AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Obed McCoy: ವಿಂಡೀಸ್ ಪಾಲಿನ ಹೀರೋನ ವಿಲನ್ ಮಾಡಿದ ಟೀಮ್ ಇಂಡಿಯಾ..!

Obed McCoy: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ದ ಅತ್ಯುತ್ತಮ ಬೌಲಿಂಗ್ ಮಾಡಿದ ದಾಖಲೆಯನ್ನು ಕೂಡ ಒಬೆಡ್ ಮೆಕಾಯ್ ಬರೆದಿದ್ದರು.

Obed McCoy: ವಿಂಡೀಸ್ ಪಾಲಿನ ಹೀರೋನ ವಿಲನ್ ಮಾಡಿದ ಟೀಮ್ ಇಂಡಿಯಾ..!
Obed McCoy
TV9 Web
| Edited By: |

Updated on: Aug 07, 2022 | 11:53 AM

Share

ಭಾರತ-ವೆಸ್ಟ್ ಇಂಡೀಸ್ (India vs West Indies) ನಡುವಣ 4ನೇ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ಟೀಮ್ ಇಂಡಿಯಾ ವಶಪಡಿಸಿಕೊಂಡಿದೆ. ವಿಶೇಷ ಎಂದರೆ ವೆಸ್ಟ್ ಇಂಡೀಸ್ ಪಾಲಿಗೆ 2ನೇ ಪಂದ್ಯದಲ್ಲಿ ಹೀರೋ ಆಗಿದ್ದ ಆಟಗಾರನೇ ನಾಲ್ಕನೇ ಪಂದ್ಯದಲ್ಲಿ ವಿಲನ್ ಆಗಿದ್ದರು. ಅಂದರೆ ಟೀಮ್ ಇಂಡಿಯಾ ವಿರುದ್ದ 2ನೇ ಪಂದ್ಯದಲ್ಲಿ ಮಾರಕ ಬೌಲಿಂಗ್ ಮೂಲಕ ಪರಾಕ್ರಮ ಮೆರೆದಿದ್ದ ಒಬೆಡ್ ಮೆಕಾಯ್​ರನ್ನು 4ನೇ ಪಂದ್ಯದಲ್ಲಿ ಭಾರತೀಯ ಬ್ಯಾಟ್ಸ್​ಮನ್​ಗಳು ಟಾರ್ಗೆಟ್ ಮಾಡಿದ್ದರು.

2ನೇ ಟಿ20 ಪಂದ್ಯದಲ್ಲಿ ಒಬೆಡ್ ಮೆಕಾಯ್ 4 ಓವರ್​ಗಳಲ್ಲಿ 1 ಮೇಡನ್ ಹಾಗೂ 17 ರನ್​ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಮೂಲಕ ವಿಂಡೀಸ್ ತಂಡಕ್ಕೆ ಜಯ ತಂದುಕೊಟ್ಟಿದ್ದರು. ಅಷ್ಟೇ ಅಲ್ಲದೆ  ಮಾರಕ ಬೌಲಿಂಗ್ ಮೂಲಕ 25 ವರ್ಷದ  ಮೆಕಾಯ್ ವಿಶೇಷ ದಾಖಲೆಯೊಂದನ್ನು ಕೂಡ ನಿರ್ಮಿಸಿದ್ದರು. ಅದರಲ್ಲೂ ಟೀಮ್ ಇಂಡಿಯಾ ವಿರುದ್ದ ಟಿ20ಯಲ್ಲಿ 6 ಪಡೆದ ಮೊದಲ ವಿಂಡೀಸ್ ಬೌಲರ್ ಎನಿಸಿಕೊಂಡಿದ್ದರು.

ಇನ್ನು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ದ ಅತ್ಯುತ್ತಮ ಬೌಲಿಂಗ್ ಮಾಡಿದ ದಾಖಲೆಯನ್ನು ಕೂಡ ಒಬೆಡ್ ಮೆಕಾಯ್ ಬರೆದಿದ್ದರು. ಕೇವಲ 17 ರನ್​ ನೀಡುವ ಮೂಲಕ 6 ವಿಕೆಟ್ ಕಬಳಿಸಿ ಮೆಕಾಯ್ ಭಾರತ ತಂಡದ ವಿರುದ್ದ ಹೊಸ ಇತಿಹಾಸ ನಿರ್ಮಿಸಿದ್ದರು. ಆದರೆ ಈ ದಾಖಲೆ ನಿರ್ಮಾಣವಾಗಿ ದಿನಗಳು ಕಳೆಯುತ್ತಿದ್ದಂತೆ ಇದೀಗ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳು ಮೆಕಾಯ್ ವಿರುದ್ದ ಸೇಡು ತೀರಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಏಕೆಂದರೆ 4ನೇ ಟಿ20 ಪಂದ್ಯದಲ್ಲಿ ಒಡೆಬ್ ಮೆಕಾಯ್ ನೀಡಿರುವುದು 4 ಓವರ್​ಗಳಲ್ಲಿ ಬರೋಬ್ಬರಿ 66 ರನ್​ಗಳು. ಅಂದರೆ ವೆಸ್ಟ್ ಇಂಡೀಸ್ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ನೀಡಿದ ಬೌಲರ್ ಎಂಬ ದಾಖಲೆ ಇದೀಗ ಮೆಕಾಯ್ ಪಾಲಾಗಿದೆ. ಈ ಪಂದ್ಯದಲ್ಲಿ ಆರಂಭದಿಂದಲೇ ಮೆಕಾಯ್​ರನ್ನು ಟಾರ್ಗೆಟ್ ಮಾಡಿದ್ದ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳು 24 ಎಸೆತಗಳಲ್ಲಿ 66 ರನ್ ಚಚ್ಚಿದರು. ಈ ಮೂಲಕ ಮೆಕಾಯ್ ಹೆಸರಿನಲ್ಲಿ ಕೆಟ್ಟ ದಾಖಲೆಯೊಂದನ್ನು ನಿರ್ಮಿಸಿದರು.

ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಕೀಮೊ ಪೌಲ್ ಹೆಸರಿನಲ್ಲಿತ್ತು. ಪೌಲ್ 2020 ರಲ್ಲಿ ನ್ಯೂಜಿಲೆಂಡ್ ವಿರುದ್ದ 4 ಓವರ್​ಗಳಲ್ಲಿ 64 ರನ್​ ನೀಡಿದ್ದರು. ಇದೀಗ 4 ಓವರ್​ಗಳಲ್ಲಿ 66 ರನ್​ ಬಿಟ್ಟು ಕೊಡುವ ಮೂಲಕ ಒಬೆಡ್ ಮೆಕಾಯ್ ಅತ್ಯಂತ ಕೆಟ್ಟ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಒಟ್ಟಿನಲ್ಲಿ 2ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹೀರೋ ಎನಿಸಿಕೊಂಡ ಒಬೆಡ್ ಮೆಕಾಯ್, ದಿನಗಳ ಅಂತರದಲ್ಲಿ ವಿಂಡೀಸ್​ ಪರ ಅತ್ಯಂತ ದುಬಾರಿ ಟಿ20 ಬೌಲರ್ ಎಂಬ ಕೆಟ್ಟ ದಾಖಲೆಯನ್ನು ನಿರ್ಮಿಸಿದ್ದಾರೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು