕರಾರುವಕ್ಕಾದ ದಾಳಿ ಮಾಡಿದ ನ್ಯೂಜಿಲೆಂಡ್‌ ಅರ್ಹ ಗೆಲುವು ದಾಖಲಿಸಿತು. ಡಬ್ಲ್ಯೂಟಿಸಿ ಫೈನಲ್ ಗೆದ್ದು ಚೋಕರ್ ಹಣೆ ಪಟ್ಟಿಯನ್ನು ಕಳಚಿದ್ದ ದಕ್ಷಿಣ ಆಫ್ರಿಕಾ ತಂಡ ತ್ರಿಕೋನ ಸರಣಿ ಸೋಲುವುದರೊಂದಿಗೆ ಮತ್ತೊಮ್ಮೆ ಚೋಕರ್ ಎನಿಸಿಕೊಂಡಿತು.

ನ್ಯೂಜಿಲೆಂಡ್‌ ಬಲಿಷ್ಠ ಬ್ಯಾಟಿಂಗ್‌

ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್‌ ಪರ ಟಿಮ್ ಸೀಫರ್ಟ್ 28 ಎಸೆತಗಳಲ್ಲಿ 30 ರನ್ ಗಳಿಸುವ ಮೂಲಕ ತಂಡಕ್ಕೆ ಉತ್ತಮ ಆರಂಭ ನೀಡಿದರು. ನಂತರ ಡೆವೊನ್ ಕಾನ್ವೇ ಮತ್ತು ರಾಚಿನ್ ರವೀಂದ್ರ ತಲಾ 47 ರನ್ ಗಳಿಸುವ ಮೂಲಕ ತಂಡವನ್ನು ಭದ್ರ ಸ್ಥಿತಿಗೆ ಕೊಂಡೊಯ್ದರು. ಇದರಿಂದಾಗಿ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 180 ರನ್ ಗಳಿಸಿತು.

ಕೊನೆಯ ಓವರ್‌ಗಳಲ್ಲಿ ಸೋಲು

181 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಲುವಾನ್ ಪ್ರಿಟೋರಿಯಸ್ ಮತ್ತು ರೀಜಾ ಹೆಂಡ್ರಿಕ್ಸ್ ಮೊದಲ ವಿಕೆಟ್‌ಗೆ 92 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ ಪ್ರಿಟೋರಿಯಸ್ 51 ರನ್ ಮತ್ತು ರೀಜಾ ಹೆಂಡ್ರಿಕ್ಸ್ 37 ರನ್ ಗಳಿಸಿದರು. ಇವರಲ್ಲದೆ, ಡೆವಾಲ್ಡ್ ಬ್ರೆವಿಸ್ ಕೂಡ 16 ಎಸೆತಗಳಲ್ಲಿ 31 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಇದರಿಂದಾಗಿ ದಕ್ಷಿಣ ಆಫ್ರಿಕಾ 15 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 151 ರನ್ ಗಳಿಸಿತು. ಆದರೆ ಇದರ ನಂತರ ಆಫ್ರಿಕಾ ತಂಡದ ಇನ್ನಿಂಗ್ಸ್ ಹಳಿ ತಪ್ಪಲಾರಂಭಿಸಿತು.

Champions League T20: 12 ವರ್ಷಗಳ ನಂತರ ಮತ್ತೆ ಆರಂಭವಾಗಲಿದೆ ಚಾಂಪಿಯನ್ಸ್ ಲೀಗ್ ಟಿ20

ನ್ಯೂಜಿಲೆಂಡ್ ಅಜೇಯ ಪ್ರದರ್ಶನ

ಪಂದ್ಯವನ್ನು ಗೆಲ್ಲಲು ದಕ್ಷಿಣ ಆಫ್ರಿಕಾ ಕೊನೆಯ 7 ಎಸೆತಗಳಲ್ಲಿ 7 ರನ್ ಗಳಿಸಬೇಕಾಗಿತ್ತು. ಇದಾದ ನಂತರ, ಕೊನೆಯ 6 ಎಸೆತಗಳಲ್ಲಿಯೂ 7 ರನ್‌ಗಳು ಬೇಕಾಗಿದ್ದವು. ಆದರೆ ಒತ್ತಡದಲ್ಲಿಯೂ ಮ್ಯಾಟ್ ಹೆನ್ರಿ ಅದ್ಭುತ ಬೌಲಿಂಗ್ ಮಾಡಿ ಕೊನೆಯ ಓವರ್​ನಲ್ಲಿ ಕೇವಲ 3 ರನ್‌ ನೀಡಿ 2 ವಿಕೆಟ್‌ಗಳನ್ನು ಪಡೆದರು. ಇದರಿಂದಾಗಿ ನ್ಯೂಜಿಲೆಂಡ್ ತಂಡವು ಈ ಪಂದ್ಯವನ್ನು 3 ರನ್‌ಗಳಿಂದ ಗೆದ್ದುಕೊಂಡಿತು. ಇಡೀ ಟೂರ್ನಿಯಲ್ಲಿ ಅಜೇಯ ಪ್ರದರ್ಶನ ನೀಡಿದ ನ್ಯೂಜಿಲೆಂಡ್ ಲೀಗ್ ಹಂತದಲ್ಲಿ ಆಡಿದ ನಾಲ್ಕು ಪಂದ್ಯಗಳನ್ನು ಗೆಲ್ಲುವುದರೊಂದಿಗೆ ಫೈನಲ್ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:42 pm, Sat, 26 July 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ