
ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ (New Zealand vs West Indies) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ವೆಸ್ಟ್ ಇಂಡೀಸ್ ತಂಡವನ್ನು ಒಂಬತ್ತು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 205 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ನ್ಯೂಜಿಲೆಂಡ್ ತನ್ನ ಮೊದಲ ಇನ್ನಿಂಗ್ಸ್ ಅನ್ನು 278 ರನ್‌ಗಳಿಗೆ ಡಿಕ್ಲೇರ್ ಮಾಡಿತು. ಎರಡನೇ ಇನ್ನಿಂಗ್ಸ್‌ನಲ್ಲಿ 128 ರನ್‌ಗಳಿಗೆ ಆಲೌಟ್ ಆದ ವಿಂಡೀಸ್, ಕಿವೀಸ್‌ಗೆ ಗೆಲ್ಲಲು 56 ರನ್‌ಗಳ ಗುರಿಯನ್ನು ನೀಡಿತು. ಈ ಗುರಿ ಬೆನ್ನಟ್ಟಿದ ಕಿವೀಸ್ ಪಡೆ ಕೇವಲ ಒಂದು ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.
ವೆಲ್ಲಿಂಗ್ಟನ್‌ನಲ್ಲಿನ ಗೆಲುವಿನೊಂದಿಗೆ, ನ್ಯೂಜಿಲೆಂಡ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಭರ್ಜರಿ ಲಾಭ ಪಡೆದುಕೊಂಡಿದೆ. ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದ ನ್ಯೂಜಿಲೆಂಡ್ 12 ಅಂಕಗಳನ್ನು ಕಲೆಹಾಕಿದ್ದು, ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದೆ. ಈ ಆವೃತ್ತಿಯಲ್ಲಿ ನ್ಯೂಜಿಲೆಂಡ್ ತನ್ನ ಎರಡು ಪಂದ್ಯಗಳಲ್ಲಿ ಒಂದನ್ನು ಗೆದ್ದು ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದು, 16 ಅಂಕಗಳನ್ನು ಮತ್ತು 66.67 ಗೆಲುವಿನ ಶೇಕಡಾವಾರು ಗಳಿಸಿದೆ. ಆಸ್ಟ್ರೇಲಿಯಾ ಪ್ರಸ್ತುತ ಐದು ಪಂದ್ಯಗಳಲ್ಲಿ ಐದು ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿದ್ದು, ಆಡಿರುವ ನಾಲ್ಕು ಪಂದ್ಯಗಳಿಂದ 36 ಅಂಕಗಳನ್ನು ಹೊಂದಿದ್ದು, ಮೂರು ಗೆಲುವು ಮತ್ತು ಒಂದು ಸೋಲಿನೊಂದಿಗೆ 75 ಗೆಲುವಿನ ಶೇಕಡಾವಾರು ಹೊಂದಿದೆ. ಇದೀಗ ಮೂರನೇ ಟೆಸ್ಟ್ ಗೆಲ್ಲುವ ಮೂಲಕ ನ್ಯೂಜಿಲೆಂಡ್ ದಕ್ಷಿಣ ಆಫ್ರಿಕಾವನ್ನು ಹಿಂದಿಕ್ಕುವ ಅವಕಾಶವನ್ನು ಹೊಂದಿದೆ. ಉಳಿದಂತೆ ಶ್ರೀಲಂಕಾ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನ ಐದನೇ ಸ್ಥಾನದಲ್ಲಿದೆ. ಭಾರತ ಆರನೇ ಸ್ಥಾನದಲ್ಲಿದೆ.
ಟೆಸ್ಟ್ ಕ್ರಿಕೆಟ್ಗೆ ಕೊಹ್ಲಿ ಪುನರಾಗಮನ? ಬಿಸಿಸಿಐ ನೀಡಿದ ಸ್ಪಷ್ಟನೆ ಏನು?
ಪಾಕಿಸ್ತಾನ ಎರಡು ಪಂದ್ಯಗಳನ್ನು ಗೆದ್ದು ಒಂದು ಪಂದ್ಯವನ್ನು ಸೋತಿದ್ದು, ಒಟ್ಟು 12 ಅಂಕಗಳನ್ನು ಗಳಿಸಿದ್ದು, 50 ರಷ್ಟು ಗೆಲುವಿನ ಶೇಕಡಾವಾರು ಹೊಂದಿದೆ. ಭಾರತ ತನ್ನ ಒಂಬತ್ತು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದ್ದು, ನಾಲ್ಕರಲ್ಲಿ ಸೋತಿದೆ ಮತ್ತು ಒಂದನ್ನು ಡ್ರಾ ಮಾಡಿಕೊಂಡಿದೆ. ಈ ಮೂಲಕ 52 ಅಂಕಗಳನ್ನು ಹೊಂದಿರುವ ಭಾರತ ತಂಡದ ಗೆಲುವಿನ ಶೇಕಡಾವಾರು 48.15 ಆಗಿದೆ. ಉಳಿದಂತೆ ಇಂಗ್ಲೆಂಡ್, ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ಕ್ರಮವಾಗಿ ಏಳನೇ, ಎಂಟನೇ ಮತ್ತು ಒಂಬತ್ತನೇ ಸ್ಥಾನದಲ್ಲಿವೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ