AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s World Cup: ಭಾರತಕ್ಕೆ ಶುರುವಾಗಿದೆ ನಡುಕ: ಬಾಂಗ್ಲಾ ವಿರುದ್ಧ 9 ವಿಕೆಟ್​ಗಳ ಗೆಲುವು ಸಾಧಿಸಿದ ನ್ಯೂಜಿಲೆಂಡ್

New Zealand Women vs Bangladesh Women : ಭಾರತೀಯ ವನಿತೆಯರು ಪಾಕಿಸ್ತಾನ ವಿರುದ್ಧ 107 ರನ್​ಗಳ ಅಮೋಘ ಗೆಲುವು ಸಾಧಿಸಿ ಶುಭಾರಂಭ ಮಾಡಿದೆ. ಮಿಥಾಲಿ ಪಡೆ ತನ್ನ ಮುಂದಿನ ಪಂದ್ಯವನ್ನು ಮಾರ್ಚ್ 10 ರಂದು ನ್ಯೂಜಿಲೆಂಡ್ ವಿರುದ್ಧ ಆಡಲಿದೆ. ಆದರೆ, ಇದಕ್ಕೂ ಮುನ್ನ ಭಾರತಕ್ಕೆ ನಡುಕ ಶುರುವಾಗಿದೆ.

Women's World Cup: ಭಾರತಕ್ಕೆ ಶುರುವಾಗಿದೆ ನಡುಕ: ಬಾಂಗ್ಲಾ ವಿರುದ್ಧ 9 ವಿಕೆಟ್​ಗಳ ಗೆಲುವು ಸಾಧಿಸಿದ ನ್ಯೂಜಿಲೆಂಡ್
Womens World Cup IND vs NZ
TV9 Web
| Edited By: |

Updated on: Mar 07, 2022 | 12:10 PM

Share

ನ್ಯೂಜಿಲೆಂಡ್​ನಲ್ಲಿ ನಡೆಯುತ್ತಿರುವ 12ನೇ ಆವೃತ್ತಿಯ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ (ICC Women’s World Cup 2022) ಟೂರ್ನಿಯಲ್ಲಿ ಈಗಾಗಲೇ ಭಾರತೀಯ ವನಿತೆಯರು ಪಾಕಿಸ್ತಾನ ವಿರುದ್ಧ 107 ರನ್​ಗಳ ಅಮೋಘ ಗೆಲುವು ಸಾಧಿಸಿ ಶುಭಾರಂಭ ಮಾಡಿದೆ. ಮಿಥಾಲಿ ಪಡೆ ತನ್ನ ಮುಂದಿನ ಪಂದ್ಯವನ್ನು ಮಾರ್ಚ್ 10 ರಂದು ನ್ಯೂಜಿಲೆಂಡ್ ವಿರುದ್ಧ ಆಡಲಿದೆ. ಆದರೆ, ಇದಕ್ಕೂ ಮುನ್ನ ಭಾರತಕ್ಕೆ ನಡುಕ ಶುರುವಾಗಿದೆ. ಯಾಕೆಂದರೆ ವಿಶ್ವಕಪ್​ನಲ್ಲಿ ಇಂದು ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ಮಹಿಳೆಯರು (New Zealand Women vs Bangladesh Women) ನೀಡಿದ ಅದ್ಭುತ ಪ್ರದರ್ಶನ. ಹೌದು, ಬಾಂಗ್ಲಾ ವನಿತೆಯರ ವಿರುದ್ಧ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಮಿಂಚಿದ ಕಿವೀಸ್ ವನಿತೆಯರು ಮೊದಲ ಸೋಲಿನಿಂದ ಊಹಿಸಲಾಗದ ರೀತಿಯಲ್ಲಿ ಕಮ್​ಬ್ಯಾಕ್ ಮಾಡಿದ್ದಾರೆ. ಮಳೆ ಬಾಧಿತ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 9 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿ ಭಾರತಕ್ಕೆ (India) ಪೈಪೋಟಿ ನೀಡಲು ಸಜ್ಜಾಗಿದೆ.

ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ನಡುವಣ ಈ ಪಂದ್ಯ ಆರಂಭಕ್ಕೆ ಮಳೆ ಅಡ್ಡಿಸಿತು. ಹೀಗಾಗಿ ಪಂದ್ಯವನ್ನು 27 ರನ್​ಗಳಿಗೆ ಕಡಿತಗೊಳಿಸಿ ಆಡಿಸಲಾಯಿತು. ಅದರಂತೆ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಬಾಂಗ್ಲಾ ಮಹಿಳಾ ತಂಡ ಅತ್ಯುತ್ತಮ ಆರಂಭ ಪಡೆದುಕೊಂಡಿದ್ದು ಬಿಟ್ಟರೆ ಬಳಿಕ ದಿಢೀರ್ ಕುಸಿತ ಕಂಡಿತು. ಓಪನರ್​ಗಳಾದ ಶಮಿಮಾ ಸುಲ್ತಾನ್ ಮತ್ತು ಫರ್ಗನ ಹಖ್ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್​ಗೆ ಈ ಜೋಡಿ 9.2 ಓವರ್​ನಲ್ಲೇ 59 ರನ್​ಗಳ ಕಾಣಿಕೆ ನೀಡಿದರು.

ಶಮಿಮಾ 36 ಎಸೆತಗಳಲ್ಲಿ 33 ರನ್​ಗೆ ಔಟಾದರೆ, ನಾಯಕಿ ನಿಗರ್ ಸುಲ್ತಾನ್ ಆಟ ಕೇವಲ 11 ರನ್​ಗೆ ಕೊನೆಗೊಂಡಿತು. ರುಮಾನ ಅಹ್ಮದ್ (1) ಹಾಗೂ ಸೊಭಾನ ಮೊಸ್ಟ್ರಿ (13) ಕೂಡ ಬೇಗನೆ ನಿರ್ಗಮಿಸಿದರು. ಹೀಗೆ ಒಂದುಕಡೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗುತ್ತಿದ್ದರೆ ಇತ್ತ ಫರ್ಗನ್ ಏಕಾಂಗಿ ಹೋರಾಟ ನಡೆಸಿದರು. ಆದರೆ, ಇವರು 63 ಎಸೆತಗಳಲ್ಲಿ 52 ರನ್ ಗಳಿಸಿ ರನೌಟ್​ಗೆ ಬಲಿಯಾದರು. ಅಂತಿಮವಾಗಿ ಬಾಂಗ್ಲಾ ನಿಗದಿತ 27 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 140 ರನ್ ಕಲೆಹಾಕಿತು. ನ್ಯೂಜಿಲೆಂಡ್ ಪರ ಸಟ್ಟರ್​ವೈಡ್ 3 ವಿಕೆಟ್ ಕಿತ್ತರು.

ಇತ್ತ 141 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ನ್ಯೂಜಿಲೆಂಡ್ 7ನೇ ಓವರ್​ನಲ್ಲಿ ನಾಯಕಿ ಸೋಫಿ ಡೆವಿನ್ (14) ವಿಕೆಟ್ ಕಳೆದುಕೊಂಡಿತು. ಆದರೆ, 2ನೇ ವಿಕೆಟ್​ಗೆ ಜೊತೆಯಾದ ಸೂಝಿ ಬೇಟ್ಸ್ ಮತ್ತು ಅಮೆಲಿಯಾ ಕೇರ್ ಬೊಂಬಾಟ್ ಆಟವಾಡಿದರು. ಬೌಂಡರಿಗಳ ಮೂಲಕ ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ್ದ ಈ ಜೋಡಿ ಶತಕದ ಜೊತೆಯಾಟವಾಡಿ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟಿತು. ಕೇವಲ 20 ಓವರ್​ಗಳಲ್ಲೇ 1 ವಿಕೆಟ್ ಕಳೆದುಕೊಂಡು ನ್ಯೂಜಿಲೆಂಡ್ 144 ರನ್ ಸಿಡಿಸಿ ಜಯ ಸಾಧಿಸಿತು. ಬೇಟ್ಸ್ 68 ಎಸೆತಗಳಲ್ಲಿ 8 ಬೌಂಡರಿಯೊಂದಿಗೆ ಅಜೇಯ 79 ರನ್ ಚಚ್ಚಿದರೆ, ಕೇರ್ 37 ಎಸೆಗಳಲ್ಲಿ 47 ರನ್ ಸಿಡಿಸಿದರು.

ಸದ್ಯ ಐಸಿಸಿ ಮಹಿಳಾ ವಿಶ್ವಕಪ್​ನ ಪಾಯಿಂಟ್ ಟೇಬಲ್​ನಲ್ಲಿ ಆಡಿದ ಒಂದು ಪಂದ್ಯದಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿರುವ ಭಾರತ ನೆಟ್​ ರನ್​ರೇಟ್ ಆಧಾರದ ಮೇಲೆ 2 ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ಕೂಡ 2 ಅಂಕದೊಂದಿಗೆ 2ನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಒಂದು ಸೋಲು ಒಂದು ಗೆಲುವಿನೊಂದಿಗೆ ಮೂರನೇ ಸ್ಥಾನದಲ್ಲಿದೆ. ಆಡಿದ ಎರಡೂ ಪಂದ್ಯಗಳಲ್ಲಿ ಸೋತ ಬಾಂಗ್ಲಾದೇಶ ವನಿತೆಯರು 7ನೇ ಸ್ಥಾನದಲ್ಲಿದ್ದಾರೆ.

RCB New Captain: ಶಾಕಿಂಗ್: ಇಂದು ಆರ್​​ಸಿಬಿ ಪ್ರಕಟಿಸಲಿರುವ ಹೊಸ ನಾಯಕ ಯಾರು ಗೊತ್ತೇ?

Rohit Sharma: ನಾಯಕನಾಗಿ ಚೊಚ್ಚಲ ಟೆಸ್ಟ್ ಗೆಲುವು: ಪಂದ್ಯ ಮುಗಿದ ಬಳಿಕ ರೋಹಿತ್ ಶರ್ಮಾ ಹೇಳಿದ್ದೇನು ಗೊತ್ತೇ?

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ