ಅಕ್ಟೋಬರ್ 6 ರಂದು 2 ಪಂದ್ಯಗಳನ್ನಾಡಲಿದೆ ಟೀಂ ಇಂಡಿಯಾ
ಅಕ್ಟೋಬರ್ 6 ರಂದು ಭಾರತದ ಎರಡು ಪುರುಷರ ಕ್ರಿಕೆಟ್ ತಂಡಗಳು ಏಕಕಾಲದಲ್ಲಿ ಪಂದ್ಯಗಳನ್ನಾಡಲಿವೆ. ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತ T20 ತಂಡ ವೆಸ್ಟ್ ಇಂಡೀಸ್ ವಿರುದ್ಧ ಮೊದಲ T20 ಪಂದ್ಯವನ್ನಾಡಿದರೆ, ರುತುರಾಜ್ ಗಾಯಕ್ವಾಡ್ ನೇತೃತ್ವದ ಭಾರತ ಎ ತಂಡ ಆಸ್ಟ್ರೇಲಿಯಾ ಎ ವಿರುದ್ಧ ಅನಧಿಕೃತ ಏಕದಿನ ಸರಣಿಯ ಮೊದಲ ಪಂದ್ಯವನ್ನು ಆಡಲಿದೆ. ಅಭಿಮಾನಿಗಳು ಒಂದೇ ದಿನ ಎರಡು ವಿಭಿನ್ನ ಮಾದರಿಯ ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸಬಹುದು.

ಅಕ್ಟೋಬರ್ 6 ರಂದು ಅಂದರೆ ಒಂದೇ ದಿನ ಭಾರತದ ಎರಡು ಪುರುಷರ ತಂಡಗಳು ಪಂದ್ಯಗಳನ್ನಾಡಲಿವೆ. ಒಂದೆಡೆ ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತ ಟಿ20 ತಂಡ, ವೆಸ್ಟ್ ಇಂಡೀಸ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನಾಡಿದರೆ, ಇನ್ನೊಂದೆಡೆ ರುತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ಎ ತಂಡ, ಆಸ್ಟ್ರೇಲಿಯಾ ಎ ತಂಡದ ವಿರುದ್ಧ ಮೂರು ಪಂದ್ಯಗಳ ಅನಧಿಕೃತ ಏಕದಿನ ಸರಣಿಯ ಮೊದಲ ಪಂದ್ಯವನ್ನಾಡಲಿದೆ. ಹೀಗಾಗಿ ಟೀಂ ಇಂಡಿಯಾ ಅಭಿಮಾನಿಗಳಿಗೆ ಒಂದೇ ದಿನ ಎರಡು ವಿಭಿನ್ನ ಮಾದರಿಯ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುವ ಅವಕಾಶ ಸಿಕ್ಕಿದೆ. ಹಾಗಿದ್ದರೆ, ಈ ಎರಡು ಪಂದ್ಯಗಳು ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭವಾಗಲಿವೆ. ಎರಡು ಪಂದ್ಯಗಳಿಗೆ ತಂಡಗಳು ಹೇಗಿವೆ ಎಂಬುದನ್ನು ನೋಡುವುದಾದರೆ..
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯದ ವಿವರ ಹೀಗಿದೆ
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯ ಅಕ್ಟೋಬರ್ 6 ರಂದು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ಸಂಜೆ 7:00 ಗಂಟೆಗೆ ಆರಂಭವಾಗಲಿದ್ದು, ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ಟಿವಿಯಲ್ಲಿ ನೇರಪ್ರಸಾರ ವೀಕ್ಷಿಸಬಹುದು.
ಉಭಯ ತಂಡಗಳು
ಭಾರತದ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ಮಯಾಂಕ್ ಯಾದವ್, ನಮನ್ ಧೀರ್.
ವೆಸ್ಟ್ ಇಂಡೀಸ್ ತಂಡ: ಶಾಯ್ ಹೋಪ್ (ನಾಯಕ), ಜ್ಯುವೆಲ್ ಆಂಡ್ರ್ಯೂ, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಶಿಮ್ರಾನ್ ಹೆಟ್ಮೆಯರ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಗುಡಾಕೇಶ್ ಮೋಟಿ, ಕೀಮೋ ಪಾಲ್, ಕಾಮಿಲ್ ಪೂರನ್, ರೋವ್‌ಮನ್ ಪೊವೆಲ್, ಶೆರ್ಫೇನ್ ರುದರ್ಫೋರ್ಡ್, ಕ್ವೆಂಟಿನ್ ಸ್ಯಾಂಪ್ಸನ್, ರೊಮಾರಿಯೋ ಶೆಫರ್ಡ್, ಶಮರ್ ಸ್ಪ್ರಿಂಗರ್.
ಭಾರತ ಎ ಹಾಗೂ ಆಸ್ಟ್ರೇಲಿಯಾ ಎ ನಡುವಿನ ಮೊದಲ ಏಕದಿನ ಪಂದ್ಯದ ವಿವರ
ಭಾರತ ಎ ಹಾಗೂ ಆಸ್ಟ್ರೇಲಿಯಾ ಎ ನಡುವಿನ ಮೊದಲ ಏಕದಿನ ಪಂದ್ಯ ಪುದುಚೇರಿಯಲ್ಲಿ ನಡೆಯಲಿದ್ದು, ಬೆಳಿಗ್ಗೆ 9:30 ಕ್ಕೆ ಆರಂಭವಾಗಲಿದೆ. ಈ ಪಂದ್ಯವನ್ನು ಸದ್ಯದ ಮಾಹಿತಿ ಪ್ರಕಾರ, ಜಿಯೋಹಾಟ್ಸ್ಟಾರ್ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.
ಉಭಯ ತಂಡಗಳು
ಭಾರತ ಎ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ದೇವದತ್ ಪಡಿಕ್ಕಲ್ (ಉಪನಾಯಕ), ಪ್ರಿಯಾಂಶ್ ಆರ್ಯ, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್), ರಜತ್ ಪಾಟಿದಾರ್, ಪ್ರಭುಸಿಮ್ರಾನ್ ಸಿಂಗ್, ಬಿ ಸಾಯಿ ಸುದರ್ಶನ್, ಅನುಕೂಲ್ ರಾಯ್, ಅರ್ಶಿನ್ ಕುಲಕರ್ಣಿ, ನಿಶಾಂತ್ ಸಿಂಧು, ಸೂರ್ಯಾಂಶ್ ಶೆಡ್ಗೆ, ಅರ್ಷದ್ ಖಾನ್, ಗುರ್ಜಪ್ನೀತ್ ಸಿಂಗ್, ವಿಪ್ರಜ್ ನಿಗಮ್, ಯಶ್ ಠಾಕೂರ್.
ಆಸ್ಟ್ರೇಲಿಯಾ ಎ ತಂಡ: ಮಹ್ಲಿ ಬಿಯರ್ಡ್‌ಮನ್, ನಿಖಿಲ್ ಚೌಧರಿ, ಬೆನ್ ಡ್ವಾರ್ಶುಯಿಸ್, ಸ್ಪೆನ್ಸರ್ ಜಾನ್ಸನ್, ಸ್ಯಾಮ್ ಕಾನ್‌ಸ್ಟಾಸ್, ನಾಥನ್ ಮೆಕ್‌ಸ್ವೀನಿ, ರೈಲಿ ಮೆರೆಡಿತ್, ಟಾಡ್ ಮರ್ಫಿ, ಮಿಚ್ ಓವನ್, ಜೋಶ್ ಫಿಲಿಪ್ (ವಿಕೆಟ್ ಕೀಪರ್), ತನ್ವೀರ್ ಸಂಘ, ಲಿಯಾಮ್ ಸ್ಕಾಟ್, ಲಾಚ್ಲಾನ್ ಶಾ, ವಿಲ್ ಸದರ್‌ಲ್ಯಾಂಡ್.




