AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Points Table: ವಿಂಡೀಸ್ ವಿರುದ್ಧ ಗೆದ್ದು ಟೀಂ ಇಂಡಿಯಾಗೆ ಬಿಗ್ ಶಾಕ್ ನೀಡಿದ ನ್ಯೂಜಿಲೆಂಡ್

WTC points table update: ನ್ಯೂಜಿಲೆಂಡ್ ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ಒಂಬತ್ತು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ, ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ. ವೆಲ್ಲಿಂಗ್ಟನ್‌ನಲ್ಲಿ ನಡೆದ ಈ ಗೆಲುವು ನ್ಯೂಜಿಲೆಂಡ್‌ಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಪಾಯಿಂಟ್ ಪಟ್ಟಿಯಲ್ಲಿ ಭರ್ಜರಿ ಲಾಭ ತಂದುಕೊಟ್ಟಿದೆ. 12 ಅಂಕಗಳೊಂದಿಗೆ ನ್ಯೂಜಿಲೆಂಡ್ ಮೂರನೇ ಸ್ಥಾನಕ್ಕೆ ಏರಿದ್ದು, ದಕ್ಷಿಣ ಆಫ್ರಿಕಾವನ್ನು ಹಿಂದಿಕ್ಕುವ ಅವಕಾಶ ಹೊಂದಿದೆ.

WTC Points Table: ವಿಂಡೀಸ್ ವಿರುದ್ಧ ಗೆದ್ದು ಟೀಂ ಇಂಡಿಯಾಗೆ ಬಿಗ್ ಶಾಕ್ ನೀಡಿದ ನ್ಯೂಜಿಲೆಂಡ್
Wtc Points Table
ಪೃಥ್ವಿಶಂಕರ
|

Updated on: Dec 12, 2025 | 10:30 PM

Share

ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ (New Zealand vs West Indies) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ವೆಸ್ಟ್ ಇಂಡೀಸ್ ತಂಡವನ್ನು ಒಂಬತ್ತು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 205 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ನ್ಯೂಜಿಲೆಂಡ್ ತನ್ನ ಮೊದಲ ಇನ್ನಿಂಗ್ಸ್ ಅನ್ನು 278 ರನ್​ಗಳಿಗೆ ಡಿಕ್ಲೇರ್ ಮಾಡಿತು. ಎರಡನೇ ಇನ್ನಿಂಗ್ಸ್​ನಲ್ಲಿ 128 ರನ್‌ಗಳಿಗೆ ಆಲೌಟ್ ಆದ ವಿಂಡೀಸ್, ಕಿವೀಸ್‌ಗೆ ಗೆಲ್ಲಲು 56 ರನ್‌ಗಳ ಗುರಿಯನ್ನು ನೀಡಿತು. ಈ ಗುರಿ ಬೆನ್ನಟ್ಟಿದ ಕಿವೀಸ್ ಪಡೆ ಕೇವಲ ಒಂದು ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.

WTC ಪಾಯಿಂಟ್‌ ಪಟ್ಟಿಯಲ್ಲಿ ಕಿವೀಸ್​ಗೆ ಲಾಭ

ವೆಲ್ಲಿಂಗ್ಟನ್‌ನಲ್ಲಿನ ಗೆಲುವಿನೊಂದಿಗೆ, ನ್ಯೂಜಿಲೆಂಡ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಭರ್ಜರಿ ಲಾಭ ಪಡೆದುಕೊಂಡಿದೆ. ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದ ನ್ಯೂಜಿಲೆಂಡ್ 12 ಅಂಕಗಳನ್ನು ಕಲೆಹಾಕಿದ್ದು, ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದೆ. ಈ ಆವೃತ್ತಿಯಲ್ಲಿ ನ್ಯೂಜಿಲೆಂಡ್ ತನ್ನ ಎರಡು ಪಂದ್ಯಗಳಲ್ಲಿ ಒಂದನ್ನು ಗೆದ್ದು ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದು, 16 ಅಂಕಗಳನ್ನು ಮತ್ತು 66.67 ಗೆಲುವಿನ ಶೇಕಡಾವಾರು ಗಳಿಸಿದೆ. ಆಸ್ಟ್ರೇಲಿಯಾ ಪ್ರಸ್ತುತ ಐದು ಪಂದ್ಯಗಳಲ್ಲಿ ಐದು ಗೆಲುವುಗಳೊಂದಿಗೆ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಆರನೇ ಸ್ಥಾನದಲ್ಲಿ ಭಾರತ

ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿದ್ದು, ಆಡಿರುವ ನಾಲ್ಕು ಪಂದ್ಯಗಳಿಂದ 36 ಅಂಕಗಳನ್ನು ಹೊಂದಿದ್ದು, ಮೂರು ಗೆಲುವು ಮತ್ತು ಒಂದು ಸೋಲಿನೊಂದಿಗೆ 75 ಗೆಲುವಿನ ಶೇಕಡಾವಾರು ಹೊಂದಿದೆ. ಇದೀಗ ಮೂರನೇ ಟೆಸ್ಟ್ ಗೆಲ್ಲುವ ಮೂಲಕ ನ್ಯೂಜಿಲೆಂಡ್ ದಕ್ಷಿಣ ಆಫ್ರಿಕಾವನ್ನು ಹಿಂದಿಕ್ಕುವ ಅವಕಾಶವನ್ನು ಹೊಂದಿದೆ. ಉಳಿದಂತೆ ಶ್ರೀಲಂಕಾ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನ ಐದನೇ ಸ್ಥಾನದಲ್ಲಿದೆ. ಭಾರತ ಆರನೇ ಸ್ಥಾನದಲ್ಲಿದೆ.

ಟೆಸ್ಟ್ ಕ್ರಿಕೆಟ್​ಗೆ ಕೊಹ್ಲಿ ಪುನರಾಗಮನ? ಬಿಸಿಸಿಐ ನೀಡಿದ ಸ್ಪಷ್ಟನೆ ಏನು?

ಪಾಕಿಸ್ತಾನ ಎರಡು ಪಂದ್ಯಗಳನ್ನು ಗೆದ್ದು ಒಂದು ಪಂದ್ಯವನ್ನು ಸೋತಿದ್ದು, ಒಟ್ಟು 12 ಅಂಕಗಳನ್ನು ಗಳಿಸಿದ್ದು, 50 ರಷ್ಟು ಗೆಲುವಿನ ಶೇಕಡಾವಾರು ಹೊಂದಿದೆ. ಭಾರತ ತನ್ನ ಒಂಬತ್ತು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದ್ದು, ನಾಲ್ಕರಲ್ಲಿ ಸೋತಿದೆ ಮತ್ತು ಒಂದನ್ನು ಡ್ರಾ ಮಾಡಿಕೊಂಡಿದೆ. ಈ ಮೂಲಕ 52 ಅಂಕಗಳನ್ನು ಹೊಂದಿರುವ ಭಾರತ ತಂಡದ ಗೆಲುವಿನ ಶೇಕಡಾವಾರು 48.15 ಆಗಿದೆ. ಉಳಿದಂತೆ ಇಂಗ್ಲೆಂಡ್, ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ಕ್ರಮವಾಗಿ ಏಳನೇ, ಎಂಟನೇ ಮತ್ತು ಒಂಬತ್ತನೇ ಸ್ಥಾನದಲ್ಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?