AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 254 ರನ್​ಗಳು: ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದ ನ್ಯೂಜಿಲೆಂಡ್

NZ vs SCO: ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಚಾಪ್ಮನ್ 7 ಸಿಕ್ಸ್​ನೊಂದಿಗೆ 44 ಎಸೆತಗಳಲ್ಲಿ 83 ರನ್ ಬಾರಿಸಿದ್ದರು. ಇನ್ನೊಂದೆಡೆ ಬ್ರೇಸ್​ವೆಲ್ ಅಂತಿಮ ಓವರ್​ಗಳ ವೇಳೆ 25 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 61 ರನ್ ಸಿಡಿಸಿದರು.

ಬರೋಬ್ಬರಿ 254 ರನ್​ಗಳು: ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದ ನ್ಯೂಜಿಲೆಂಡ್
New Zealand
TV9 Web
| Edited By: |

Updated on: Jul 30, 2022 | 3:25 PM

Share

ಶುಕ್ರವಾರ ಎಡಿನ್‌ಬರ್ಗ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ಸ್ಕಾಟ್ಲೆಂಡ್ (NZ vs SCO) ವಿರುದ್ಧ 102 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಮಿಚೆಲ್ ಸ್ಯಾಂಟ್ನರ್ ನಾಯಕತ್ವದಲ್ಲಿ ಕಣಕ್ಕಿಳಿದ ಕಿವೀಸ್ ತಂಡವು ಭರ್ಜರಿ ಪ್ರದರ್ಶನ ನೀಡಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್ ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ತಂಡದ ಸ್ಟಾರ್ ಬ್ಯಾಟ್ಸ್​ಮನ್ ಫಿನ್ ಅಲೆನ್ ಕೇವಲ 6 ರನ್​ಗಳಿಸಿ ಔಟಾಗಿದ್ದರು. ಇದಾದ ಬಳಿಕ ವಿಕೆಟ್ ಕೀಪರ್ ಕ್ಲೀವರ್ ಕೂಡ 28 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ನಂತರ ಬಂದ ಡೆರಿಲ್ ಮಿಚೆಲ್ ಮತ್ತು ಮಾರ್ಕ್ ಚಾಪ್ಮನ್ ಮೂರನೇ ವಿಕೆಟ್‌ಗೆ 62 ರನ್ ಸೇರಿಸಿದರು.

ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಚಾಪ್ಮನ್ 7 ಸಿಕ್ಸ್​ನೊಂದಿಗೆ 44 ಎಸೆತಗಳಲ್ಲಿ 83 ರನ್ ಬಾರಿಸಿದ್ದರು. ಇನ್ನೊಂದೆಡೆ ಬ್ರೇಸ್​ವೆಲ್ ಅಂತಿಮ ಓವರ್​ಗಳ ವೇಳೆ 25 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 61 ರನ್ ಸಿಡಿಸಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 254 ರನ್​ ಕಲೆಹಾಕಿತು.

ಈ ಕಠಿಣ ಗುರಿ ಬೆನ್ನಟ್ಟಿದ ಸ್ಕಾಟ್ಲೆಂಡ್ ತಂಡದ ಬ್ಯಾಟ್ಸ್​ಮನ್​ಗಳು ಕ್ರೀಸ್​ ಕಚ್ಚಿ ನಿಲ್ಲಲಾಗಲಿಲ್ಲ. 29 ಎಸೆತಗಳಲ್ಲಿ 1 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ 37 ರನ್ ಗಳಿಸಿ ಕ್ರಿಸ್ ಗ್ರೀವ್ಸ್ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಅಂತಿಮವಾಗಿ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 159 ರನ್​ಗಳಿಸಿ ಸೋಲೊಪ್ಪಿಕೊಂಡಿತು. ಅತ್ತ ನ್ಯೂಜಿಲೆಂಡ್ ತಂಡವು 102 ರನ್​ಗಳ ಭರ್ಜರಿ ಜಯ ಸಾಧಿಸಿತು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ವಿಶೇಷ ಎಂದರೆ 254 ರನ್​ ಕಲೆಹಾಕುವ ಮೂಲಕ ನ್ಯೂಜಿಲೆಂಡ್ ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆಯನ್ನು ಸಹ ಬರೆದಿದೆ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಇದು ನ್ಯೂಜಿಲೆಂಡ್ ತಂಡದ ಗರಿಷ್ಠ ಸ್ಕೋರ್. ಅಷ್ಟೇ ಅಲ್ಲದೆ ವಿಶ್ವದ 5ನೇ ಅತ್ಯುತ್ತಮ ಇನಿಂಗ್ಸ್ ಆಗಿದೆ. ಅಂದರೆ ಟಿ20 ಕ್ರಿಕೆಟ್​ನಲ್ಲಿ 5 ತಂಡಗಳು ಮಾತ್ರ 250 ಕ್ಕೂ ಅಧಿಕ ರನ್​ ಕಲೆಹಾಕಿದೆ. ಈ ಟಾಪ್ 5 ತಂಡಗಳ ಪಟ್ಟಿಗೆ ಇದೀಗ ನ್ಯೂಜಿಲೆಂಡ್ ಕೂಡ ಸೇರಿಕೊಂಡಿದೆ.

ಸದ್ಯ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ವಿಶ್ವ ದಾಖಲೆ ಅಫ್ಘಾನಿಸ್ತಾನ್ ತಂಡದ ಹೆಸರಿನಲ್ಲಿದೆ. ಅಫ್ಘಾನಿಸ್ತಾನ್ 2019 ರಲ್ಲಿ ಐರ್ಲೆಂಡ್ ವಿರುದ್ದ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 278 ರನ್​ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇನ್ನು ಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ ಕಲೆಹಾಕಿದ ಗರಿಷ್ಠ ಸ್ಕೋರ್ 260 ರನ್​ಗಳು. 2017 ರಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ದ ಈ ಸಾಧನೆ ಮಾಡಿತ್ತು. ಇದೀಗ ನ್ಯೂಜಿಲೆಂಡ್ ತಂಡ ಕೂಡ 254 ರನ್ ಬಾರಿಸುವ ಮೂಲಕ ಈ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದೆ.

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್