ಏಕದಿನ ರ‍್ಯಾಂಕಿಂಗ್ ಪ್ರಕಟ: ಟಾಪ್-3 ನಲ್ಲಿ ಕಾಣಿಸಿಕೊಂಡ ಶುಭ್​ಮನ್ ಗಿಲ್

ODI Player Rankings: ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್​ ಬಳಿಕ ಏಷ್ಯನ್ ದೇಶಗಳ ಆಟಗಾರರ ಶ್ರೇಯಾಂಕದಲ್ಲಿ ಭಾರೀ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಏಕೆಂದರೆ ಮುಂಬರುವ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಆಟಗಾರ ಶುಭ್​ಮನ್ ಗಿಲ್ ಹಾಗೂ ಪಾಕ್ ಬ್ಯಾಟರ್ ಇಮಾಮ್ ಉಲ್ ಹಕ್ ಮಿಂಚಿದರೆ ಉತ್ತಮ ರೇಟಿಂಗ್​ನೊಂದಿಗೆ 2ನೇ ಮತ್ತು 3ನೇ ಸ್ಥಾನಕ್ಕೇರಬಹುದು.

ಏಕದಿನ ರ‍್ಯಾಂಕಿಂಗ್ ಪ್ರಕಟ: ಟಾಪ್-3 ನಲ್ಲಿ ಕಾಣಿಸಿಕೊಂಡ ಶುಭ್​ಮನ್ ಗಿಲ್
Shubman Gill-Babar Azam
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 06, 2023 | 6:17 PM

ICC ODI Rankings: ಐಸಿಸಿ ಏಕದಿನ ಬ್ಯಾಟರ್​ಗಳ ಹೊಸ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ನೂತನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ. ಏಷ್ಯಾಕಪ್​ನಲ್ಲಿ ನೇಪಾಳ ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ಬಾಬರ್ ಇದೀಗ ತಮ್ಮ ರೇಟಿಂಗ್ ಅನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದಾರೆ. ಇನ್ನು ಟೀಮ್ ಇಂಡಿಯಾದ ಯುವ ಬ್ಯಾಟರ್ ಶುಭ್​ಮನ್ ಗಿಲ್ ಈ ಬಾರಿ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ನೇಪಾಳ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಅಬ್ಬರಿಸಿದ್ದ ಶುಭ್​ಮನ್ ಗಿಲ್ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಒಂದು ಸ್ಥಾನ ಜಿಗಿತ ಕಂಡಿದ್ದಾರೆ. ಹಾಗೆಯೇ ಶುಭ್​ಮನ್​ ಗಿಲ್ ಅವರನ್ನು ಹೊರತುಪಡಿಸಿ ಭಾರತದ ಬೇರೆ ಯಾವುದೇ ಬ್ಯಾಟರ್ ಟಾಪ್​-5 ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಇದಾಗ್ಯೂ ಅಗ್ರ ಹತ್ತರಲ್ಲಿ ವಿರಾಟ್ ಕೊಹ್ಲಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಐಸಿಸಿ ಏಕದಿನ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿ:

  1. ಬಾಬರ್ ಆಝಂ (ಪಾಕಿಸ್ತಾನ್)- 882 ರೇಟಿಂಗ್
  2. ರಸ್ಸಿ ವಂಡೆರ್ ಡುಸ್ಸೆನ್ (ಸೌತ್ ಆಫ್ರಿಕಾ)- 777 ರೇಟಿಂಗ್
  3. ಶುಭ್​ಮನ್ ಗಿಲ್ (ಭಾರತ)- 750 ರೇಟಿಂಗ್
  4. ಇಮಾಮ್ ಉಲ್ ಹಕ್ (ಪಾಕಿಸ್ತಾನ್)- 732 ರೇಟಿಂಗ್
  5. ಹ್ಯಾರಿ ಟೆಕ್ಟರ್ (ಐರ್ಲೆಂಡ್)- 726 ರೇಟಿಂಗ್
  6. ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)- 726 ರೇಟಿಂಗ್
  7. ಫಖರ್ ಝಮಾನ್ (ಪಾಕಿಸ್ತಾನ್)- 721 ರೇಟಿಂಗ್
  8. ಕ್ವಿಂಟನ್ ಡಿಕಾಕ್ (ಸೌತ್ ಆಫ್ರಿಕಾ)- 718 ರೇಟಿಂಗ್
  9. ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 702 ರೇಟಿಂಗ್
  10. ವಿರಾಟ್ ಕೊಹ್ಲಿ (ಭಾರತ)- 695 ರೇಟಿಂಗ್

ಐಸಿಸಿ ಬೌಲರ್​ಗಳ ನೂತನ ಟಾಪ್-10 ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಏಕೈಕ ಬೌಲರ್ ಮಾತ್ರ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅಗ್ರಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 8ನೇ ಸ್ಥಾನ ಅಲಂಕರಿಸಿದ್ದಾರೆ.

ಐಸಿಸಿ ಏಕದಿನ ಬೌಲರ್​ಗಳ ನೂತನ ಶ್ರೇಯಾಂಕ ಪಟ್ಟಿ:

  1. ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)- 705 ರೇಟಿಂಗ್.
  2. ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ)- 686 ರೇಟಿಂಗ್
  3. ಮ್ಯಾಟ್ ಹೆನ್ರಿ (ನ್ಯೂಝಿಲೆಂಡ್)- 667 ರೇಟಿಂಗ್
  4. ಟ್ರೆಂಟ್ ಬೌಲ್ಟ್ (ನ್ಯೂಝಿಲೆಂಡ್)- 660 ರೇಟಿಂಗ್
  5. ಶಾಹೀನ್ ಅಫ್ರಿದಿ (ಪಾಕಿಸ್ತಾನ್)- 659 ರೇಟಿಂಗ್
  6. ಮುಜೀಬ್ ಉರ್ ರೆಹಮಾನ್ (ಅಫ್ಘಾನಿಸ್ತಾನ್)- 657 ರೇಟಿಂಗ್
  7. ರಶೀದ್ ಖಾನ್ (ಅಫ್ಘಾನಿಸ್ತಾನ್)- 655 ರೇಟಿಂಗ್
  8. ಮೊಹಮ್ಮದ್ ಸಿರಾಜ್ (ಭಾರತ)- 652 ರೇಟಿಂಗ್
  9. ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 652 ರೇಟಿಂಗ್
  10. ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ್)- 624 ರೇಟಿಂಗ್.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ಏಷ್ಯಾಕಪ್​ ಬಳಿಕ ಶ್ರೇಯಾಂಕದಲ್ಲಿ ಬದಲಾವಣೆ:

ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್​ ಬಳಿಕ ಏಷ್ಯನ್ ದೇಶಗಳ ಆಟಗಾರರ ಶ್ರೇಯಾಂಕದಲ್ಲಿ ಭಾರೀ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಏಕೆಂದರೆ ಮುಂಬರುವ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಆಟಗಾರ ಶುಭ್​ಮನ್ ಗಿಲ್ ಹಾಗೂ ಪಾಕ್ ಬ್ಯಾಟರ್ ಇಮಾಮ್ ಉಲ್ ಹಕ್ ಮಿಂಚಿದರೆ ಉತ್ತಮ ರೇಟಿಂಗ್​ನೊಂದಿಗೆ 2ನೇ ಮತ್ತು 3ನೇ ಸ್ಥಾನಕ್ಕೇರಬಹುದು. ಹೀಗಾಗಿ ಏಷ್ಯಾಕಪ್ ಮುಕ್ತಾಯದ ಬೆನ್ನಲ್ಲೇ ಶ್ರೇಯಾಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆ  ಕಂಡು ಬರುವ ಸಾಧ್ಯತೆಯಿದೆ.