ICC ODI Rankings: ಐಸಿಸಿ ಏಕದಿನ ಬ್ಯಾಟರ್ಗಳ ಹೊಸ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ನೂತನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ. ಏಷ್ಯಾಕಪ್ನಲ್ಲಿ ನೇಪಾಳ ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ಬಾಬರ್ ಇದೀಗ ತಮ್ಮ ರೇಟಿಂಗ್ ಅನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದಾರೆ. ಇನ್ನು ಟೀಮ್ ಇಂಡಿಯಾದ ಯುವ ಬ್ಯಾಟರ್ ಶುಭ್ಮನ್ ಗಿಲ್ ಈ ಬಾರಿ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ನೇಪಾಳ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಅಬ್ಬರಿಸಿದ್ದ ಶುಭ್ಮನ್ ಗಿಲ್ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಒಂದು ಸ್ಥಾನ ಜಿಗಿತ ಕಂಡಿದ್ದಾರೆ. ಹಾಗೆಯೇ ಶುಭ್ಮನ್ ಗಿಲ್ ಅವರನ್ನು ಹೊರತುಪಡಿಸಿ ಭಾರತದ ಬೇರೆ ಯಾವುದೇ ಬ್ಯಾಟರ್ ಟಾಪ್-5 ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಇದಾಗ್ಯೂ ಅಗ್ರ ಹತ್ತರಲ್ಲಿ ವಿರಾಟ್ ಕೊಹ್ಲಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ಐಸಿಸಿ ಏಕದಿನ ಬ್ಯಾಟರ್ಗಳ ನೂತನ ಶ್ರೇಯಾಂಕ ಪಟ್ಟಿ:
ಐಸಿಸಿ ಬೌಲರ್ಗಳ ನೂತನ ಟಾಪ್-10 ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಏಕೈಕ ಬೌಲರ್ ಮಾತ್ರ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ವುಡ್ ಅಗ್ರಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 8ನೇ ಸ್ಥಾನ ಅಲಂಕರಿಸಿದ್ದಾರೆ.
ಐಸಿಸಿ ಏಕದಿನ ಬೌಲರ್ಗಳ ನೂತನ ಶ್ರೇಯಾಂಕ ಪಟ್ಟಿ:
ಇದನ್ನೂ ಓದಿ: ಏಷ್ಯಾಕಪ್ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1
ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್ ಬಳಿಕ ಏಷ್ಯನ್ ದೇಶಗಳ ಆಟಗಾರರ ಶ್ರೇಯಾಂಕದಲ್ಲಿ ಭಾರೀ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಏಕೆಂದರೆ ಮುಂಬರುವ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಆಟಗಾರ ಶುಭ್ಮನ್ ಗಿಲ್ ಹಾಗೂ ಪಾಕ್ ಬ್ಯಾಟರ್ ಇಮಾಮ್ ಉಲ್ ಹಕ್ ಮಿಂಚಿದರೆ ಉತ್ತಮ ರೇಟಿಂಗ್ನೊಂದಿಗೆ 2ನೇ ಮತ್ತು 3ನೇ ಸ್ಥಾನಕ್ಕೇರಬಹುದು. ಹೀಗಾಗಿ ಏಷ್ಯಾಕಪ್ ಮುಕ್ತಾಯದ ಬೆನ್ನಲ್ಲೇ ಶ್ರೇಯಾಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.